ಕೂಡಿಗೆ, ಜು. ೧೨: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವತಿಯಿಂದ ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಣೆ ಮಾಡಲಾಯಿತು. ಮೊದಲ ಹಂತದಲ್ಲಿ ಗುಮ್ಮನಕೊಲ್ಲಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಚೆಲುವರಾಜ್, ಉಪಾಧ್ಯಕ್ಷೆ ಜಯಮ್ಮ, ಸದಸ್ಯರಾದ ಆಸಿಫ್, ಮಣಿ, ಗಣೇಶ್, ಹರಿಣಿ ಪ್ರಭಾಕರ್, ಸಂಗೀತ, ಜಯಲಕ್ಷಿö್ಮ, ಅಭಿವೃದ್ಧಿ ಅಧಿಕಾರಿ ಸುಮೇಶ್ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.