ಮಡಿಕೇರಿ, ಜು. ೧೨: ಜುಲೈ ತಿಂಗಳಲ್ಲಿ ನಿರೀಕ್ಷೆಗಿಂತ ಹೆಚ್ಚು ಮಳೆಯಾಗಿದೆ. ಜನ ಜೀವನ ಅಸ್ತ ವ್ಯಸ್ತವಾಗಿದೆ. ಭೂಕುಸಿತ, ಮನೆ ಕುಸಿತ, ರಸ್ತೆ, ವಿದ್ಯುತ್ ಸಂಪರ್ಕಗಳಿಗೆ ಹಾನಿಯಾಗಿವೆ. ನದಿಗಳು ಉಕ್ಕಿ ಹರಿಯುತ್ತಿವೆ, ನದಿ ಪಾತ್ರಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ. ಸುಮಾರು ಶೇಕಡವಾರು ೧೧೪ರಷ್ಟು ಮಳೆಯಾಗಿದೆ. ಇದು ಕೇವಲ ಒಂದು ವಾರ- ಹತ್ತು ದಿನಗಳ ಅಂತರದಲ್ಲಿ ಹೆಚ್ಚು ಮಳೆಯಾಗಿರುವದರಿಂದ ಬಹಳಷ್ಟು ತೊಂದರೆ ಅನುಭವಿಸಬೇಕಾಯಿತು. ಎಲ್ಲ ಸಮಸ್ಯೆಗಳನ್ನು ನಿಭಾಯಿಸಲು ಸರಕಾರ ಬದ್ಧವಾಗಿದೆ. ಈ ಬಗ್ಗೆ ಜನತೆ ಚಿಂತೆ ಮಾಡಬೇಕಾಗಿಲ್ಲವೆಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸಚಿವರುಗಳು, ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ಸಂತ್ರಸ್ತರಿಗೆ ಪರಿಹಾರ ವಿತರಣೆ ಮಾಡಿದ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಅನುಭವಿಸಬೇಕಾಯಿತು. ಎಲ್ಲ ಸಮಸ್ಯೆಗಳನ್ನು ನಿಭಾಯಿಸಲು ಸರಕಾರ ಬದ್ಧವಾಗಿದೆ. ಈ ಬಗ್ಗೆ ಜನತೆ ಚಿಂತೆ ಮಾಡಬೇಕಾಗಿಲ್ಲವೆಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸಚಿವರುಗಳು, ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ಸಂತ್ರಸ್ತರಿಗೆ ಪರಿಹಾರ ವಿತರಣೆ ಮಾಡಿದ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಪರಿಹಾರ ವಿತರಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಂಬAಧಿಕರ ಮನೆಯಲ್ಲಿರುವವರಿಗೂ ಪಡಿತರ

ಜಿಲ್ಲೆಯಲ್ಲಿ ಅಪಾಯದಲ್ಲಿದ್ದ ಕೆಲವು ಮನೆಗಳನ್ನು ಸ್ಥಳಾಂತರಿಸಲಾಗಿದ್ದು, ಕೆಲವರು ಕಾಳಜಿ ಕೇಂದ್ರದಲ್ಲಿದ್ದಾರೆ. ಇನ್ನೂ ಕೆಲವರು ಸಂಬAಧಿಕರ ಮನೆಗಳಲ್ಲಿದ್ದಾರೆ. ಕಾಳಜಿ ಕೇಂದ್ರಗಳಲ್ಲಿರುವವರಿಗೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಸಂಬAಧಿಕರ ಮನೆಗಳಲ್ಲಿರುವವರಿಗೂ ಕೂಡ ಅಕ್ಕಿ, ಎಣ್ಣೆ, ಬೇಳೆ, ವಿತರಣೆಯಾಗಬೇಕು ಎಂದು ಸೂಚನೆ ನೀಡಲಾಗಿದೆ. ಕಾಳಜಿ ಕೇಂದ್ರದಿAದ ಮನೆಗೆ ತೆರಳುವ ಸಂದರ್ಭದಲ್ಲಿಯೂ ಅವರಿಗೆ ಪಡಿತರವನ್ನು ಕೊಟ್ಟು ಕಳುಹಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸೆಸ್ಮಿಕ್ ಅಧ್ಯಯಕ್ಕೆ ಕ್ರಮ

ಜಿಲ್ಲೆಯ ಸೆಸ್ಮಿಕ್ ವಲಯದಲ್ಲಿ ಪದೇ ಪದೇ ಭೂ ಕುಸಿತ ಹಾಗೂ ಭೂ ಕಂಪನದ ಸೂಚನೆಗಳು ಬರುತ್ತಿವೆ. ಈ ಸಂಬAಧ ಸೆಸ್ಮಿಕ್ ಅಧ್ಯಯನ ಮಾಡಲು ರಾಷ್ಟçದ ಪ್ರಮುಖ ಸಂಸ್ಥೆಗಳಿಗೆ ಪತ್ರ ಬರೆದಿದ್ದು, ಮುಂದಿನ ವಾರ ನ್ಯಾಷನಲ್ ಜಿಯೋಗ್ರಾಫಿಕ್ ಸಂಸ್ಥೆ, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮಟೀರಿಯಲ್ ಹಾಗೂ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ, ಬೆಂಗಳೂರು ಹಾಗೂ ಮೈಸೂರು ವಿವಿಗಳ ಜಿಯೋಲಾಜಿಕಲ್ ವಿಭಾಗದವರು ಈ ಬಗ್ಗೆ ಅಧ್ಯಯನ ಕೈಗೊಳ್ಳಲಿದ್ದಾರೆ. ಅದರ ಆಧಾರದ ಮೇಲೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಸೆಸ್ಮಿಕ್ ವಲಯ ಮುಂದುವರೆಯುವಲ್ಲಿ ಜನವಸತಿ ಆಗದಂತೆ ಕ್ರಮ ವಹಿಸಲಾಗುವುದು. ಕೆಲವು ಕಡೆ ಮನೆಗಳಿಗೆ ರೆಟ್ರೋ ಫಿಟ್ಟಿಂಗ್ ಮಾಡಿ ರಕ್ಷಣೆ ನೀಡುವ ವ್ಯವಸ್ಥೆಯನ್ನೂ ಮಾಡಲಾಗುವುದು ಎಂದರು.

ಭೂಕುಸಿತವಾಗಿರುವ ಸ್ಥಳಗಳ ಬಗ್ಗೆ ಅಮೃತಾ ವಿಶ್ವವಿದ್ಯಾಲಯದವರು ಅಧ್ಯಯನ ಕೈಗೊಂಡು ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ. ಭೂಕುಸಿತವನ್ನು ತಡೆಗಟ್ಟಲು ಹಲವಾರು ತಂತ್ರಜ್ಞಾನವಿದೆ. ರಿವಿಟ್ಟಿಂಗ್, ತಡೆಗೋಡೆ ಕಟ್ಟುವಂತಹ ತಂತ್ರಜ್ಞಾನವಿದೆ. ಯಾವುದನ್ನು ಬಳಸಬೇಕೆಂದು ಸಲಹೆ ಮಾಡುತ್ತಾರೋ ಅದನ್ನು ಕೂಡಲೇ ಪ್ರಾರಂಭಿಸಿ ಮುಂದಿನ ಮಳೆಗಾಲದಲ್ಲಿ ಯಾವುದೇ ತೊಂದರೆಯಾಗದAತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

(ಮೊದಲ ಪುಟದಿಂದ)

ಟಾಸ್ಕ್ ಫೋರ್ಸ್ ರಚನೆ

ಗ್ರಾಮೀಣ ಪ್ರದೇಶದಲ್ಲಿ ಮಳೆಗಾಲದಲ್ಲಿ ತೊಂದರೆ ಆಗದಂತೆ ಗಮನಹರಿಸುವಂತೆ ಸೂಚನೆ ನೀಡಲಾಗಿದೆ. ಟಾಸ್ಕ್ ಫೋರ್ಸ್ ಮಾಡಬೇಕು. ಕೂಡಲೇ ಅಧಿಕಾರಿಗಳು ಎಚ್ಚೆತ್ತು ಕೆಲಸ ಮಾಡಬೇಕು. ವಿದ್ಯುತ್ ಸಂಪರ್ಕಕ್ಕೆ ಸಂಬAಧಿಸಿದAತೆ ವಿಶೇಷ ಕಂಟ್ರೋಲ್ ರೂಂನ್ನು ಸ್ಥಾಪಿಸಲು ಆದೇಶಿಸಲಾಗಿದೆ. ಜಿಲ್ಲಾಧಿಕಾರಿಗಳ ಬಳಿ ಸಾಕಷ್ಟು ಅನುದಾನ ಲಭ್ಯವಿದ್ದು, ಅಗತ್ಯ ಬಿದ್ದರೆ ಇನ್ನಷ್ಟು ಅನುದಾನವನ್ನು ಒದಗಿಸಲಾಗುವುದು ಎಂದರು. ಇದೂ ಅಲ್ಲದೆ, ಜಿಲ್ಲೆಯ ತಾಲೂಕು ತಹಶೀಲ್ದಾರರುಗಳ ಬಳಿ ತುರ್ತು ಪರಿಹಾರಕ್ಕಾಗಿ ತಲಾ ರೂ.೨೫ ಲಕ್ಷ ಹಣ ಇದೆ, ಪ್ರತಿ ಗ್ರಾ.ಪಂ.ಗಳಿಗೆ ರೂ.೫೦ಸಾವಿರ ನೀಡಲಾಗಿದೆ. ತುರ್ತು ಕಾರ್ಯಗಳಿಗೆ ಇದನ್ನು ಬಳಸಿಕೊಳ್ಳಬಹುದೆಂದು ಹೇಳಿದರು.

ಹೂಳು ತೆಗೆಯಲು ಕ್ರಮ

ಕಾವೇರಿ ಮತ್ತು ಹಾರಂಗಿ ನದಿ ಪಾತ್ರದಲ್ಲಿ ಹೂಳು ತುಂಬಿದೆ. ಅದರ ಜೊತೆಗೆ ನೀರಿನ ಹರಿವಿನಿಂದ ನೀರು ಹೊರಗೆ ಹರಿಯುತ್ತಿದೆ. ಇದನ್ನು ತಪ್ಪಿಸಲು ಹಾರಂಗಿ ಜಲಾಶಯದ ಹಿಂದಿನ ಪ್ರದೇಶದಲ್ಲಿ ಹೂಳು ತೆಗೆಯಲು ಈಗಾಗಲೇ ೪೦ ಕೋಟಿ ರೂ.ಗಳ ಮಂಜೂರಾತಿ ನೀಡಿದ್ದು, ಕೆಲಸ ಕೂಡಲೇ ಪ್ರಾರಂಭವಾಗುತ್ತದೆ. ಹೂಳು, ಮಣ್ಣು ತೆಗೆಯುವುದು ಹಾಗೂ ಗೋಡೆ ನಿರ್ಮಾಣ ಕಾರ್ಯವನ್ನು ಇದು ಒಳಗೊಂಡಿದೆ. ಕಾವೇರಿ ನದಿಯಲ್ಲಿನ ಹೂಳು ತೆಗೆಯಲು ಕಾವೇರಿ ನೀರಾವರಿ ನಿಗಮಕ್ಕೆ ಸೂಚಿಸಲಾಗಿದೆ. ನೀರು ನಿಲ್ಲದಂತೆ ಮಾಡಲು ಕ್ರಮ ಕೈಗೊಳ್ಳಲು ಹಾಗೂ ಮರದ ದಿಮ್ಮಿಗಳನ್ನು ಕೂಡಲೇ ತೆರವು ಮಾಡುವಂತೆ ಅರಣ್ಯ ಇಲಾಖೆಗೆ ಸೂಚಿಸಲಾಗಿದೆ. ಕಳೆದ ಬಾರಿಯ ದಿಮ್ಮಿಗಳು ಹಾಗೆಯೇ ಉಳಿದುಕೊಂಡಿರುವ ಬಗ್ಗೆ ದೂರುಗಳು ಬಂದಿದ್ದು, ನದಿ ಪಾತ್ರದಲ್ಲಿ ಯಾವುದೇ ಮರದ ದಿಮ್ಮಿಗಳು ಇರಬಾರದು ಎಂದು ಸೂಚಿಸಲಾಗಿದೆ ಎಂದರು.

ಮನೆಗಳ ಹಸ್ತಾಂತರಕ್ಕೆ ಸೂಚನೆ

೨೦೧೮-೧೯ರಲ್ಲಿ ಮಹಾಮಳೆಯಿಂದ ತೊಂದರೆಗೆ ಸಿಲುಕಿದ್ದ ಹಾಗೂ ಮನೆ ಕಳೆದುಕೊಂಡಿದ್ದ ಕುಟುಂಬಗಳಿಗೆ ವಿತರಿಸಲು ಬಾಕಿ ಇರುವ ಮನೆಗಳನ್ನು ಒಂದೂವರೆ ತಿಂಗಳೊಳಗೆ ಪೂರ್ಣಗೊಳಿಸಿ ಹಸ್ತಾಂತರ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ೨೦೧೮-೧೯ರಲ್ಲಿ ನಿರ್ಮಿಸಬೇಕಿದ್ದ ಮನೆಗಳ ಪೈಕಿ ೮೩೫ ಮನೆಗಳನ್ನು ಈಗಾಗಲೇ ನಿರ್ಮಾಣ ಮಾಡಿ ಹಸ್ತಾಂತರ ಮಾಡಲಾಗಿದೆ. ಇದರಲ್ಲಿ ಕೆಲವು ಮನೆಗಳು ಮಾತ್ರ ಬಾಕಿ ಇದ್ದು, ಬಹುತೇಕ ಎಲ್ಲಾ ಮನೆಗಳಲ್ಲಿಯೂ ಜನ ವಾಸಿಸುತ್ತಿದ್ದಾರೆ. ಇನ್ಫೋಸಿಸ್ ವತಿಯಿಂದ ನಿರ್ಮಿಸುತ್ತಿರುವ ೧೯೫ ಮನೆಗಳನ್ನೂ ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಿ ಹಸ್ತಾಂತರ ಮಾಡಲಾಗುವುದು ಎಂದರು. ಗ್ರಾಮೀಣ ಹಾಗೂ ಮುಖ್ಯ ರಸ್ತೆಗಳಿಗೆ ಅಂದಾಜು ಪಟ್ಟಿ ಸಿದ್ಧಪಡಿಸಲು ಸೂಚಿಸಲಾಗಿದೆ. ಮೊದಲ ಹಂತದಲ್ಲಿ ತಕ್ಷಣ ದುರಸ್ತಿ ಮಾಡುವುದು, ಎರಡನೇ ಹಂತದಲ್ಲಿ ಹಾಳಾಗಿರುವ ರಸ್ತೆಗಳನ್ನು ಪುನರ್ ನಿರ್ಮಿಸಲಾಗುವುದು ಎಂದರು.

ವಿದ್ಯುತ್ ಸಂಪರ್ಕಕ್ಕೆ ಕ್ರಮ

ಹಾನಿಯಾಗಿರುವ ವಿದ್ಯುತ್ ಕಂಬಗಳ ಪಟ್ಟಿ ಮಾಡಿ, ಟ್ರಾನ್ಸ್ಫಾರ್ಮರ್ ಹಾಗೂ ಕಂಬಗಳನ್ನು ಪುನ: ಸ್ಥಾಪಿಸಲು ವ್ಯವಸ್ಥೆ ಮಾಡಿ ವಿದ್ಯುತ್ ಸಂಪರ್ಕ ನೀಡುವುದು ಇಲ್ಲಿನ ಜೆಸ್ಕಾಂ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಎಂ.ಡಿ ಖುದ್ದಾಗಿ ಮೇಲ್ವಿಚಾರಣೆ ಮಾಡುವಂತೆ ಸೂಚಿಸಲಾಗಿದೆ ಎಂದರು ಎನ್.ಡಿ.ಆರ್.ಎಫ್ ಸಮಯಕ್ಕೆ ಸರಿಯಾಗಿ ಕೆಲಸ ಮಾಡಲು ಸೂಚನೆ ನೀಡಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿಗಳು ಈ ಕೆಲಸದ ಮೇಲ್ವಿಚಾರಣೆ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಈ ಸಂದರ್ಭ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್, ಕಂದಾಯ ಸಚಿವ ಆರ್.ಅಶೋಕ್, ಇಂಧನ ಸಚಿವ ಸುನಿಲ್‌ಕುಮಾರ್, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಶಾಸಕರುಗಳಾದ ಎಂ.ಪಿ.ಅಪ್ಪಚ್ಚುರAಜನ್, ಕೆ.ಜಿ.ಬೋಪಯ್ಯ, ಕರ್ನಾಟಕ ಪಶ್ಚಿಮಘಟ್ಟ ಸಂರಕ್ಷಣೆ ಕಾರ್ಯಪಡೆ ಅಧ್ಯಕ್ಷ ರವಿಕುಶಾಲಪ್ಪ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಇದ್ದರು. ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡು ಮಾಹಿತಿ ನೀಡಿದರು.