ಕೂಡಿಗೆ, ಜು. ೧೧: ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹಾರಂಗಿ ಅಣೆಕಟ್ಟೆಗೆ ಭೇಟಿ ನೀಡಿ ಅಧಿಕಾರಿಗಳಿಂದ ಒಳ ಹರಿವು ಮತ್ತು ಹೊರ ಹರಿವಿನ ಪ್ರಮಾಣದ ಬಗ್ಗೆ ಮಾಹಿತಿ ಪಡೆದರು. ಒಳ ಹರಿವಿನ ಪ್ರಮಾಣವನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿ ನೀರನ್ನು ನದಿಗೆ ಹರಿಸುವಂತೆ ಸಂಬAಧಿಸಿದವರಿಗೆ ಸೂಚನೆ ನೀಡಿದರು. ಈ ಸಂದರ್ಭ ಕುಶಾಲನಗರ ನಗರ ಬಿಜೆಪಿ ಅಧ್ಯಕ್ಷ ಉಮಾಶಂಕರ್, ಕುಡಾ ನಿರ್ದೇಶಕ ವೈಶಾಕ್ ಕೂಡುಮಂಗಳೂರು ಗ್ರಾ.ಪಂ. ಉಪಾಧ್ಯಕ್ಷ ಭಾಸ್ಕರ್ ನಾಯಕ್, ಸದಸ್ಯರಾದ ಮಣಿಕುಮಾರ್ ಅಣೆಕಟ್ಟೆ ಭದ್ರತಾ ಪಡೆ ವೃತ್ತ ನಿರೀಕ್ಷಕ ಚಂದ್ರಶೇಖರ ಮತ್ತಿತರರು ಹಾಜರಿದ್ದರು.