ಮಡಿಕೇರಿ, ಜು. ೧೨: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆ ಅಡಿಯಲ್ಲಿ ೨೦೨೦-೨೧ ಹಾಗೂ ೨೦೨೧-೨೨ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ ಪ್ರತಿ ತಾಲೂಕಿನ ಪರಿಶಿಷ್ಟ ಜಾತಿಗೆ ಸೇರಿದ ೩ ಹೊಸ ಯುವಕ-ಯುವತಿ ಸಂಘಗಳಿಗೆ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಒಂದು ಯುವಕ-ಯುವತಿ ಸಂಘಗಳಿಗೆ ನೋಂದಾವಣಿ ಮಾಡಲು ಸರ್ಕಾರದಿಂದ ಸಹಾಯಧನ ಮತ್ತು ‘ಕ್ರೀಡಾ ಪರಿಕರ ಕಿಟ್ಟು’ ನೀಡುವ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸ್ತುತ (೨೦೨೨-೨೩) ಸಾಲಿನಲ್ಲಿ ಹೊಸದಾಗಿ ನೋಂದಾಣಿ ಆಗಿರುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಕ-ಯುವತಿ ಸಂಘಗಳಿಗೆ ಸರ್ಕಾರದ ಸಹಾಯಧನ ರೂ. ೫ ಸಾವಿರ ನೀಡುವ ಹೊಸ ಯೋಜನೆಯು ಜಾರಿಯಲ್ಲಿದೆ. ಸಹಾಯಧನ ಪಡೆಯಲಿಚ್ಚಿಸುವ ಯುವಕ-ಯುವತಿ ಸಂಘಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹಾಗೂ ಕ್ರೀಡಾ ಪರಿಕರ ಕಿಟ್ನ್ನು ಉಚಿತವಾಗಿ ಪಡೆಯಲು ಇಚ್ಚಿಸುವ ಜಿಲ್ಲೆಯ ಯುವಕ-ಯುವತಿ ಸಂಘಗಳು ಈ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಜಿ.ಎಸ್. ಗುರುಸ್ವಾಮಿ ಕೋರಿದ್ದಾರೆ.
ಜಿಮ್ ಸ್ಥಾಪನೆಗೆ ಸಹಾಯಧನ
ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಅಂರ್ರಾಷ್ಟಿçÃಯ ಮತ್ತು ರಾಷ್ಟಿçÃಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕರ್ನಾಟಕದ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗೆ ಸಹಾಯಧನ ನೀಡುವ ಕಾರ್ಯಕ್ರಮ ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಉಪ/ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲೆ ಇವರ ಕಚೇರಿಗೆ ತಾ. ೧೬ ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ೦೮೨೭೨-೨೨೫೫೩೧, ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ೦೮೨೭೨-೨೨೩೫೫೨, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ೦೮೨೭೬-೨೮೧೧೧೫ ಹಾಗೂ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ ೦೮೨೭೪-೨೪೯೪೭೬ ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಕಾವ, ಜಾಣ, ರತ್ನ ಪರೀಕ್ಷೆಗೆ
ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ೨೦೨೨-೨೩ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
೨೦೨೨ ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ ೩೧ ಕೊನೆಯ ದಿನವಾಗಿದೆ. ಸೆಪ್ಟೆಂಬರ್ ೧೫ ರವರೆಗೆ ದಂಡ ಶುಲ್ಕ ರೂ. ೫೦ ಅನ್ನು ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು. ರೂ. ೨೫ ಶುಲ್ಕ ಪಾವತಿಸಿ ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ (ಬೆಂಗಳೂರು) ಪಡೆಯಬಹುದು. ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ೩೦ ರೂ. ಮನಿಯಾರ್ಡರ್ ಮಾಡಿದರೆ ಅರ್ಜಿಯನ್ನು ಅಂಚೆ ಮೂಲಕ ಕಳುಹಿಸಲಾಗುವುದು.
ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ ತಿತಿತಿ.ಞಚಿsಚಿಠಿಚಿ.iಟಿ ಮೂಲಕ ಸಹ ಪಡೆದುಕೊಳ್ಳಬಹುದು. ಇವರು ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ. ೨೫ ಗಳನ್ನು ಪ್ರತ್ಯೇಕವಾಗಿ ಪಾವತಿಸುವುದು. ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-೧೮, ದೂ. ೦೮೦-೨೬೬೨೩೫೮೪, ೨೬೬೧೨೯೯೧, ೨೨೪೨೩೮೬೭, ೨೬೬೭೨೯೯೨, ೮೬೬೦೭೭೭೬೪೩ನ್ನು ಸಂಪರ್ಕಿಸಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ತಿಳಿಸಿದ್ದಾರೆ.
ಸ್ವಯಂ ಉದ್ಯೋಗ ಯೋಜನೆಗಳಿಗೆ
ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ, ವಸತಿ, ನೇರ ಸಾಲ ಹಾಗೂ ವಿವಿಧ ಸ್ವಯಂ ಉದ್ಯೋಗ ಯೋಜನೆಗಳಿಗೆ ಚರ್ಮ ಕುಶಲ ಕರ್ಮಿಗಳಿಂದ ಸುವಿಧಾ ಪೋರ್ಟಲ್ನಲ್ಲಿ hಣಣಠಿ://suviಜhಚಿ.ಞಚಿಡಿಟಿಚಿಣಚಿಞಚಿ.gov.iಟಿ/ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ತಾ. ೩೦ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಮೊ. ೯೯೭೨೬೭೬೨೭೮ನ್ನು ಸಂಪರ್ಕಿಸಬಹುದು ಎಂದು ಡಾ. ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಜಿಲ್ಲಾ ಸಂಯೋಜಕ ದಿನೇಶ್ ತಿಳಿಸಿದ್ದಾರೆ.