ಕುಶಾಲನಗರ, ಜು. ೧೨: ಕೊಡಗು ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೊಪ್ಪ ಗೇಟ್ನಲ್ಲಿ ಜಿಲ್ಲೆಯ ಶಾಸಕರು ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ಪರವಾಗಿ ಸ್ವಾಗತಿಸಿ ಬರಮಾಡಿಕೊಳ್ಳಲಾಯಿತು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ ನಾಗೇಶ್, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಕೆ. ಮಹದೇವ್, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ, ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್, ಗಡಿಭಾಗದ ಕೊಪ್ಪ ಪಂಚಾಯಿತಿ ಅಧ್ಯಕ್ಷ ರೇಣುಕಾಸ್ವಾಮಿ ಮತ್ತು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ್ ಮತ್ತಿತರ ಅಧಿಕಾರಿಗಳು ಬರಮಾಡಿಕೊಂಡರು.