ಸೋಮವಾರಪೇಟೆ, ಜು. ೧೨: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸಂತ ಜೋಸೆಫರ ಪ್ರೌಢಶಾಲೆಯ ಸಹಯೋಗದೊಂದಿಗೆ ತಾ. ೧೩ರಂದು (ಇಂದು) ದಿ.ಕೆ.ಟಿ. ಸುಬ್ಬರಾವ್ ದತ್ತಿ ನಿಧಿ ಕಾರ್ಯಕ್ರಮವನ್ನು ಸಂತ ಜೋಸೆಫರ ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ಎಸ್.ಡಿ.ವಿಜೇತ್ ತಿಳಿಸಿದ್ದಾರೆ.

ಮಧ್ಯಾಹ್ನ ೨.೩೦ಕ್ಕೆ ನಡೆಯುವ ಕಾರ್ಯಕ್ರಮವನ್ನು ಪ್ರಾಂಶುಪಾಲ ರಾಯಪ್ಪ ಅವರು ಉದ್ಘಾಟಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ಕೇಶವ ಕಾಮತ್, ಮುಖ್ಯ ಶಿಕ್ಷಕ ಹ್ಯಾರಿ ಮೋರಸ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.