ಮಡಿಕೇರಿ, ಜು. ೧೨: ಕೊಡವ ಸಮಾಜ ಒಕ್ಕೂಟ ಹಾಗೂ ಜಿಲ್ಲೆಯ ಇನ್ನಿತರ ಕೊಡವ ಸಮಾಜಗಳ ಮಡಿಕೇರಿ, ಜು. ೧೨: ಕೊಡವ ಸಮಾಜ ಒಕ್ಕೂಟ ಹಾಗೂ ಜಿಲ್ಲೆಯ ಇನ್ನಿತರ ಕೊಡವ ಸಮಾಜಗಳ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಸಮುದಾಯಕ್ಕೆ ಸಿಗಬೇಕಾದ
(ಮೊದಲನೇ ಪುಟದಿಂದ) ಸವಲತ್ತು, ಅನುದಾನ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಜನಾಂಗ ಹಾಗೂ ಕಾವೇರಿ ಮಾತೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ವಿಚಾರವನ್ನು ಈ ಸಂದರ್ಭ ಚರ್ಚಿಸಲಾಯಿತು.
ಇದಕ್ಕೆ ಪ್ರತಿಕ್ರಿಯಿಸಿದ ಸಿ.ಎಂ. ಬೊಮ್ಮಾಯಿ ಅವರು, ಸರಕಾರ ಜನಾಂಗದ ಅಭಿವೃದ್ಧಿಯ ಬಗ್ಗೆ ಚಿಂತನೆ ನಡೆಸಿದೆ. ಯುವ ಪ್ರತಿಭೆಗಳಿಗೆ ಉನ್ನತ ಮಟ್ಟದ ಶಿಕ್ಷಣ ಹಾಗೂ ಉದ್ಯೋಗದ ಬಗ್ಗೆ ಕಾಳಜಿ ವಹಿಸಿ ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.
ಅವಹೇಳನಕಾರಿ ಹೇಳಿಕೆ ವಿಚಾರ ತಮ್ಮ ಗಮನಕ್ಕೆ ಬಂದಿದೆ. ಇದರ ನೈಜ ಆರೋಪಿಗಳನ್ನು ಬಂಧಿಸುವAತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಬೊಮ್ಮಾಯಿ ಅವರು ತಿಳಿಸಿದರು. ಈ ಸಂದರ್ಭ ವಿವಿಧ ಬೇಡಿಕೆಗಳ ಕುರಿತು ಮನವಿ ಸಲ್ಲಿಸಲಾಯಿತು.
ಮಾಜಿ ಸಚಿವರಾದ ಯಂ.ಸಿ. ನಾಣಯ್ಯ, ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಎಂ.ಎಲ್.ಸಿ. ಸುಜಾ ಕುಶಾಲಪ್ಪ, ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಹಾಗೂ ಪದಾಧಿಕಾರಿಗಳು, ಇತರ ಕೊಡವ ಸಮಾಜಗಳ ಪ್ರಮುಖರು ಪಾಲ್ಗೊಂಡಿದ್ದರು.