ಮಡಿಕೇರಿ ಜು.೧೨ : ಕೊಡಗು ಜಿಲ್ಲೆಯಲ್ಲಿ ಕಳೆದ ೧೨ ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಸಾಕಷ್ಟು ಹಾನಿ ಆಗಿದ್ದು, ಈ ಸಂಬAಧ ವಿಸ್ತೃತವಾಗಿ ವರದಿ ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದಲ್ಲಿ ವಿಶೇಷ ಅನುದಾನ ಬಿಡುಗಡೆ ಮಾಡ ಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಳೆ ಹಾನಿ ಸಂಬAಧಿಸಿದAತೆ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದು ಅವರು ಮಾತನಾಡಿದರು.
ಕಳೆದ ೧೨ ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ಕೊಡಗು ಜಿಲ್ಲೆಯ ರಸ್ತೆ, ಸೇತುವೆ, ವಿದ್ಯುತ್ ಕಂಬಗಳು, ವಾಸದ ಮನೆಗಳು ಹೀಗೆ ಸಾಕಷ್ಟು ಹಾನಿಯಾಗಿದ್ದು, ಈ ಸಂಬAಧ ಹಣ ಬಿಡುಗಡೆ ಮಾಡಲಾಗುವುದು ಎಂದರು.
ವಿದ್ಯುತ್ ಕಂಬ, ಪರಿವರ್ತಕ ಹಾನಿ ಸಂಬAಧಿಸಿದAತೆ ೨೪ ಗಂಟೆಯೊಳಗೆ ಸರಿಪಡಿಸುವ ಕಾರ್ಯ ಆಗಬೇಕು.
ಕಂಬಗಳು, ವಾಸದ ಮನೆಗಳು ಹೀಗೆ ಸಾಕಷ್ಟು ಹಾನಿಯಾಗಿದ್ದು, ಈ ಸಂಬAಧ ಹಣ ಬಿಡುಗಡೆ ಮಾಡಲಾಗುವುದು ಎಂದರು.
ವಿದ್ಯುತ್ ಕಂಬ, ಪರಿವರ್ತಕ ಹಾನಿ ಸಂಬAಧಿಸಿದAತೆ ೨೪ ಗಂಟೆಯೊಳಗೆ ಸರಿಪಡಿಸುವ ಕಾರ್ಯ ಆಗಬೇಕು.
ಕೊಡಗು ಜಿಲ್ಲೆಯಲ್ಲಿ ಸ್ವಲ್ಪ ಮಳೆಯಾದರೂ ಸಹ ಹೆಚ್ಚಿನ ಸಮಸ್ಯೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಮನೆ ನಿರ್ಮಾಣ ಕಾರ್ಯವನ್ನು ಕಾಲಮಿತಿಯಲ್ಲಿ ಪೂರ್ಣ ಗೊಳಿಸಬೇಕು. ಅಧಿಕಾರಿಗಳು ಇಚ್ಛಾಶಕ್ತಿಯಿಂದ ಕಾರ್ಯ ನಿರ್ವಹಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.
ಕೊಡಗು ಜಿಲ್ಲೆಗೆ ಪ್ರತ್ಯೇಕ ಮರಳು ನೀತಿ ಜಾರಿಗೊಳಿಸುವ ನಿಟ್ಟಿನಲ್ಲಿ ಸಮಗ್ರ ಅಧ್ಯಯನ ಮಾಡಿ ವರದಿ ನೀಡುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ
(ಮೊದಲನೇ ಪುಟದಿಂದ) ಬಸವರಾಜ ಬೊಮ್ಮಾಯಿ ನಿರ್ದೇಶನ ನೀಡಿದರು. ಅನಾಹುತ ಆದ ನಂತರ ಕ್ರಮವಹಿಸುವುದಲ್ಲ. ಅನಾಹುತ ಸಂಭವಿಸುವುದಕ್ಕೂ ಮೊದಲು ಕ್ರಮವಹಿಸುವುದು ಅತಿ ಮುಖ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿದರು.
ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ ಮನೆಗಳ ಹಾನಿ ಸಂಬAಧ ಪರಿಹಾರ ನೀಡಿದರಷ್ಟೇ ಸಾಲದು. ಮನೆ ನಿರ್ಮಾಣ ಮಾಡುತ್ತಿದ್ದಾರೆಯೇ ಎಂಬ ಬಗ್ಗೆ ಖಾತರಿ ಪಡಿಸಿಕೊಳ್ಳುವಂತೆ ಸೂಚಿಸಿದರು.
ಮನೆಗಳ ನಿರ್ಮಾಣ ಸಂಬAಧ ಹೆಚ್ಚಿನ ಗಮನಹರಿಸಬೇಕು. ಎಲ್ಲೆಲ್ಲಿ ಸಮಸ್ಯೆಗಳಿವೆ. ಅಲ್ಲಿ ತಕ್ಷಣವೇ ಸ್ಪಂದಿಸುವAತಾಗಬೇಕು. ಸಮರೋಪಾದಿಯಲ್ಲಿ ಕೆಲಸ ಆಗಬೇಕು. ಸರ್ಕಾರಕ್ಕೆ ಒಳ್ಳೆಯ ಹೆಸರು ತರುವಂತಾಗಬೇಕು ಎಂದು ಆರ್.ಅಶೋಕ್ ಹೇಳಿದರು.
ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ.ಬೋಪಯ್ಯ ಅವರು ೨೦೧೯ ಮತ್ತು ೨೦೨೦ ರಲ್ಲಿ ಪ್ರಾಕೃತಿಕ ವಿಕೋಪದಿಂದ ಕೊಡಗು ಜಿಲ್ಲೆ ತತ್ತರಿಸಿತ್ತು. ಆ ಸಂದರ್ಭದಲ್ಲಿ ೫೦೦ ಕೋಟಿ ರೂ. ಬಿಡುಗಡೆಗೆ ಸಂಬAಧ ವಿಶೇಷ ಪ್ಯಾಕೇಜ್ನ್ನು ಪ್ರಕಟಿಸಲಾಗಿತ್ತು. ಸದ್ಯ ೪೦೦ ಕೋಟಿ ರೂ.ಗಳÀನ್ನಾದರೂ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಅವರು ಸದ್ಯ ಈಗ ಎಲ್ಲೆಲ್ಲಿ ಹಾನಿಯಾಗಿದೆ ಅದಕ್ಕೆ ಹಣ ಬಿಡುಗಡೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು. ಮನೆ ಹಾನಿಗೆ ಸಂಬAಧಿಸಿದAತೆ ಪ್ರಥಮ ಹಂತದಲ್ಲಿ ಪರಿಹಾರ ವಿತರಿಸಲಾಗಿದೆ. ಈಗಾಗಲೇ ಸಂಪೂರ್ಣ ಹಾನಿಯಾಗಿರುವ ಮನೆಗಳನ್ನು ಪುನರ್ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕ್ರಮವಹಿಸಬೇಕು. ಕಾಲ ಮಿತಿಯಲ್ಲಿ ಪರಿಹಾರದ ಹಣ ತಲುಪಬೇಕು ಎಂದರು.
೨೦೧೮ ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾದವರಿಗೆ ಹಸ್ತಾಂತರಿಸಲಾಗಿರುವ ಮನೆಗಳ ಬಡಾವಣೆಯಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಲಾಗಿದೆಯೇ ಎಂದು ಮುಖ್ಯಮಂತ್ರಿ ಅವರು ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಶಾಸಕ ಎಂ.ಪಿ.ಅಪ್ಪಚ್ಚುರAಜನ್ ಮಾತನಾಡಿ ಈಗಾಗಲೇ ಹಸ್ತಾಂತರಿಸಲಾಗಿರುವ ಮನೆಗಳ ಬಡಾವಣೆಯಲ್ಲಿ ಒಳಚರಂಡಿ ಮತ್ತು ಕುಡಿಯುವ ನೀರು ಸಮಸ್ಯೆ ಇದೆ ಎಂದು ಮುಖ್ಯಮಂತ್ರಿ ಅವರ ಗಮನಕ್ಕೆ ತಂದರು.
ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ ಕಳೆದ ೧೫ ದಿನಗಳಿಂದ ಸುರಿದ ಧಾರಾಕಾರ ಮಳೆಗೆ ರಸ್ತೆ, ಸೇತುವೆಗಳು ಹಾನಿಯಾಗಿದ್ದು, ಇದನ್ನು ಸರಿಪಡಿಸಬೇಕು ಎಂದರು.
ಕಳೆದ ವರ್ಷದ ಮಳೆ ಸಂದರ್ಭದಲ್ಲಿ ಮರದ ದಿಮ್ಮಿಗಳು ಭೂಮಿಯೊಳಗೆ ಹೂತುಹೋದವು, ಕೆಲವು ಮರದ ದಿಮ್ಮಿಗಳು ಸೇತುವೆಗೆ ಬಂದು ಹಾನಿಯಾಯಿತು. ಈ ಮರಗಳನ್ನು ತೆಗೆಯಲು ಅರಣ್ಯ ಇಲಾಖೆ ಅಧಿಕಾರಿಗಳು ಬಿಡಲಿಲ್ಲ. ಇದರಿಂದ ಸಂಕಷ್ಟ ಅನುಭವಿಸುವಂತಾಯಿತು ಎಂದು ಶಾಸಕರು ದೂರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಅವರು ಮಳೆಗೆ ಕೊಚ್ಚಿ ಹೋದ ಮರಗಳನ್ನು ಸಂಬAಧಪಟ್ಟವರಿಗೆ ನೀಡಿ, ಇಲ್ಲದಿದ್ದಲ್ಲಿ ಅರಣ್ಯ ಇಲಾಖೆಯ ದಾಸ್ತಾನು ಮಾಡಿ ಸಂಬAಧಪಟ್ಟವರು ಕ್ಲೆöÊಮು ಮಾಡುತ್ತಾರೆ. ಎಲ್ಲೆಲ್ಲಿ ಮರ ಬಿದ್ದಿದೆ ಅವುಗಳನ್ನು ಕೂಡಲೇ ತೆರವುಗೊಳಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಇಂಧನ ಸಚಿವ ವಿ. ಸುನೀಲ್ ಕುಮಾರ್ ಮಾತನಾಡಿ ಯಾವ ಯಾವ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಅಂತಹ ಗ್ರಾಮಗಳಿಗೆ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮವಹಿಸುವಂತೆ ಸೆಸ್ಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ ಅವರು ಕೊಡಗು ಜಿಲ್ಲೆಯಲ್ಲಿ ಮುಂಗಾರು ಸಂಬAಧ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳು, ಕಳೆದ ವಾರ ಸುರಿದ ಧಾರಾಕಾರ ಮಳೆಗೆ ರಸ್ತೆ, ಸೇತುವೆ, ಮನೆ, ವಿದ್ಯುತ್ ಕಂಬಗಳು ಮತ್ತು ಪರಿವರ್ತಗಳ ಹಾನಿ ಹಾಗೂ ಪರಿಹಾರ ಕೇಂದ್ರಗಳ ಸ್ಥಾಪನೆ ಮತ್ತಿತರ ಬಗ್ಗೆ ಮಾಹಿತಿ ನೀಡಿದರು.
ಕೊಡಗು ಜಿಲ್ಲೆಗೆ ಹೆಚ್ಚುವರಿಯಾಗಿ ಸೀಮೆಎಣ್ಣೆ ಒದಗಿಸುವಂತೆ ಮುಖ್ಯಮಂತ್ರಿ ಅವರಲ್ಲಿ ಜಿಲ್ಲಾಧಿಕಾರಿ ಮನವಿ ಮಾಡಿದರು. ಈ ಬಗ್ಗೆ ಕೇಂದ್ರ ಸರ್ಕಾರದ ಜತೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಬಿ.ಸಿ. ನಾಗೇಶ್, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ, ಇಂಧನ ಸಚಿವ ವಿ. ಸುನೀಲ್ ಕುಮಾರ್, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಕರ್ನಾಟಕ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ರವಿ ಕುಶಾಲಪ್ಪ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್, ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ ಜಗದೀಶ, ಜಿ.ಪಂ, ಸಿಇಒ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ, ವಿವಿಧ ಇಲಾಖೆಯ ಕಾರ್ಯದರ್ಶಿಗಳು, ಅಧಿಕಾರಿಗಳು ಇತರರು ಇದ್ದರು.