ವೀರಾಜಪೇಟೆ, ಜು. ೧೩: ವೀರಾಜಪೇಟೆ ತಾಲೂಕು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯಿಂದ ವೀರಾಜಪೇಟೆ ತಾಲೂಕು ಮತ್ತು ಅಮ್ಮತ್ತಿ ಹೋಬಳಿಯಿಂದ ನಮೂನೆ ೫೭ ರಲ್ಲಿ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ಸಾಗುವಳಿ ಚೀಟಿ ವಿತರಣಾ ಕಾರ್ಯಕ್ರಮ ತಾ. ೧೪ ರಂದು (ಇಂದು) ವಿರಾಜಪೇಟೆ ಮಹಿಳಾ ಸಮಾಜದಲ್ಲಿ ಆಯೋಜಿಸಲಾಗಿದೆ ಎಂದು ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ತಹಶೀಲ್ದಾರ್ ಯೋಗಾನಂದ್, ಸಮಿತಿ ಸದಸ್ಯರಾದ ತೀತಿಮಾಡ ಲಾಲ ಭೀಮಯ್ಯ, ಮಾಪಂಗಡ ಯಮುನಾ ಚಂಗಪ್ಪ, ಹೆಚ್.ಕೆ. ದಿನೇಶ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.