ಕುಶಾಲನಗರ, ಜು. ೧೩: ಗುರು ಪೂರ್ಣಿಮೆ ಅಂಗವಾಗಿ ಕುಶಾಲನಗರದಲ್ಲಿ ವಿವಿಧೆಡೆ ಕಾರ್ಯಕ್ರಮಗಳು ನಡೆದವು, ಕುಶಾಲನಗರ ಸಾಯಿ ಮಂದಿರದಲ್ಲಿ, ಶ್ರೀ ಶಿರಡಿ ಸಾಯಿ ಟ್ರಸ್ಟ್ ವತಿಯಿಂದ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ಬೆಳಿಗ್ಗೆ ಕಾಕಡ ಆರತಿ, ಗಣಪತಿ ಹೋಮ, ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ ನಂತರ ಅನ್ನ ಸಂತರ್ಪಣೆ ನಡೆಯಿತು. ಹುಣ್ಣಿಮೆ ಅಂಗವಾಗಿ ಸಾಮೂಹಿಕ ಸತ್ಯ ನಾರಾಯಣ ಪೂಜೆ ನಡೆಸಲಾಯಿತು.