ಬೆಂಗಳೂರು, ಜು. ೧೩: ಪಶ್ಚಿಮಘಟ್ಟ ಪ್ರದೇಶದಲ್ಲಿ ವಾಸಿಸುವ ಜನತೆಯ ಭವಿಷ್ಯಕ್ಕೆ ಮಾರಕವಾಗುವ ಪಶ್ಚಿಮಘಟ್ಟ ಕುರಿತ ಕೇಂದ್ರ ಪರಿಸರ ಸಚಿವಾಲಯದ ಅಧಿಸೂಚನೆ ವಿರೋಧಿಸಿ ಮಲೆನಾಡು ಪ್ರದೇಶವನ್ನು ಪ್ರತಿನಿಧಿಸುವ ಶಾಸಕರ ಸಭೆಯನ್ನು ತಾ. ೧೮ ರಂದು ಗೃಹ ಸಚಿವ ಆರಗ ಜ್ಞಾನೇಂದ್ರ ಏರ್ಪಡಿಸಿದ್ದಾರೆ.
ಕಳೆದ ವಾರ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಕರ್ನಾಟಕ ರಾಜ್ಯವೂ ಒಳಗೊಂಡAತೆ ಒಟ್ಟು ೫೬೮೨೬ ಚದರ ಕಿಲೋ ಮೀಟರ್ ಪ್ರದೇಶವನ್ನು ಪರಿಸರ ಸೂಕ್ಷö್ಮ ಪ್ರದೇಶವೆಂದು ಅಧಿಸೂಚನೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು ಎರಡು ತಿಂಗಳ ಗಡುವು ನೀಡಲಾಗಿದೆ.
ಒಂದು ವೇಳೆ ಈ ಅಧಿಸೂಚನೆ ಅನುಷ್ಠಾನಗೊಂಡರೆ ಮಲೆನಾಡು ನಿವಾಸಿಗಳ ಬದುಕು ಮಸುಕಾಗುತ್ತದೆ. ಅಭಿವೃದ್ಧಿ ಕುಂಟುತ್ತದೆ ಹಾಗೂ ತೀವ್ರ ಆರ್ಥಿಕ ಹಾನಿಗೆ ತುತ್ತಾಗ ಬೇಕಾಗುತ್ತದೆ.
(ಮೊದಲ ಪುಟದಿಂದ) ಕರ್ನಾಟಕ ಸರಕಾರ ಈ ಹಿಂದೆ ಕಸ್ತೂರಿರಂಗನ್ ಸಮಿತಿ ವರದಿಯನ್ನು ತಿರಸ್ಕರಿಸಿದೆ ಹಾಗೂ ತನ್ನ ನಿಲುವಿನ ಬಗ್ಗೆ ಸ್ಪಷ್ಟ ಅಭಿಪ್ರಾಯ ತಿಳಿಸಿದೆ. ಆ ನಿಲುವಿನಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಈ ಭಾಗದ ಶಾಸಕರ ಆಗ್ರಹವಾಗಿದೆ ಎಂದಿರುವ ಸಚಿವರು, ಸೋಮವಾರದ ಸಭೆಯಲ್ಲಿ ಅಧಿಸೂಚನೆಯನ್ನು ವಿರೋಧಿಸಿ ಗೊತ್ತುವಳಿ ಮಂಡನೆ ಮಾಡಲಾಗುವುದು ಎಂದೂ ತಿಳಿಸಿದ್ದಾರೆ.