ಮಡಿಕೇರಿ, ಜು. ೧೩: ೬೬ಕೆವಿ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ.ರವರ ಕೋರಿಕೆಯಂತೆ ತಾ. ೧೪ ರಂದು (ಇಂದು) ಬೆಳಗ್ಗೆ ೯ ಗಂಟೆಯಿAದ ಸಂಜೆ ೪ ಗಂಟೆಯವರೆಗೆ ಕುಶಾಲನಗರ-ಮಡಿಕೇರಿ ೬೬ ಕೆವಿ ವಿದ್ಯುತ್ ಮಾರ್ಗದ ಮೇಲೆ ಮಾರ್ಗ ಮುಕ್ತತೆ ನೀಡಲಾಗಿದೆ.
ಇದರಿಂದ ೬೬/೧೧ಕೆವಿ ಸುಂಟಿಕೊಪ್ಪ ಮತ್ತು ೬೬/೧೧ಕೆವಿ ಮಡಿಕೇರಿ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ. ಸುಂಟಿಕೊಪ್ಪ, ಚೆಟ್ಟಳ್ಳಿ, ಮಾದಾಪುರ, ಮಡಿಕೇರಿ ಪಟ್ಟಣ, ಬೋಯಿಕೇರಿ, ಗಾಳಿಬೀಡು, ಕುಂಡಮೇಸ್ತಿç, ಮೇಕೇರಿ, ಕಡಗದಾಳು, ಸಂಪಾಜೆ, ಭಾಗಮಂಡಲ ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.