ಮಡಿಕೇರಿ, ಜು. ೧೩: ಉದ್ಯೋಗ ಮತ್ತು ಶಿಕ್ಷಣದಲ್ಲಿ ಕನ್ನಡಿಗರಿಗೆ ಪ್ರಥಮ ಆದ್ಯತೆ ನೀಡಬೇಕು. ಕೊಡಗು ಗಡಿ ಭಾಗದ ಜಿಲ್ಲೆ ಆಗಿರುವುದರಿಂದ ರಾಷ್ಟಿçÃಕೃತ ಬ್ಯಾಂಕುಗಳಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೆಲಸ ಮಾಡುತ್ತಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಬಗ್ಗೆ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತ ನಾಡಿದರು. ಆತ್ಮಸಾಕ್ಷಿಗೆ ಅನುಗುಣ ವಾಗಿ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಭಾಷೆಯ ಅನುಷ್ಠಾನ ಮಾಡುವಂತೆ ಇಲಾಖೆಗಳ ಅಧಿಕಾರಿಗಳಿಗೆ ಸಲಹೆ ಮಾಡಿದರು.

ಸರ್ಕಾರಿ ಇಲಾಖೆಗಳ ಮಾಹಿತಿ ನೀಡುವ ವೆಬ್‌ಸೈಟ್‌ಗಳಲ್ಲಿ ಕಡ್ಡಾಯ ವಾಗಿ ಕನ್ನಡ ಭಾಷೆಯಲ್ಲಿಯೇ ಇರಬೇಕು. ಆ ನಿಟ್ಟಿನಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಬ್ಯಾಂಕುಗಳು ಕ್ರಮವಹಿಸಬೇಕು ಎಂದರು. ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಅಧಿಕಾರಿ, ಸಿಬ್ಬಂದಿಗಳಿಗೆ ಅನುಕೂಲವಾಗುವಂತೆ ಕಣಜ ಎಂಬ ಆ್ಯಪ್ ಅನ್ನು ಅಭಿವೃದ್ಧಿಪಡಿಸಲಾಗಿದೆ, ಆ ಆ್ಯಪ್ ಮೊಬೈಲ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ, ಆ ಮೂಲಕ ದೈನಂದಿನ ಕೆಲಸ ಕಾರ್ಯಗಳಿಗೆ ಅನುಕೂಲವಾಗುವ ಪದಗಳನ್ನು ಪಡೆಯಬಹುದಾಗಿದೆ, ಇದೀಗ ೪ ಲಕ್ಷ ಪದಗಳಿದ್ದು, ಇದರ ಸದುಪಯೋಗವನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಡೆಯ ಬಹುದಾಗಿದೆ ಎಂದರು.

ಇಲ್ಲಿನ ರಾಜ್ಯ ಭಾಷೆ ಕನ್ನಡ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿಯೂ ಅದು ಸಮರ್ಪಕ ಅನುಷ್ಠಾನವಾಗಬೇಕು, ಈ ದಿಸೆಯಲ್ಲಿ ಜಿಲ್ಲೆಯಲ್ಲಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಇಲಾಖೆಗಳು ಹೆಚ್ಚಿನ ಪ್ರಾಧಾನ್ಯತೆ ನೀಡಬೇಕು ಎಂದು ಅವರು ಒತ್ತಿ ಹೇಳಿದರು. ಜಿಲ್ಲೆಯ ವ್ಯಾಪ್ತಿಯಲ್ಲಿರುವ ನಾಮಫಲಕಗಳು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿರು ವಂತೆ ಕ್ರಮಕೈಗೊಳ್ಳಬೇಕು, ವಾಣಿಜ್ಯ ಮಳಿಗೆಗಳಿಗೆ ಪರವಾನಿಗೆ ನೀಡುವ ಸಂದರ್ಭಗಳಲ್ಲಿ ಕನ್ನಡ ನಾಮಫಲಕ ಬಳಸುವ ಬಗ್ಗೆ ಖಚಿತ ಪಡಿಸಿಕೊಂಡ ನಂತರ ಅನುಮತಿ ನೀಡುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯ ಗಡಿ ಭಾಗದಲ್ಲಿ ರಸ್ತೆ ಬದಿಯಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಗಡಿ ಪ್ರವೇಶ, ತಾಲೂಕು, ಜಿಲ್ಲೆ, ರಾಜ್ಯ, ಕಿ.ಮೀ. ಮತ್ತಿತರ ಮಾಹಿತಿ ಒಳಗೊಂಡ ಫಲಕ ಅಳವಡಿಸುವಂತಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೇಶವ ಕಾಮತ್ ಸಲಹೆಯಿತ್ತರು.

ಇಲಾಖೆಯಲ್ಲಿ ಕನ್ನಡ ಭಾಷೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳ ಲಾಗುತ್ತಿದೆ, ಸಂಪೂರ್ಣ ಆಡಳಿತ ಕನ್ನಡ ಭಾಷೆಯಲ್ಲಿ ಆಡಳಿತ ನಡೆಯು ತ್ತಿದ್ದು, ಜಾಹೀರಾತು ನೀಡುವುದು, ಸಭೆಗಳು, ಸುತ್ತೋಲೆ ಗಳು ಕನ್ನಡದಲ್ಲಿ ಬಳಸಲಾಗುತ್ತಿದೆ ಎಂದು ವಿವಿಧ ಇಲಾಖೆಗಳ ಅಧಿಕಾರಿಗಳು ಮಾಹಿತಿ ನೀಡಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ ಹಾನಗಲ್ಲ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಎನ್.ಮಹೇಶ್, ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಎಸ್. ಮಹೇಶ್, ಇ. ರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಟಿ. ದರ್ಶನಾ, ವಿವಿಧ ಇಲಾಖೆಗಳ ಅಧಿಕಾರಿಗಳು ಇತರರು ಇದ್ದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಜಿಲ್ಲೆಯಲ್ಲಿ ಶೇ. ೯೯ ರಷ್ಟು ಕನ್ನಡ ಭಾಷೆ ಅನುಷ್ಠಾನಗೊಳಿಸಲಾಗಿದೆ. ಉಳಿದಂತೆ ಶೇ. ೧ ರಷ್ಟು ಕನ್ನಡ ಭಾಷೆ ಏಕೆ ಅನುಷ್ಠಾನ ಮಾಡುತ್ತಿಲ್ಲ ಎಂಬುದು ಅತಿ ಮುಖ್ಯವಾಗಿದೆ ಎಂದರು. ಸ್ಥಳೀಯ ಸಂಸ್ಥೆಗಳಲ್ಲಿ ಅಂಗಡಿಗಳಿಗೆ ಪರವಾನಗಿ ನೀಡುವ ಸಂದರ್ಭ ಕನ್ನಡ ಭಾಷೆಯನ್ನು ನಾಮಫಲಕದಲ್ಲಿ ಪ್ರಥಮ ಆದ್ಯತೆ ಯಲ್ಲಿ ಬಳಸಿದ್ದಾರೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ಈ ಸಂಬAಧ ಷರಾ ಬರೆಯಬೇಕು. ಈ ಕೆಲಸ ಜಿಲ್ಲೆಯಲ್ಲಿ ಆಗಬೇಕು ಎಂದರು. ರಾಜ್ಯದ ೧೯ ಗಡಿ ಜಿಲ್ಲೆಗಳ ೩೮ ಶಾಲೆಗಳಲ್ಲಿ ಭಾಷಾಪ್ರಯೋಗ ಪಠ್ಯಕ್ರಮ ಸಿದ್ಧವಾಗಿದೆ. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ ಎಂದು ಹೇಳಿದರು.