ಮಡಿಕೇರಿ, ಜು.೧೪: ಸಮಾಜ ಕಲ್ಯಾಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ೨೦೨೦-೨೧ ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣಾ ಕಾರ್ಯಕ್ರಮವು ತಾ. ೧೫ ರಂದು ಬೆಳಗ್ಗೆ ೧೧ ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಲಿದೆ