ಮಡಿಕೇರಿ, ಜು. ೧೪: ಮಡಿಕೇರಿ ತಾಲೂಕಿನ ಚೆಂಬು ಗ್ರಾಮಕ್ಕೆ ಮಾಜಿ ಸಚಿವ, ರಾಜಾಜಿನಗರ ಶಾಸಕ ಎಸ್.ಸುರೇಶ್ ಕುಮಾರ್ ಮಂಗಳವಾರ ಭೇಟಿ ನೀಡಿದರು. ಪಕ್ಷದ ಪ್ರಮುಖರ ಜತೆ ಆಗಮಿಸಿದ ಅವರು ಗ್ರಾಮದ ವಿವಿಧ ಪ್ರದೇಶಗಳಿಗೆ ತೆರಳಿ ಆಗುತ್ತಿರುವ ಬೆಳವಣಿಗೆ ಬಗ್ಗೆ ಸ್ಥಳೀಯ ನಿವಾಸಿಗಳಿಂದ ಮಾಹಿತಿ ಪಡೆದರು.

ಕೆಲವು ದಿನದ ಹಿಂದೆ ಭೂಕುಸಿತದಿಂದ ಹಾನಿಗೊಳಗಾದ ಕೊಯನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಹಾನಿಯ ಪ್ರಮಾಣವನ್ನು ವೀಕ್ಷಿಸಿದರು. ಭೇಟಿ ಬಳಿಕ ಪ್ರತಿಕ್ರಿಯಿಸಿದ ಸುರೇಶ್ ಕುಮಾರ್, ಜನವಲಯದಲ್ಲಿರುವ ಆತಂಕದ ಬಗ್ಗೆ ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು.

ಭೇಟಿ ವೇಳೆ ಗ್ರಾಮದ ಚಿತ್ರಣದ ಬಗ್ಗೆ ಸಮಗ್ರ ಮಾಹಿತಿ ನೀಡಿದ ಕೊಡಗು ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯದರ್ಶಿ ಪೊಯ್ಯೆಮಜಲು ಜಯಂತ್, ಗ್ರೀನ್ ಸಿಟಿ ಫೋರಂ ಅಧ್ಯಕ್ಷ ಚೈಯ್ಯಂಡ ಸತ್ಯ ಗಣಪತಿ, ಬೆಂಗಳೂರು ನಗರ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಸುನೀಲ್, ಬಿಜೆಪಿ ಕಾರ್ಯಕರ್ತರಾದ ಗಿರೀಶ್, ಹರೀಶ್ ಶಾಸಕರ ಭೇಟಿ ವೇಳೆ ಉಪಸ್ಥಿತರಿದ್ದರು.