ಮಡಿಕೇರಿ, ಜು. ೧೪: ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ವೀರಾಜಪೇಟೆ ತಾಲೂಕು ಸಮಿತಿಗೆ ನೂತನ ಪದಾಧಿಕಾರಿ ಗಳನ್ನು ನೇಮಕ ಮಾಡಲಾಗಿದೆ.

ಅಧ್ಯಕ್ಷರಾಗಿ ಶಬರಿಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ವಿನೋದ್ ಪೂಜಾರಿ, ಉಪಾಧ್ಯಕ್ಷರಾಗಿ ಬಿ.ಕೆ. ಪೂವಮ್ಮ, ಕಿರಣ್ ಪೂಜಾರಿ ಕೆದಮುಳ್ಳೂರು, ತಾಲೂಕು ಸಂಚಾಲಕರಾಗಿ ಸೋಮಪ್ಪ ಕರಡ ಹಾಗೂ ಸಹ ಕಾರ್ಯದರ್ಶಿಯಾಗಿ ಬಿ.ಜಿ. ಅನಿತಾ ಅವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭ ಜಿಲ್ಲಾ ಸಮಿತಿ ನಿರ್ದೇಶಕರುಗಳನ್ನಾಗಿ ದಾಮೋದರ ಆಚಾರ್ಯ, ಬಿ.ಎಂ. ಗಣೇಶ್ ಹಾಗೂ ಪ್ರಭಾಕರ ನೆಲ್ಲಿತ್ತಾಯ ಅವರನ್ನು ನೇಮಕ ಮಾಡಲಾಯಿತು.

ಕೂಟದ ಜಿಲ್ಲಾಧ್ಯಕ್ಷ ಬಿ.ಬಿ. ಐತ್ತಪ್ಪ ರೈ ಅವರ ಅಧ್ಯಕ್ಷತೆಯಲ್ಲಿ ವೀರಾಜಪೇಟೆ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಸಭೆಯಲ್ಲಿ ಜಿಲ್ಲಾ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.