ಮಡಿಕೇರಿ, ಜು. ೧೪: ವೀರಾಜಪೇಟೆ ವಿಭಾಗದ, ವೀರಾಜಪೇಟೆ ಅರಣ್ಯ ವಲಯದ ವ್ಯಾಪ್ತಿಗೆ ಬರುವ ಗ್ರಾಮಗಳಾದ ದೇವಣಗೇರಿ, ಮೈತಾಡಿ, ಚಾಮಿಯಾಲ, ಚೆಂಬೆಬೆಳ್ಳೂರು, ಹಾಲುಗುಂದ ಗ್ರಾಮಗಳಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ತಾ. ೧೫ರಂದು (ಇಂದು) ಕಾಡಿಗೆ ಓಡಿಸುವ ಕಾರ್ಯಾಚರಣೆಯನ್ನು ಕೈಗೊಂಡಿರುವುದರಿAದ ತೋಟದ ಕಾರ್ಮಿಕರು ತಮ್ಮ ಕೆಲಸ ಕಾರ್ಯಗಳನ್ನು ನಿಲ್ಲಿಸುವಂತೆ ಹಾಗೂ ಗ್ರಾಮಸ್ಥರು, ಶಾಲಾ ಮಕ್ಕಳು ಎಚ್ಚರಿಕೆಯಿಂದ ಇದ್ದು, ಕಾಡಾನೆ ಕಾರ್ಯಾಚರಣೆಗೆ ಇಲಾಖೆಯೊಂದಿಗೆ ಸಹಕರಿಸಬೇಕು ಮತ್ತು ಸಾರ್ವಜನಿಕರು ಪಟಾಕಿಗಳನ್ನು ಸಿಡಿಸಬಾರದೆಂದು ವಲಯ ಅರಣ್ಯಾಧಿಕಾರಿ ಕೆ.ಎಂ. ದೇವಯ್ಯ ಪ್ರಕಟಣೆಯಲ್ಲಿ ಕೋರಿದ್ದಾರೆ.