ಕೂಡಿಗೆ, ಜು. ೧೪: ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿರುವವರ ಮನೆಗಳಿಗೆ ಕುಶಾಲನಗರ ತಹಶೀಲ್ದಾರ್ ಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ೮೦ಕ್ಕೂ ಅಧಿಕ ಮನೆಗಳಿಗೆ ಹಕ್ಕು ಪತ್ರ ನೀಡಲು ಮತ್ತು ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ವೀಕ್ಷಣೆ ಮಾಡಿದರು. ಈ ಸಂದರ್ಭ ಕೂಡಿಗೆ ಲೆಕ್ಕಾಧಿಕಾರಿ ಗುರುದರ್ಶನ್, ಸಹಾಯಕ ಸಿಬ್ಬಂದಿ ಲೋಕೇಶ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ಗಿರೀಶ್, ಈರಯ್ಯ, ಜ್ಯೋತಿ, ಮಂಜುನಾಥ್, ದಿನೇಶ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.