ಮಡಿಕೇರಿ, ಜು.೧೬: ರಾಜ್ಯದ ಕ್ರೀಡಾಪಟುಗಳು ಕಳೆದ ೫ ವರ್ಷಗಳಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧಿಸಿದ ಅತ್ಯುತ್ತಮ ಸಾಧನೆಗಳನ್ನು ಗುರುತಿಸಿ ಕ್ರೀಡಾ ಪೋಷಕರಿಗೆ ೨೦೨೨-೨೩ನೇ ಸಾಲಿನಲ್ಲಿ ರೂ.೫ ಲಕ್ಷಗಳ ನಗದು ಬಹುಮಾನಗಳೊಂದಿಗೆ ಅವರಿಗೆ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಕೊಡಗು ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ ಇಲ್ಲಿ ಪಡೆದು ಆಗಸ್ಟ್, ೦೪ ರೊಳಗೆ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ.ಸಂ.೦೮೨೭೨-೨೨೮೯೮೫ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್. ಗುರುಸ್ವಾಮಿ ಕೋರಿದ್ದಾರೆ.