ಕೂಡಿಗೆ, ಜು. ೧೬: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಪಶುಪಾಲನಾ ಇಲಾಖೆಯ ಅಧೀನದಲ್ಲಿರುವ ಕೂಡಿಗೆಯ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಅವರು ಅಲ್ಲಿನ ಅಧಿಕಾರಿಗಳೊಂದಿಗೆ ಹಂದಿ ಸಾಕಾಣಿಕೆ ಕೇಂದ್ರ ಮತ್ತು ಕೋಳಿ ಸಾಕಾಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಹಸುಗಳ ಸಾಕಾಣಿಕೆ ಕೇಂದ್ರದಲ್ಲಿ ಹೊಸದಾಗಿ ಸಾಯಿವಾಲ್ ಹಸುಗಳನ್ನು ಸಾಕಾಣಿಕೆ ಮಾಡುತ್ತಿರುವುದನ್ನು ವೀಕ್ಷಣೆ ಮಾಡಿದರು. ವಿವಿಧ ರೀತಿಯ ಅಭಿವೃದ್ಧಿಗೆ ಪೂರಕವಾಗುವ ಮಾಹಿತಿಯನ್ನು ನೀಡಿದರು.

ಈ ಸಂದರ್ಭ ಜಾನುವಾರು ಕೇಂದ್ರದ ಉಪ ನಿರ್ದೇಶಕ ನಾಗರಾಜ್, ಪಶು ವೈದ್ಯಾಧಿಕಾರಿ ಶೈಲಜ, ಪಶುವೈದ್ಯ ಪರೀಕ್ಷಕ ಸುಗುಣನಂದಾ, ಕಚೇರಿ ಅಧಿಕಾರಿ ಭಾನುಮತಿ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.