ಕೂಡಿಗೆ, ಜು. ೧೭: ಕೂಡುಮಂಗಳೂರು ಗ್ರಾಮ ಪಂಚಾಯಿತಿ ಕಟ್ಟಡವನ್ನು ಕುಶಾಲನಗರ-ಕೂಡಿಗೆ ರಾಜ್ಯ ಹೆದ್ದಾರಿಗೆ ಹೊಂದಿಕೊAಡAತೆ ಇರುವ ಜಾಗದಲ್ಲಿ ೧೫ ವರ್ಷಗಳ ಹಿಂದೆ ಕಟ್ಟಲಾಗಿದೆ. ಇದೀಗ ರಾಜ್ಯ ಹೆದ್ದಾರಿಯ ಆಗಲೀಕರಣ ಮತ್ತು ಕೂಡಿಗೆ-ಕುಶಾಲನಗರ ರಸ್ತೆಯು ವಿಭಜಕ ರಸ್ತೆಯಾಗಿ ಮಾರ್ಪಾಡಾಗುತ್ತಿರುವ ಹಿನ್ನೆಲೆ ಬದಲಿ ಜಾಗದಲ್ಲಿ ಪಂಚಾಯಿತಿ ಕಟ್ಟಡವನ್ನು ನಿರ್ಮಾಣ ಮಾಡಲು ಕೂಡಿಗೆ ಕೃಷಿ ಕ್ಷೇತ್ರದಲ್ಲಿ ಸ್ಥಳ ಪರಿಶೀಲನೆ ಮಾಡಲಾಯಿತು.
ಗ್ರಾಮ ಪಂಚಾಯಿತಿಯ ಮಾಸಿಕ ಸಭೆಯ ತೀರ್ಮಾನದಂತೆ ಗ್ರಾಮ ಪಂಚಾಯಿತಿ ವತಿಯಿಂದ ಕೃಷಿ ಇಲಾಖೆಗೆ ಪತ್ರ ವ್ಯವಹಾರ ನಡೆಸಲಾಗಿದ್ದು, ಅದರಂತೆ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಗೌರಿ ಸೇರಿದಂತೆ ಸಿಬ್ಬಂದಿ ವರ್ಗದವರು ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್, ಕಂದಾಯ ವಸೂಲಿಗಾರ ಅವಿನಾಶ್ ಹಾಜರಿದ್ದರು.