ಮಡಿಕೇರಿ, ಜು. ೧೬: ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಪ್ರವಾಹ ಸಂಭವಿಸಬಹುದಾದ ಪ್ರದೇಶದ ಜನರನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲು ಜಿಲ್ಲಾಡಳಿತ ಮುಂದಾಗಿದೆ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ೫ ಪರಿಹಾರ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ತಿಳಿಸಿದ್ದಾರೆ. ಸಂತ್ರಸ್ತರು ಸಂಬAಧಿಕರ ಮನೆಯಲ್ಲಿ ವಾಸ ಮಾಡುತ್ತಿದ್ದರೆ, ಅಂತಹ ಕುಟುಂಬಗಳಿಗೆ ಪಡಿತರ ಕಿಟ್ ವಿತರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಬಿ.ಸಿ. ಸತೀಶ ಮಾಹಿತಿ ನೀಡಿದರು. ಮುಖ್ಯಮಂತ್ರಿ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಂತ್ರಸ್ತರಿಗೆ ಪೌಷ್ಠಿಕ ಆಹಾರ ವಿತರಿಸುವಂತೆ ಸೂಚಿಸಿದ್ದಾರೆ. ಮುಖ್ಯಮಂತ್ರಿ ಅವರ ನಿರ್ದೇಶನದಂತೆ ಸಂತ್ರಸ್ತರಿಗೆ ಯಾವುದೇ ರೀತಿಯ ತೊಂದರೆ ಇಲ್ಲದಂತೆ ಅಗತ್ಯ ಮೂಲ ಸೌಲಭ್ಯ ಹಾಗೂ ಊಟೋಪಚಾರ ಕಲ್ಪಿಸಲಾಗುತ್ತದೆ ಎಂದು ಅವರು ಹೇಳಿದರು. ಜಿಲ್ಲೆಯಲ್ಲಿ ಬಿರುಸುನಿಂದ ಮಳೆ ಮುಂದುವರೆದಿದ್ದು, ಗಾಳಿ, ಮಳೆಯಿಂದಾಗಿ ಮರದ ಕೊಂಬೆಗಳು ವಿದ್ಯುತ್ ಮಾರ್ಗದ ಮೇಲೆ ಬೀಳುತ್ತವೆ. ಇದರಿಂದ ವಿದ್ಯುತ್ ಕಂಬಗಳು ನೆಲಕ್ಕೆ ಉರುಳುತ್ತವೆ. ಇದನ್ನು ಸರಿಪಡಿಸುವ ಕಾರ್ಯ ಸೆಸ್ಕ್ ಹಾಗೂ ಅರಣ್ಯ ಇಲಾಖೆಯಿಂದ ಆಯಾಯ ಸಂದರ್ಭದಲ್ಲಿ ನಡೆಯುತ್ತಿದೆ ಎಂದು ಡಾ.ಬಿ.ಸಿ.ಸತೀಶ ಅವರು ಹೇಳಿದರು. ಧಾರಾಕಾರ ಮಳೆ ಮುಂದುವರೆದಿರುವುದರಿAದ ರಸ್ತೆ, ಸೇತುವೆ, ವಿದ್ಯುತ್, ಶಾಲೆಗಳು, ಅಂಗನವಾಡಿ ಕಟ್ಟಡಗಳಿಗೆ ಹಾನಿ ಉಂಟಾಗಿದೆ. ಮಳೆ ಕಡಿಮೆಯಾದ ನಂತರ ಪ್ರಾಕೃತಿಕ ವಿಕೋಪದಡಿ ಹಣ ಒದಗಿಸಲಾಗುವುದು ಎಂದು ಮಾಹಿತಿ ನೀಡಿದರು. ವ್ಯಾಪಕ ಮಳೆ ಸಂದರ್ಭದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡುವ ಸಂಬAಧ ಆಯಾಯ ಶಾಲೆಯ ಮುಖ್ಯಸ್ಥರು ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು, ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಿಡಿಪಿಒಗಳು ಕ್ರಮವಹಿಸಬಹುದಾಗಿದೆ. ರಜೆ ನೀಡಿದ್ದಲ್ಲಿ ಸರ್ಕಾರಿ ರಜೆ ಅವಧಿಯಲ್ಲಿ ಸರಿದೂಗಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಸಲಹೆ ಮಾಡಿದರು. ತಮ್ಮ ತಮ್ಮ ವ್ಯಾಪ್ತಿಯಲ್ಲಿ ಮಳೆ ಗಮನಿಸಿ ಶಾಲಾಭಿವೃದ್ಧಿ ಸಮಿತಿಯಲ್ಲಿ ರಜೆ ಸಂಬAಧ ತೀರ್ಮಾನ ಕೈಗೊಳ್ಳಬಹುದಾಗಿದೆ. ಆ ನಿಟ್ಟಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.