ಮಡಿಕೇರಿ, ಜು. ೧೭: ೭೫ನೇ ಸ್ವಾತಂತ್ರೊö್ಯÃತ್ಸವದ ಅಂಗವಾಗಿ ೭೫ ಕಿ.ಮೀ. ಕಾಲ್ನಡಿಗೆ ಕಾರ್ಯಕ್ರಮದ ಪೂರ್ವಭಾವಿ ಸಭೆ ಮತ್ತು ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಣಾ ಕಾರ್ಯಕ್ರಮ ತಾ. ೧೯ ರಂದು ಕುಶಾಲನಗರದಲ್ಲಿ ನಡೆಯಲಿದೆ ಎಂದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಎಸ್. ಅನಂತ್ ಕುಮಾರ್ ತಿಳಿಸಿದ್ದಾರೆ.

ಕುಶಾಲನಗರದ ಬಿ.ಜಿ.ಟಿ. ಟವರ್ಸ್ ಸಭಾಂಗಣದಲ್ಲಿ ಅಪರಾಹ್ನ ೩ ಗಂಟೆಗೆ ನಡೆಯಲಿರುವ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಕೆಪಿಸಿಸಿ ಉಪಾಧ್ಯಕ್ಷ ವಿನಯ್ ಕುಮಾರ್ ಸೊರಕೆ, ಪ್ರಧಾನ ಕಾರ್ಯದರ್ಶಿ ಲಕ್ಷ÷್ಮಣ್, ಕುಶಾಲನಗರ ಬ್ಲಾಕ್ ಕಾಂಗ್ರೆಸ್‌ನ ಉಸ್ತುವಾರಿಗಳಾದ ಪ್ರದೀಪ್ ರೈ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.