ಮಡಿಕೇರಿ, ಜು. ೧೭: ಕುಶಾಲನಗರ ಸಮೀಪ ೭ನೇ ಹೊಸಕೋಟೆ ಗ್ರಾ.ಪಂ. ಕಾರ್ಯದರ್ಶಿ ಸುನಿತಾ ಕುಮಾರಿ ಎಂಬವರು ಬಿಜೆಪಿ ಟೋಪಿ ಧರಿಸಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂಬAಧ ತನಿಖೆ ಆರಂಭಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ತಿಳಿಸಿದ್ದಾರೆ.
ಗ್ರಾ.ಪಂ. ಕಾರ್ಯದರ್ಶಿ ಬಿಜೆಪಿ ಟೋಪಿ ಧರಿಸಿ ಸರ್ಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಗ್ಗೆ ಕಾಂಗ್ರೆಸ್ ಪ್ರಮುಖರಾದ ಕೆ.ಪಿ. ಚಂದ್ರಕಲಾ, ವಿ.ಪಿ. ಶಶಿಧರ್ ಮತ್ತಿತರರು ಪತ್ರಿಕಾಗೋಷ್ಠಿ ನಡೆಸಿ, ಕಾರ್ಯದರ್ಶಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ ಸಂಬAಧ ತಾ. ೧೪ರಂದು ‘ಶಕ್ತಿ’ಯಲ್ಲಿ ಪ್ರಕಟಗೊಂಡ ವರದಿಗೆ ಜಿ.ಪಂ. ಉಪ ಕಾರ್ಯದರ್ಶಿ ಅವರು ಸ್ಪಷ್ಟೀಕರಣ ನೀಡಿದ್ದು, ೭ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಅವರಿಗೆ ಪ್ರಕರಣಕ್ಕೆ ಸಂಬAಧಿಸಿದAತೆ ಈಗಾಗಲೇ ನಿಯಮಾನುಸಾರ ಕಾರಣ ಕೇಳಿ ನೋಟೀಸ್ ನೀಡಿ, ಅವರಿಂದ ಸ್ಪಷ್ಟೀಕರಣ ಪಡೆಯಲಾಗಿದೆ. ಆದರೆ, ಕಾರ್ಯದರ್ಶಿ ನೀಡಿರುವ ಸ್ಪಷ್ಟೀಕರಣವನ್ನು ಒಪ್ಪದೆ, ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ.
ಕಾರ್ಯದರ್ಶಿಗಳ ಶಿಸ್ತು ಪ್ರಾಧಿಕಾರವು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳೇ ಆಗಿದ್ದು, ವರದಿ ಬಂದ ನಂತರ ನಿಯಮಾನುಸಾರ ಕ್ರಮ ವಹಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.