ಮಡಿಕೇರಿ, ಜು. ೧೭: ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲೂಕಿನ ೩೭೩ ಫಲಾನುಭವಿಗಳ ಮನೆ ನಿರ್ಮಾಣಕ್ಕೆ ರಾಜ್ಯ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ. ಬೋಪಯ್ಯ ಅವರು ಕಾರ್ಯಾದೇಶ ಪತ್ರ ವಿತರಿಸಿದರು.
ನಗರದ ತಾ.ಪಂ.ಎಸ್‌ಜಿಎಸ್‌ವೈ ಸಭಾಂಗಣದಲ್ಲಿ ವಿವಿಧ ವಸತಿ ಯೋಜನೆಯಡಿ ಫಲಾನುಭವಿಗಳ ಮನೆ ನಿರ್ಮಾಣದ ಆದೇಶ ಪತ್ರ ವಿತರಿಸಿ ಮಾತನಾಡಿದ ಕೆ.ಜಿ. ಬೋಪಯ್ಯ ಅವರು, ವಸತಿ ರಹಿತರಿಗೆ ಮನೆ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದ್ದು, ಫೆಬ್ರವರಿ ಅಂತ್ಯದೊಳಗೆ ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸುವಂತೆ ಸಲಹೆ ನೀಡಿದರು.
ವಸತಿ ರಹಿತ ಫಲಾನುಭವಿಗಳ ಸಂಬAಧ ಗ್ರಾ.ಪಂ.ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸಲ್ಲಿಸಿರುವ ಪಟ್ಟಿಗೆ ಒಪ್ಪಿಗೆ ನೀಡಲಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬ ಬಡವರಿಗೂ ಸಹ ಸರ್ಕಾರದ ವಸತಿ ಯೋಜನೆಗಳು ತಲುಪಬೇಕು. ಯಾರೂ ಸಹ ವಾಸಕ್ಕೆ ಮನೆ ಹಾಗೂ ವಿದ್ಯುತ್ ಸಂಪರ್ಕ ಇಲ್ಲ ಎಂಬುದು ಕೇಳಿ ಬರಬಾರದು. ಆ ನಿಟ್ಟಿನಲ್ಲಿ ಗ್ರಾ.ಪಂ.ಗಳು ಅಭಿವೃದ್ಧಿಯತ್ತ ಮುನ್ನಡೆಯಬೇಕು.
ಮಡಿಕೇರಿ ತಾಲೂಕಿಗೆ ೮೩೦ ಮನೆಗಳ ನಿರ್ಮಾಣಕ್ಕೆ ಅವಕಾಶ ಆಗಿದ್ದು, ಆ ನಿಟ್ಟಿನಲ್ಲಿ ಪ್ರಥಮ ಹಂತದಲ್ಲಿ ೩೭೩ ಮನೆಗಳ ನಿರ್ಮಾಣಕ್ಕೆ ಕಾರ್ಯಾದೇಶ ಪತ್ರ ವಿತರಿಸಲಾಗಿದೆ ಎಂದು ಶಾಸಕರು ಹೇಳಿದರು.
ಅಂಬೇಡ್ಕರ್ ವಸತಿ ಯೋಜನೆಯಡಿ ೨.೨೦ ಲಕ್ಷ ರೂ. ಹಾಗೂ ಬಸವ ವಸತಿ ಯೋಜನೆಯಡಿ ೧.೬೨ ಲಕ್ಷ ರೂ. ಹಂತ ಹಂತವಾಗಿ ದೊರೆಯಲಿದೆ. ಜೊತೆಗೆ ತಾವು ಸಹ ಹಣ ಹೊಂದಿಸಿ ಉತ್ತಮ ಮನೆಯನ್ನು ನಿರ್ಮಾಣ ಮಾಡಿಕೊಳ್ಳಬಹುದು. ಸರ್ಕಾರದ ಮಾರ್ಗಸೂಚಿಯಂತೆ ಮನೆ ನಿರ್ಮಾಣ ಮಾಡಿಕೊಳ್ಳಲು ಮುಂದಾಗುವAತೆ ಕೆ.ಜಿ.ಬೋಪಯ್ಯ ಅವರು ಸಲಹೆ ಮಾಡಿದರು.
ಚೆಂಬು ಗ್ರಾ.ಪಂ. ವ್ಯಾಪ್ತಿಯಲ್ಲಿ ಭೂಕಂಪನಕ್ಕೆ ಸಂಬAಧಿಸಿದAತೆ ವಿಜ್ಞಾನಿಗಳ ವರದಿ ಆಧಾರದಂತೆ ಯಾರೂ ಸಹ ಆತಂಕ ಪಡಬೇಕಿಲ್ಲ, ಆದರೆ ಜಾಗ್ರತೆ ವಹಿಸುವುದು ಅತ್ಯಗತ್ಯ ಎಂದು ಕೆ.ಜಿ. ಬೋಪಯ್ಯ ನುಡಿದರು. ಪ್ರಾಕೃತಿಕ ವಿಕೋಪದಡಿ ಪ್ರತೀ ಗ್ರಾ.ಪಂ.ಗೆ ಜಿಲ್ಲಾಡಳಿತದಿಂದ ೫೦ ಸಾವಿರ ರೂ. ಬಿಡುಗಡೆ ಆಗಿದೆ. ಆ ನಿಟ್ಟಿನಲ್ಲಿ ಗ್ರಾ.ಪಂ.ಕಾರ್ಯಪಡೆಯು ಸರ್ಕಾರದ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸಬೇಕು.
ವಿದ್ಯುತ್ ವ್ಯತ್ಯಯ ಸಂಬAಧಿಸಿ ದಂತೆ ಸಹಾಯವಾಣಿ(೧೯೧೨)ಗೆ ಕರೆ ಮಾಡಿ ಮಾಹಿತಿ ನೀಡಬೇಕು. ಸಮಸ್ಯೆಗಳಿದ್ದಲ್ಲಿ ತಮ್ಮ ಗಮನಕ್ಕೆ ತರುವಂತಾಗಬೇಕು.
೯೪ಸಿ, ನಮೂನೆ-೫೭ ರಡಿ ಕೃಷಿ ಮಾಡುತ್ತಿರುವವರಿಗೆ ಅರ್ಜಿ ಸಲ್ಲಿಸಲು ಇನ್ನೂ ಅವಕಾಶವಿದ್ದು, ಅರ್ಹರು ತಹಶೀಲ್ದಾರರ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಮುಂದಾಗಬೇಕು ಎಂದು ಕೆ.ಜಿ. ಬೋಪಯ್ಯ ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.
ತಾ.ಪಂ.ಇ.ಒ ಶೇಖರ್ ಮಾತನಾಡಿ, ಸರ್ವರಿಗೂ ಸೂರು ಕಲ್ಪಿಸಬೇಕು ಎಂಬ ಉದ್ದೇಶದಿಂದ ಸರ್ಕಾರ ಮಡಿಕೇರಿ ತಾಲೂಕಿನ ೮೩೦ ಫಲಾನುಭವಿಗಳ ಗುರಿಯಲ್ಲಿ ಮೊದಲ ಹಂತದಲ್ಲಿ ೩೭೩ ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗುತ್ತದೆ. ವಿವಿಧ ವಸತಿ ಯೋಜನೆಗೆ ಆಯ್ಕೆಯಾಗಿರುವ ಫಲಾನುಭವಿಗಳು ಮನೆ ನಿರ್ಮಾಣ ಮಾಡಿಕೊಳ್ಳಲು ಮುಂದಾಗಬೇಕು. ಶಾಸಕರ ಪ್ರಯತ್ನದಿಂದ ಮಡಿಕೇರಿ ತಾಲೂಕಿನ ವಸತಿ ರಹಿತರಿಗೆ ಮನೆ ನಿರ್ಮಾಣಕ್ಕೆ ಅವಕಾಶವಾಗಿದೆ ಎಂದು ಹೇಳಿದರು.
ವೀರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲೂಕಿನ ವಿವಿಧ ಗ್ರಾ.ಪಂ.ಯ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು, ಫಲಾನುಭವಿಗಳು ಇತರರು ಇದ್ದರು. ಮೇಕೇರಿ ಗ್ರಾ.ಪಂ. ಪಿಡಿಒ ಶ್ರೀಧರ ಸ್ವಾಗತಿಸಿದರು. ಅಕ್ಷಿತಾ ನಿರೂಪಿಸಿದರು, ಸುನಿತಾ, ನವಾನಿ, ನಿಶಾರಾಣಿ ಪ್ರಾರ್ಥಿಸಿದರು, ಮದೆನಾಡು ಗ್ರಾ.ಪಂ. ಪಿಡಿಒ ಡಿ. ನಂಜುAಡಸ್ವಾಮಿ ವಂದಿಸಿದರು.