ಮಡಿಕೇರಿ, ಜು. ೧೮: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಪ್ರಸಕ್ತ (೨೦೨೨-೨೩ ನೇ) ಸಾಲಿನಲ್ಲಿ ಸಾಲ ಸೌಲಭ್ಯ ಒದಗಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಾಲ ಸೌಲಭ್ಯ ಪಡೆಯಲು ಇಚ್ಚಿಸುವವರು ನಿಗದಿತ ಅರ್ಜಿ ನಮೂನೆಗಳನ್ನು ಸುವಿಧಾ ಪೋರ್ಟಲ್ ತಿತಿತಿ.suviಜhಚಿ.ಞಚಿಡಿಟಿಚಿಣಚಿಞಚಿ. gov.iಟಿ ರ ಮೂಲಕವೇ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ ೨೦ ರೊಳಗೆ ಸಲ್ಲಿಸುವುದು.

ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವವರು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ ೧೮ ವರ್ಷಗಳಿಂದ ೫೫ ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ ಸರ್ಕಾರದ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರಿವು ಯೋಜನೆಯಡಿ ವಯೋಮಿತಿ ೧೮ ವರ್ಷಗಳಿಂದ ೩೦ ವರ್ಷಗಳ ಮಿತಿಯಲ್ಲಿರಬೇಕು. ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು ಹಾಗೂ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗಳಿಗೆ ಕುಟುಂಬದ ವಾರ್ಷಿಕ ವರಮಾನವು ಗ್ರಾಮಾಂತರ ಪ್ರದೇಶದವರಿಗೆ ರೂ. ೯೦ ಸಾವಿರಗಳು ಹಾಗೂ ಪಟ್ಟಣ ಪ್ರದೇಶದವರಿಗೆ ರೂ. ೧.೨೦ ಸಾವಿರ ಗಳಿಗಿಂತ ಕಡಿಮೆ ಇರಬೇಕು. ಅರಿವು ಶೈಕ್ಷಣಿಕ ನವೀಕರಣ ಯೋಜನೆಗೆ ವಾರ್ಷಿಕ ವರಮಾನವು ರೂ. ೩.೫೦ ಲಕ್ಷಗಳ ಮಿತಿಯೊಳಗಿರಬೇಕು. ಈ ಸೌಲಭ್ಯ ಪಡೆಯಲು ಇಚ್ಚಿಸುವ ಅರ್ಜಿದಾರರು hಣಣಠಿs://ಞvಛಿಜಛಿಟ. ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ ಸಂಖ್ಯೆ: ೦೮೦-೨೨೩೭೪೮೪೮ ಹಾಗೂ ಜಿಲ್ಲಾ ಕಚೇರಿಯ ದೂ. ೦೮೨೭೨-೨೨೧೬೫೬ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಆನ್‌ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಗಳನ್ನು, ದಾಖಲಾತಿಗಳೊಂದಿಗೆ ಆಗಸ್ಟ್ ೨೦ರೊಳಗೆ ಸುವಿಧಾ ತಂತ್ರಾAಶದ ಮುಖಾಂತರ ಸಲ್ಲಿಸಬೇಕು ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಕೆ. ಮಹಾದೇವಿ ತಿಳಿಸಿದ್ದಾರೆ.