ಮಡಿಕೇರಿ, ಜು. ೧೭: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ೨೦೨೨-೨೩ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸುವಿಧಾ ತಂತ್ರಾAಶದ ಮುಖಾಂತರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ.೨ ಲಕ್ಷಗಳವರೆಗೆ ಆರ್ಥಿಕ ನೆರವು ನೀಡಲಾಗುವುದು. ಇದರಲ್ಲಿ ಗರಿಷ್ಠ ಶೇ.೧೫ ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ.೪ ರ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿ ಗೆ ಸೇರಿದವರಾಗಿರಬೇಕು. (ವಿಶ್ವಕರ್ಮ, ಸವಿತಾ ಸಮಾಜ, ಉಪ್ಪಾರ, ಮಡಿವಾಳ, ನಿಜಶರಣ, ಅಂಬಿಗರ ಚೌಡಯ್ಯ, ಅಲೆಮಾರಿ/ ಅರೆ ಅಲೆಮಾರಿ ಜನಾಂಗ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ) ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.೯೮ ಸಾವಿರ, ಪಟ್ಟಣ ಪ್ರದೇಶದವರಿಗೆ ರೂ.೧.೨೦ ಲಕ್ಷ ರೂ ಗಳ ಒಳಗಿರಬೇಕು.
ಅರ್ಜಿದಾರರ ವಯಸ್ಸು ೧೮ ರಿಂದ ೫೫ ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯಲು ಸುವಿಧಾ ತಂತ್ರಾAಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು hಣಣಠಿs://suviಜhಚಿ.ಞಚಿಡಿಟಿಚಿಣಚಿಞಚಿ.gov.iಟಿ ಜಾಲತಾಣದಲ್ಲಿ ಅರ್ಜಿ ಸಲ್ಲಿಸಬಹುದು. ಹಾಗೂ ನಿಗಮದ ವೆಬ್ಸೈಟ್ ತಿತಿತಿ.ಜbಛಿಜಛಿ.ಞಚಿಡಿಟಿಚಿಣಚಿಞಚಿ. gov.iಟಿ ಇಲ್ಲಿ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ ಸಂಖ್ಯೆ ೦೮೦-೨೨೩೭೪೮೩೨ ಮತ್ತು ೯೬೦೬೦೬೬೩೮೯ ಅಥವಾ ೮೮೨೪೩೦೦೪೦೦ ಹಾಗೂ ಜಿಲ್ಲಾ ಕಚೇರಿಯ ದೂ.ಸಂ.೦೮೨೭೨-೨೨೧೬೫೬ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಆನ್ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್, ೨೪ ರೊಳಗೆ ಸುವಿಧಾ ತಂತ್ರಾAಶದ ಮೂಲಕ ಸಲ್ಲಿಸಬಹುದು. ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸುವಂತಿಲ್ಲ. ಸಂಬAಧಪಟ್ಟ ಜಿಲ್ಲೆಗಳ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿಯ ಅವಧಿಯಲ್ಲಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ವ್ಯವಸ್ಥೆ ಇರುತ್ತದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಕೆ.ಮಹಾದೇವಿ ತಿಳಿಸಿದ್ದಾರೆ.