ವಿದ್ಯಾರ್ಥಿನಿ ಸಾವಿನ ಪ್ರಕರಣ-ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ
ತಮಿಳುನಾಡು, ಜು. ೧೭: ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪ್ರತಿಭಟನಾಕಾರರು ಶಾಲಾ ಆವರಣಕ್ಕೆ ನುಗ್ಗಿ ಶಾಲಾ ಬಸ್ ಮತ್ತು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಘಟನೆ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯ ಕನ್ನಿಯಮೂರಿನಲ್ಲಿ ಭಾನುವಾರ ನಡೆದಿದೆ. ಖಾಸಗಿ ಶಾಲೆಯಲ್ಲಿ ಶಿಕ್ಷಕರ ಕಿರುಕುಳ ತಾಳಲಾರದೆ ೧೨ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದ್ದು, ತಮಿಳುನಾಡು ಶಾಲಾ ಶಿಕ್ಷಣ ಇಲಾಖೆ ಘಟನೆಗೆ ಸಂಬAಧಿಸಿದAತೆ ವಿವರವಾದ ವರದಿ ನೀಡುವಂತೆ ಮುಖ್ಯ ಶಿಕ್ಷಣಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಕಲ್ಲಕುರಿಚಿಯ ಚಿನ್ನಸಲೇಂ ಎಂಬಲ್ಲಿ ಪೊಲೀಸರು ಹಾಕಿದ್ದ ಬ್ಯಾರಿಕೇಡ್ಗಳನ್ನು ತಳ್ಳಿ ಪ್ರತಿಭಟನಾಕಾರರು ಶಾಲೆಯ ಅವರಣದೊಳಗೆ ನುಗ್ಗಿದ ಪ್ರತಿಭಟನಾಕಾರರು ಅಲ್ಲಿ ನಿಲ್ಲಿಸಿದ್ದ ಶಾಲಾ ಬಸ್ಗಳ ಕಿಟಕಿ ಗಾಜುಗಳನ್ನು ಮುರಿದು ಬೆಂಕಿ ಹಚ್ಚಿದರು. ಬಸ್ನ ಮೇಲೆ ಏರಿ ಕೇಕೆ ಹಾಕುತ್ತಾ, ಆಕ್ರೋಶ ವ್ಯಕ್ತಿಪಡಿಸುತ್ತಾ ಧ್ವಂಸ ಮಾಡಿದರು. ಹಲವು ಬಸ್ಗಳು ತಲೆಕೆಳಗಾಗಿ ಬಿದ್ದವು. ಬೆಂಕಿ ಹಚ್ಚಿದ್ದರಿಂದ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿತು. ಪರಿಸ್ಥಿತಿಯನ್ನು ತಿಳಿಗೊಳಿಸಲು ಕಲ್ಲಕುರಿಚಿ ಜಿಲ್ಲಾ ಪೊಲೀಸರು ಲಾಠಿಪ್ರಹಾರ ಮಾಡಿದರು. ಆಶ್ರುವಾಯು ಸಿಡಿಸಿದರು. ಆಗ ಪ್ರತಿಭಟನಾಕಾರರು ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿದರು. ಘಟನೆಯಲ್ಲಿ ಡಿಐಜಿ ಎಂ. ಪಾಂಡಿಯಾನ್ ಸೇರಿದಂತೆ ೨೦ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ೧೩ಕ್ಕೂ ಹೆಚ್ಚು ಬಸ್ಸುಗಳಿಗೆ ಬೆಂಕಿ ಹಚ್ಚಿ ಕೆಲವು ಬಸ್ಸುಗಳನ್ನು ಜಖಂಗೊಳಿಸಿದ್ದಾರೆ. ಜುಲೈ ೧೩ ರಂದು ಮುಂಜಾನೆ ಕಡಲೂರು ಜಿಲ್ಲೆಯ ಪೆರಿಯನೆಸಲೂರು ಗ್ರಾಮದ ೧೭ ವರ್ಷದ ಶ್ರೀಮತಿ ಎಂಬ ವಿದ್ಯಾರ್ಥಿನಿ ಶಾಲೆಯ ಹಾಸ್ಟೆಲ್ ಆವರಣದಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ ಶಾಲೆಯು ಕಲ್ಲಕುರಿಚಿ ಜಿಲ್ಲೆಯ ಚಿನ್ನಸೇಲಂ ಬಳಿಯ ಕಣಿಯಮೂರ್ನಲ್ಲಿದೆ. ೧೨ನೇ ತರಗತಿ ವಿದ್ಯಾರ್ಥಿನಿ ಶ್ರೀಮತಿ ಹಾಸ್ಟೆಲ್ನಲ್ಲಿ ವಾಸವಾಗಿದ್ದಳು. ಹಾಸ್ಟೆಲ್ನ ಮೂರನೇ ಮಹಡಿಯ ಕೊಠಡಿಯೊಂದರಲ್ಲಿ ವಾಸವಾಗಿದ್ದ ವಿದ್ಯಾರ್ಥಿನಿ ಮೇಲಿನ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಶಂಕಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ದೇಹಕ್ಕೆ ಗಾಯವಾಗಿದ್ದು ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಅಂದಿನಿAದ ಶ್ರೀಮತಿ ಅವರ ಕುಟುಂಬ ಸದಸ್ಯರು ಮತ್ತು ಅವರ ಗ್ರಾಮದ ಜನರು ಕಲ್ಲಾಕುರಿಚಿಯ ಶಾಲೆ ಮತ್ತು ಸರ್ಕಾರಿ ಆಸ್ಪತ್ರೆಯ ಮುಂದೆ ನಿರಂತರವಾಗಿ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.
ಇಂದು ರಾಷ್ಟçಪತಿ ಸ್ಥಾನಕ್ಕೆ ಚುನಾವಣೆ
ನವದೆಹಲಿ, ಜು. ೧೭: ತಾ. ೧೮ ರಂದು (ಇಂದು) ರಾಷ್ಟçಪತಿ ಚುನಾವಣೆ ನಡೆಯಲಿದೆ. ದೇಶದ ಸುಮಾರು ೪,೮೦೦ ಚುನಾಯಿತ ಜನಪ್ರತಿನಿಧಿಗಳು ೧೫ನೇ ರಾಷ್ಪçಪತಿ ಆಯ್ಕೆ ಮಾಡಲು ಸೋಮವಾರ ಮತದಾನ ಮಾಡಲಿದ್ದಾರೆ. ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಶೇ. ೬೦ ರಷ್ಟು ಮತಗಳನ್ನು ಪಡೆದು ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಸೋಲಿಸುವ ಸಾಧ್ಯತೆ ಹೆಚ್ಚಾಗಿದೆ. ಸಂಸತ್ ಭವನ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮತದಾನ ನಡೆಯಲಿದ್ದು, ತಾ. ೨೧ ರಂದು ಸಂಸತ್ ಭವನದಲ್ಲಿ ಮತ ಎಣಿಕೆ ನಡೆಯಲಿದ್ದು, ತಾ. ೨೫ ರಂದು ಮುಂದಿನ ರಾಷ್ಟçಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಾದೇಶಿಕ ಪಕ್ಷಗಳಾದ ಬಿಜು ಜನತಾ ದಳ, ವೈಎಸ್ಆರ್ ಕಾಂಗ್ರೆಸ್, ಬಹುಜನ ಸಮಾಜ ಪಕ್ಷ, ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ, ತೆಲುಗು ದೇಶಂ ಪಕ್ಷ, ಜನತಾ ದಳ-ಜಾತ್ಯತೀತ, ಶಿರೋಮಣಿ ಅಕಾಲಿದಳ, ಶಿವಸೇನೆ ಮುಂತಾದವುಗಳ ಬೆಂಬಲದೊAದಿಗೆ ಮುರ್ಮು ಅವರ ಮತ ಹಂಚಿಕೆಯು ಸುಮಾರು ಮೂರನೇ ಎರಡರಷ್ಟು ತಲುಪುವ ಸಾಧ್ಯತೆಯಿದೆ ಮತ್ತು ಅವರು ಬುಡಕಟ್ಟು ಸಮುದಾಯದಿಂದ ಉನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸುತ್ತಿರುವ ಮೊದಲ ಮಹಿಳೆಯಾಗಲಿದ್ದಾರೆ. ಪ್ರಾತಿನಿಧ್ಯ ವ್ಯವಸ್ಥೆಯ ಮೂಲಕ ರಾಷ್ಟçಪತಿ ಆಯ್ಕೆ ನಡೆಯಲಿದ್ದು, ಚುನಾಯಿತ ಸಂಸದರು ಮತ್ತು ರಾಜ್ಯ ಶಾಸಕಾಂಗ ಸಭೆಗಳ ಸದಸ್ಯರು ಮತದಾನ ಮಾಡಲು ಅರ್ಹರಾಗಿದ್ದಾರೆ. ನಾಮನಿರ್ದೇಶಿತ ಸಂಸದರು ಮತ್ತು ಶಾಸಕರು ಮತ್ತು ವಿಧಾನ ಪರಿಷತ್ತಿನ ಸದಸ್ಯರು ಈ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿರುವುದಿಲ್ಲ.
ಸಿಆರ್ಪಿಎಫ್ ಯೋಧ ಹುತಾತ್ಮ
ಶ್ರೀನಗರ, ಜು. ೧೭: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಪುಲ್ವಾಮದಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಸಿಆರ್ಪಿಎಫ್ ಯೋಧ ಹುತಾತ್ಮರಾಗಿದ್ದಾರೆ. ಮೂಲಗಳ ಪ್ರಕಾರ ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿ ಪೊಲೀಸರು ಮತ್ತು ಸಿಆರ್ಪಿಎಫ್ನ ಜಂಟಿ ಚೆಕ್ಪೋಸ್ಟ್ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಿಆರ್ಪಿಎಫ್ ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಪುಲ್ವಾಮಾ ಜಿಲ್ಲೆಯ ಗೊಂಗೂ ಕ್ರಾಸಿಂಗ್ ಬಳಿ ದಾಳಿ ನಡೆದಿದ್ದು, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಹಾಯಕ ಸಬ್ ಇನ್ಸ್ಪೆಕ್ಟರ್ ಉಗ್ರ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಸಮೀಪದ ಸೇಬಿನ ತೋಟದಿಂದ ಚೆಕ್ಪೋಸ್ಟ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದು, ಸಿಆರ್ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಾಯಗೊಂಡ ಅಧಿಕಾರಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆತ ಹುತಾತ್ಮರಾಗಿದ್ದಾನೆ. ಪ್ರದೇಶವನ್ನು ಸುತ್ತುವರಿದಿದ್ದು, ಉಗ್ರರನ್ನು ಪತ್ತೆ ಹಚ್ಚಲು ಮತ್ತು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ಅಂತೆಯೇ ಘಟನಾ ಪ್ರದೇಶದ ಸುತ್ತಮುತ್ತಲ ಪ್ರದೇಶಗಳಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಲಾಗುತ್ತಿದೆ.
ಪಾಕಿಸ್ತಾನದಲ್ಲಿ ಭಾರತದ ವಿಮಾನ ತುರ್ತು ಭೂಸ್ಪರ್ಶ
ನವದೆಹಲಿ, ಜು. ೧೭: ತಾಂತ್ರಿಕ ದೋಷದಿಂದಾಗಿ ಭಾರತದ ಪ್ರಯಾಣಿಕ ವಿಮಾನವೊಂದು ಪಾಕಿಸ್ತಾನದಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಭಾನುವಾರ ನಡೆದಿದೆ. ಶಾರ್ಜಾದಿಂದ ಹೈದರಾಬಾದ್ಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷವಿದೆ ಎಂದು ಪೈಲಟ್ ವರದಿ ಮಾಡಿದ ಹಿನ್ನೆಲೆಯಲ್ಲಿ ವಿಮಾನ ಇಂದು ಪಾಕಿಸ್ತಾನದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ವಿಮಾನವು ಕರಾಚಿಯಲ್ಲಿ ಮುನ್ನೆಚ್ಚರಿಕೆಯಾಗಿ ಲ್ಯಾಂಡಿAಗ್ ಮಾಡಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಪ್ರಯಾಣಿಕರನ್ನು ಹೈದರಾಬಾದ್ಗೆ ಕರೆತರಲು ಕರಾಚಿಗೆ ಹೆಚ್ಚುವರಿ ವಿಮಾನವನ್ನು ಕಳುಹಿಸಲಾಗುವುದು ಎಂದು ಭಾರತೀಯ ವಿಮಾನ ಸಂಸ್ಥೆ ಇಂಡಿಗೋ ಹೇಳಿದೆ. ಇಂಡಿಗೋ ವಿಮಾನ ೬ಇ-೧೪೦೬ ಶಾರ್ಜಾದಿಂದ ಹೈದರಾಬಾದ್ ಟೇಕ್ ಆಫ್ ಆಗಿತ್ತು. ಆದರೆ ಮಾರ್ಗ ಮಧ್ಯೆ ತಾಂತ್ರಿಕದೋಷ ಕಂಡುಬAದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿಮಾನವನ್ನು ಪಾಕಿಸ್ತಾನದ ಕರಾಚಿಗೆ ತಿರುಗಿಸಲಾಯಿತು. ಪೈಲಟ್ ತಾಂತ್ರಿಕ ದೋಷವನ್ನು ಗಮನಿಸಿದ್ದು, ಅಗತ್ಯ ಕಾರ್ಯವಿಧಾನಗಳನ್ನು ಅನುಸರಿಸಲಾಯಿತು.
ಉಪರಾಷ್ಟçಪತಿ ಚುನಾವಣೆಗೆ ಜಗದೀಪ್ ಧಂಖರ್ ಅಭ್ಯರ್ಥಿ
ನವದೆಹಲಿ, ಜು. ೧೭: ಭಾರತೀಯ ಜನತಾ ಪಕ್ಷ ಉಪರಾಷ್ಟçಪತಿ ಚುನಾವಣೆಗೆ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು, ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ರನ್ನು ತನ್ನ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ. ಈ ಕುರಿತಂತೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಪಶ್ಚಿಮ ಬಂಗಾಳದ ಹಾಲಿ ರಾಜ್ಯಪಾಲರಾಗಿರುವ ಜಗದೀಪ್ ಧಂಖರ್ರನ್ನು ಉಪರಾಷ್ಟçಪತಿ ಚುನಾವಣೆ ಎನ್ಡಿಎ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ಈ ಹಿಂದೆ ಕರ್ನಾಟಕ, ಆಂಧ್ರಪ್ರದೇಶ ಬಿಜೆಪಿಯ ಹಲವು ನಾಯಕರ ಹೆಸರುಗಳು ಉಪರಾಷ್ಟçಪತಿ ಅಭ್ಯರ್ಥಿ ಪಟ್ಟಿಯಲ್ಲಿ ಕೇಳಿ ಬಂದಿತ್ತಾದರೂ ಅಂತಿಮವಾಗಿ ಜಗದೀಪ್ ಧಂಖರ್ರನ್ನು ಉಪರಾಷ್ಟçಪತಿ ಚುನಾವಣೆಯ ಎನ್ಡಿಎ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. ಶನಿವಾರ ಸಂಜೆ ನಡೆದ ಭಾರತೀಯ ಜನತಾ ಪಕ್ಷದ ಸಂಸದೀಯ ಮಂಡಳಿಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಹಾಲಿ ಉಪರಾಷ್ಟçಪತಿ ಎಂ. ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್ ೧೦ ರಂದು ಕೊನೆಗೊಳ್ಳಲಿದ್ದು, ಉಪರಾಷ್ಟçಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ತಾ. ೧೯ ಕೊನೆಯ ದಿನಾಂಕವಾಗಿದ್ದು, ಆಗಸ್ಟ್ ೬ ರಂದು ಚುನಾವಣೆ ನಿಗದಿಯಾಗಿದೆ.