ಮಡಿಕೇರಿ, ಜು. ೧೮: ಪುಟ್ಟ ಜಿಲ್ಲೆ ಕೊಡಗು ಅಭಿವೃದ್ಧಿ ವಂಚಿತವಾಗುತ್ತಿದ್ದು, ಶಿಕ್ಷಣ, ಉದ್ಯೋಗ, ಕೃಷಿ ಮತ್ತು ಪ್ರವಾಸೋದ್ಯಮಕ್ಕೆ ಅಗತ್ಯ ಸಹಕಾರ ನೀಡಬೇಕೆಂದು ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರಿಗೆ ಮನವಿ ಪತ್ರ ಸಲ್ಲಿಸಿದೆ.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಹಾಗೂ ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ವಾಣಿಜ್ಯೋದ್ಯಮ ಸಂಸ್ಥೆಗಳ ರಾಜ್ಯಮಟ್ಟದ ಸಮ್ಮೇಳನದಲ್ಲಿ ಪಾಲ್ಗೊಂಡ ಕೊಡಗಿನ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಸಮಸ್ಯೆಗಳನ್ನು ವಿವರಿಸಿತು.
ಕೊಡಗು ತನ್ನ ವಿಶಿಷ್ಟ ಸಂಸ್ಕೃತಿಯಿAದ ಶ್ರೀಮಂತ ಜಿಲ್ಲೆ ಎನಿಸಿಕೊಂಡಿದ್ದರೂ ಅಭಿವೃದ್ಧಿಯಲ್ಲಿ ಹಿನ್ನಡೆಯನ್ನು ಅನುಭವಿಸಿದೆ. ಕೃಷಿ ಪ್ರಧಾನ ಜಿಲ್ಲೆಯಲ್ಲಿ ಕಾಫಿ, ಏಲಕ್ಕಿ, ಭತ್ತ, ಕರಿಮಣಸನ್ನು ಪ್ರಮುಖ ಬೆಳೆಯನ್ನಾಗಿ ಬೆಳೆಯಲಾಗುತ್ತಿದೆ. ಆದರೆ ಉತ್ಪಾದನೆ ಕಡಿಮೆಯಾಗುತ್ತಿದೆ, ಏಲಕ್ಕಿ ಮತ್ತು ಕಿತ್ತಳೆ ಅಳಿವಿನಂಚಿನಲ್ಲಿದೆ. ಇವುಗಳನ್ನು ಪುನಶ್ಚೇತನಗೊಳಿಸಲು ಆರ್ಥಿಕ ಸಹಾಯ ನೀಡಿ ಕೃಷಿಕರನ್ನು ಪ್ರೋತ್ಸಾಹಿಸಿ ಸಹಕರಿಸಬೇಕು.
ಇತ್ತೀಚಿನ ದಿನಗಳಲ್ಲಿ ಕೊಡಗಿನಲ್ಲಿ ಹಲವು ರೀತಿಯ ಅಡಿಕೆ ತಳಿಗಳನ್ನು ರೈತರು ಬೆಳೆಸುತ್ತಿದ್ದಾರೆ. ಆದರೆ ಮಾರುಕಟ್ಟೆ ಧಾರಣೆಯು ವರ್ಷಂಪ್ರತಿ ಏರಿಳಿತದಿಂದ ಕೂಡಿರುವುದರಿಂದ ಬೆಳೆಗಾರರಿಗೆ ಸಂಕಷ್ಟ ಎದುರಾಗುತ್ತಿದೆ. ಕಬ್ಬು ಮತ್ತು ಬೇರೆ ಬೆಳೆಗಳಿಗೆ ಬೆಂಬಲ ಬೆಲೆ ನೀಡುತ್ತಿರುವಂತೆ ಅಡಿಕೆಗೂ ಬೆಂಬಲ ಬೆಲೆ ನೀಡಬೇಕು.
ಕೊಡಗಿನಲ್ಲಿ ಬೆಳೆಯುವ ಶುಂಠಿ, ಬಟರ್ ಫ್ರೂಟ್, ಹಲಸಿನ ಹಣ್ಣು, ಫ್ಯಾಷನ್ ಫ್ರೂಟ್ ಸೇರಿದಂತೆ ವಿವಿಧ ಹಣ್ಣು, ತರಕಾರಿ ಬೆಳೆಗಳನ್ನು ಸಂರಕ್ಷಿಸಲು ಗೋದಾಮು ಮತ್ತು ಕೋಲ್ಡ್ ಸ್ಟೋರೇಜ್‌ಗಳನ್ನು ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ ಮೂಲಕÀ ಸ್ಥಾಪಿಸಿದಲ್ಲಿ ವ್ಯಾಪಾರ ಮತ್ತು ರಫ್ತು ಮಾಡಲು ಅನುಕೂಲವಾಗುತ್ತದೆ. ಕೊಡಗಿನ ಆಂಥೋರಿಯA ಗುಣಮಟ್ಟದಿಂದ ಕೂಡಿದ್ದು, ವಿದೇಶಗಳಲ್ಲೂ ಪ್ರಸಿದ್ಧಿಯನ್ನು ಪಡೆದಿದೆ. ಈ ಬೆಳೆಗೆ ಸೂಕ್ತ ಮಾರುಕಟ್ಟೆ ದರ ಮತ್ತು ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸಬೇಕು. ಇದರಿಂದ ಬಹುತೇಕ ಬೆಳೆಗಾರರು ಈ ಕೃಷಿಯನ್ನು ಅವಲಂಬಿಸಿ ಆರ್ಥಿಕ ಪ್ರಗತಿ ಸಾಧಿಸಬಹುದಾಗಿದೆ.
ರೈತರಿಗೆ ಸರಿಯಾದ ಸಮಯದಲ್ಲಿ ರಸಗೊಬ್ಬರ ಪೂರೈಸಬೇಕು ಮತ್ತು ಗೊಬ್ಬರಕ್ಕೆ ಧನಸಹಾಯ (ಸಬ್ಸಿಡಿ) ನೀಡಬೇಕು. ಜಿಲ್ಲೆಯಲ್ಲಿ ಯಾವುದೇ ಕೈಗಾರಿಕೆಗಳಿಲ್ಲದಿರುವುದರಿಂದ ವಿದ್ಯಾವಂತ ಯುವ ಜನತೆೆ ಉದ್ಯೋಗವನ್ನರಿಸಿ ಕೊಂಡು ದೂರದ ಬೆಂಗಳೂರು, ಚೆನ್ನೆöÊ, ದೆಹಲಿ ಮತ್ತಿತರ ರಾಜ್ಯ ಹಾಗೂ ವಿದೇಶಗಳಿಗೆ ತೆರಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಡಗಿನಲ್ಲಿ ಪರಿಸರ ಸ್ನೇಹಿ ಕೈಗಾರಿಕೆಗಳನ್ನು ಸ್ಥಾಪಿಸಲು ಸರಕಾರ ಸಹಕರಿಸಬೇಕು. ಜಿಲ್ಲೆಯಲ್ಲಿ ಐ.ಟಿ ಮತ್ತು ಬಿ.ಟಿ ಪಾರ್ಕ್ ಹಾಗೂ ಇಲ್ಲಿಯ ಪರಿಸರಕ್ಕೆ ಧಕ್ಕೆಯಾಗದ ಇತರ ಆಧುನಿಕ ಕೈಗಾರಿಕೋದ್ಯಮಗಳನ್ನು ಸ್ಥಾಪಿಸಿ ಸ್ಥಳೀಯ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಬೇಕು.
ಕೊಡಗು ಜಿಲ್ಲೆ ಭೌಗೋಳಿಕವಾಗಿ ಪ್ರವಾಸಿ ಕೇಂದ್ರವಾಗಿದ್ದು, ಜಿಲ್ಲೆಯ ವಿವಿಧ ಕಡೆಗಳಲ್ಲಿ ಸ್ವಾಭಾವಿಕ ಹಾಗೂ ಪ್ರಕೃತಿ ನಿರ್ಮಿತ ಪ್ರವಾಸಿ ಕೇಂದ್ರಗಳಿವೆ. ಈಗಾಗಲೇ ಚಾಲ್ತಿಯಲ್ಲಿರುವ ಸ್ಟಾರ್ಟ್ ಅಪ್ ಇಂಡಿಯಾ ಹಾಗೂ ಸ್ಟಾö್ಯಂಡ್ ಅಪ್ ಇಂಡಿಯಾ ಬಗ್ಗೆ ಸೂಕ್ತ ಮಾಹಿತಿಯನ್ನು ನೀಡುವ ನಿಟ್ಟಿನಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಮೂಲಕÀ ಕಾರ್ಯಾಗಾರಗಳನ್ನು ರೂಪಿಸಿ ಯುವ ಜನತೆಗೆ ಮಾಹಿತಿ ಹಂಚಿಕೆ ಮಾಡಿ ಉತ್ತೇಜನ ನೀಡುವ ಯೋಜನೆಗಳನ್ನು ಕಾರ್ಯಗತಗೊಳಿಸಬೇಕು.
ಕೊಡವ ಹೆರಿಟೇಜ್ ಸೆಂಟರ್ ಯೋಜನೆ ಕಳೆದ ೧೫ ವರ್ಷಗಳಿಂದ ಪೂರ್ಣಗೊಂಡಿಲ್ಲ. ಮಲ್ಲಳ್ಳಿ ಜಲಪಾತ ಮತ್ತು ಇರ್ಪು ಜಲಪಾತದ ಕಾಮಗಾರಿ ಅಪೂರ್ಣಗೊಂಡಿದೆ. ಪ್ರವಾಸೋದ್ಯಮಕ್ಕೆ ಸಂಬAಧಿಸಿದ ಹಲವು ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿವೆ. ಇವುಗಳನ್ನು ಚುರುಕುಗೊಳಿಸಲು ಸಮಿತಿಯೊಂದನ್ನು ರಚಿಸಿ ಸಾರ್ವಜನಿಕರ ಸಹಭಾಗಿತ್ವಕ್ಕೆ ಅವಕಾಶ ಕಲ್ಪಿಸಿದರೆ ಯೋಜನೆಗಳು ಶೀಘ್ರ ಪೂರ್ಣಗೊಳ್ಳಬಹುದು.
ಕೊಡಗಿನಲ್ಲಿ ದೊಡ್ಡ ಕೈಗಾರಿಕಾ ಉದ್ಯಮಗಳನ್ನು ನಡೆಸಲು ಸಾಧ್ಯವಾಗದ ಕಾರಣ ಪ್ರವಾಸೋದ್ಯಮಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಅನಿವಾರ್ಯತೆ ಇದೆ. ರಾಜಾಸೀಟು ಮತ್ತು ಮಲ್ಲಳ್ಳಿ ಜಲಪಾತದಲ್ಲಿ ಕೇಬಲ್ ಕಾರ್, ಜೀಪ್ ಲೈನ್, ವಾಟರ್ ಸ್ಪೋಟ್ಸ್, ಬೋಟಿಂಗ್ ಸೇರಿದಂತೆ ಪ್ರವಾಸೋದ್ಯಮಕ್ಕೆ ಪೂರಕವಾದ ಯೋಜನೆಗಳನ್ನು ರೂಪಿಸಬೇಕಾಗಿದೆ. ಜನರ ಅನುಕೂಲಕ್ಕಾಗಿ ಪ್ರವಾಸೋದ್ಯಮ ನಿಯಮಗಳನ್ನು ಜಾರಿಗೆ ತರಬೇಕು.
ಕೊಡಗಿನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅನಧಿಕೃತ ಹೋಂಸ್ಟೇಗಳು ತಲೆ ಎತ್ತಿವೆ. ಇದನ್ನು ತಪ್ಪಿಸಲು ಪ್ರವಾಸಿ ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿ ನೋಂದಣಿಯಾಗಿರುವ ಹೋಂಸ್ಟೇ, ಹೊಟೇಲ್ ಮತ್ತು ಪ್ರವಾಸಿತಾಣಗಳ ಮಾಹಿತಿಯನ್ನು ನೀಡುವಂತಾಗಬೇಕು. ಪ್ರವಾಸೋದ್ಯಮ ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ಸಹಾಯಕ ನಿರ್ದೇಶಕರ ಹುದ್ದೆ ಖಾಲಿ ಇದ್ದು ತುರ್ತಾಗಿ ನೇಮಕ ಮಾಡಬೇಕು.
ಪ್ರವಾಸಿತಾಣಗಳ ವ್ಯಾಪ್ತಿಯಲ್ಲಿ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆ ಕಾಡುತ್ತಿದೆ. ಶುಚಿತ್ವಕ್ಕೆ ಆದ್ಯತೆ ನೀಡದೆ ಇರುವುದರಿಂದ ತ್ಯಾಜ್ಯಗಳ ರಾಶಿ ಎಲ್ಲೆಂದರಲ್ಲಿ ಬೀಳುತ್ತಿವೆ. ಇದರಿಂದ ವನ್ಯಜೀವಿಗಳು ಮತ್ತು ಪರಿಸರಕ್ಕೂ ಹಾನಿಯಾಗುತ್ತಿದೆ. ಪ್ರವಾಸಿಗರು ಎಲ್ಲೆಂದರಲ್ಲಿ ಅಡುಗೆ ಮಾಡಿ ಅಶುಚಿತ್ವದ ವಾತಾವರಣ ಸೃಷ್ಟಿಸುತ್ತಿದ್ದಾರೆ. ಆದ್ದರಿಂದ ಪ್ರವಾಸಿತಾಣಗಳ ಬಳಿ ಮೂಲಭೂತ ಸೌಲಭ್ಯಗಳು, ವಾಹನ ನಿಲುಗಡೆ, ಅಡುಗೆ ಮಾಡಲು ಮತ್ತು ಕಸವಿಲೇವಾರಿಗೆ ಎಲ್ಲಾ ವ್ಯವಸ್ಥೆ ಕಲ್ಪಿಸಬೇಕು ಎಂದು ನಿಯೋಗ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದೆ.
ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಎಂ.ಬಿ.ದೇವಯ್ಯ, ಪ್ರಧಾನ ಕಾರ್ಯದರ್ಶಿ ನವೀನ್ ಅಂಬೇಕಲ್, ಸಂಘಟನಾ ಕಾರ್ಯದರ್ಶಿಗಳಾದ ಮೋಂತಿ ಗಣೇಶ್, ಬಿ.ಆರ್. ಪ್ರಮೋದ್, ಎಫ್‌ಕೆಸಿಸಿಐಯ ರಾಜ್ಯ ನಿರ್ದೇಶಕ ಗಿರೀಶ್ ಗಣಪತಿ, ಜಿಲ್ಲಾ ನಿರ್ದೇಶಕರು ಗಳಾದ ತಿಮ್ಮಶೆಟ್ಟಿ, ಎ.ಪಿ. ವೀರರಾಜು, ಕೊಡ್ಲಿಪೇಟೆ ಸ್ಥಾನೀಯ ಸಮಿತಿ ಅಧ್ಯಕ್ಷ ಯತೀಶ್ ಕುಮಾರ್, ಸಿದ್ದಾಪುರ ಸ್ಥಾನೀಯ ಸಮಿತಿ ಅಧ್ಯಕ್ಷ ಕೆ.ಕೆ. ಶ್ರೀನಿವಾಸ್, ಮಡಿಕೇರಿ ನಗರಾಧ್ಯಕ್ಷ ಎಂ. ಧನಂಜಯ ಮತ್ತಿತರರು ನಿಯೋಗದಲ್ಲಿದ್ದರು.ಸಮಿತಿಯೊಂದನ್ನು ರಚಿಸಿ ಸಾರ್ವಜನಿಕರ ಸಹಭಾಗಿತ್ವಕ್ಕೆ ಅವಕಾಶ ಕಲ್ಪಿಸಿದರೆ ಯೋಜನೆಗಳು ಶೀಘ್ರ ಪೂರ್ಣಗೊಳ್ಳಬಹುದು.
ಕೊಡಗಿನಲ್ಲಿ ದೊಡ್ಡ ಕೈಗಾರಿಕಾ ಉದ್ಯಮಗಳನ್ನು ನಡೆಸಲು ಸಾಧ್ಯವಾಗದ ಕಾರಣ ಪ್ರವಾಸೋದ್ಯಮಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಅನಿವಾರ್ಯತೆ ಇದೆ. ರಾಜಾಸೀಟು ಮತ್ತು ಮಲ್ಲಳ್ಳಿ ಜಲಪಾತದಲ್ಲಿ ಕೇಬಲ್ ಕಾರ್, ಜೀಪ್ ಲೈನ್, ವಾಟರ್ ಸ್ಪೋಟ್ಸ್, ಬೋಟಿಂಗ್ ಸೇರಿದಂತೆ ಪ್ರವಾಸೋದ್ಯಮಕ್ಕೆ ಪೂರಕವಾದ ಯೋಜನೆಗಳನ್ನು ರೂಪಿಸಬೇಕಾಗಿದೆ. ಜನರ ಅನುಕೂಲಕ್ಕಾಗಿ ಪ್ರವಾಸೋದ್ಯಮ ನಿಯಮಗಳನ್ನು ಜಾರಿಗೆ ತರಬೇಕು.
ಕೊಡಗಿನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅನಧಿಕೃತ ಹೋಂಸ್ಟೇಗಳು ತಲೆ ಎತ್ತಿವೆ. ಇದನ್ನು ತಪ್ಪಿಸಲು ಪ್ರವಾಸಿ ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿ ನೋಂದಣಿಯಾಗಿರುವ ಹೋಂಸ್ಟೇ, ಹೊಟೇಲ್ ಮತ್ತು ಪ್ರವಾಸಿತಾಣಗಳ ಮಾಹಿತಿಯನ್ನು ನೀಡುವಂತಾಗಬೇಕು. ಪ್ರವಾಸೋದ್ಯಮ ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ಸಹಾಯಕ ನಿರ್ದೇಶಕರ ಹುದ್ದೆ ಖಾಲಿ ಇದ್ದು ತುರ್ತಾಗಿ ನೇಮಕ ಮಾಡಬೇಕು.
ಪ್ರವಾಸಿತಾಣಗಳ ವ್ಯಾಪ್ತಿಯಲ್ಲಿ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆ ಕಾಡುತ್ತಿದೆ. ಶುಚಿತ್ವಕ್ಕೆ ಆದ್ಯತೆ ನೀಡದೆ ಇರುವುದರಿಂದ ತ್ಯಾಜ್ಯಗಳ ರಾಶಿ ಎಲ್ಲೆಂದರಲ್ಲಿ ಬೀಳುತ್ತಿವೆ. ಇದರಿಂದ ವನ್ಯಜೀವಿಗಳು ಮತ್ತು ಪರಿಸರಕ್ಕೂ ಹಾನಿಯಾಗುತ್ತಿದೆ. ಪ್ರವಾಸಿಗರು ಎಲ್ಲೆಂದರಲ್ಲಿ ಅಡುಗೆ ಮಾಡಿ ಅಶುಚಿತ್ವದ ವಾತಾವರಣ ಸೃಷ್ಟಿಸುತ್ತಿದ್ದಾರೆ. ಆದ್ದರಿಂದ ಪ್ರವಾಸಿತಾಣಗಳ ಬಳಿ ಮೂಲಭೂತ ಸೌಲಭ್ಯಗಳು, ವಾಹನ ನಿಲುಗಡೆ, ಅಡುಗೆ ಮಾಡಲು ಮತ್ತು ಕಸವಿಲೇವಾರಿಗೆ ಎಲ್ಲಾ ವ್ಯವಸ್ಥೆ ಕಲ್ಪಿಸಬೇಕು ಎಂದು ನಿಯೋಗ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದೆ.
ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಎಂ.ಬಿ.ದೇವಯ್ಯ, ಪ್ರಧಾನ ಕಾರ್ಯದರ್ಶಿ ನವೀನ್ ಅಂಬೇಕಲ್, ಸಂಘಟನಾ ಕಾರ್ಯದರ್ಶಿಗಳಾದ ಮೋಂತಿ ಗಣೇಶ್, ಬಿ.ಆರ್. ಪ್ರಮೋದ್, ಎಫ್‌ಕೆಸಿಸಿಐಯ ರಾಜ್ಯ ನಿರ್ದೇಶಕ ಗಿರೀಶ್ ಗಣಪತಿ, ಜಿಲ್ಲಾ ನಿರ್ದೇಶಕರು ಗಳಾದ ತಿಮ್ಮಶೆಟ್ಟಿ, ಎ.ಪಿ. ವೀರರಾಜು, ಕೊಡ್ಲಿಪೇಟೆ ಸ್ಥಾನೀಯ ಸಮಿತಿ ಅಧ್ಯಕ್ಷ ಯತೀಶ್ ಕುಮಾರ್, ಸಿದ್ದಾಪುರ ಸ್ಥಾನೀಯ ಸಮಿತಿ ಅಧ್ಯಕ್ಷ ಕೆ.ಕೆ. ಶ್ರೀನಿವಾಸ್, ಮಡಿಕೇರಿ ನಗರಾಧ್ಯಕ್ಷ ಎಂ. ಧನಂಜಯ ಮತ್ತಿತರರು ನಿಯೋಗದಲ್ಲಿದ್ದರು.