ಕೂಡಿಗೆ, ಜು.೧೮: ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ೧೮ರಿಂದ ೫೯ ವರ್ಷದ ವಯೋಮಾನದವರಿಗೆ ಕೋವಿಡ್ ಮುನ್ನೆಚ್ಚರಿಕಾ ಲಸಿಕಾ ಅಭಿಯಾನಕ್ಕೆ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್ ಚಾಲನೆ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಯಾದ ಡಾ. ತೇಜಶ್ರೀ ಲಸಿಕಾ ಅಭಿಯಾನದ ಪ್ರಯೋಜನಗಳ ಬಗ್ಗೆ ಮಾಹಿತಿಯನ್ನು ನೀಡಿದರು.