ಸೋಮವಾರಪೇಟೆ, ಜು.೧೭: ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಮನೆ ಕೊಪ್ಪ ರಸ್ತೆಯು ಸಂಪೂರ್ಣ ಹಾಳಾಗಿದ್ದು, ಮಳೆ ನೀರು ರಸ್ತೆಯನ್ನು ಹದಗೆಟ್ಟಿಸಿದೆ. ಇದರಿಂದಾಗಿ ವಾಹನ ಸವಾರರು, ಸಾರ್ವಜನಿಕರು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಸಂಚರಿಸಲು ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಕಳೆದ ಹಲವು ವರ್ಷಗಳಿಂದ ಈ ರಸ್ತೆಯು ಡಾಂಬರು ಕಾಣದೆ ಸಂಪೂರ್ಣ ಗುಂಡಿಮಯವಾಗಿದೆ.
ಈ ರಸ್ತೆಗೆ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದೆ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಹೊಳೆಯಂತೆ ಮಾರ್ಪಾಡಾಗಿದೆ. ರಸ್ತೆ ೨.೫ ಕಿ.ಮೀ .ನಷ್ಟು ದೂರ ಸಂಪೂರ್ಣ ಹದಗೆಟ್ಟಿದ್ದು ವಿದ್ಯಾರ್ಥಿಗಳು ಮಳೆಗಾಲದಲ್ಲಿ ಶಾಲಾ ಕಾಲೇಜುಗಳಿಗೆ ತೆರಳಲು ಕಷ್ಟಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಶೀಘ್ರವಾಗಿ ಸಂಬAಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇತ್ತ ಗಮನ ಹರಿಸಿ ಸಮಸ್ಯೆಯನ್ನು ಪರಿಹಾರ ಮಾಡಿಕೊಡಬೇಕಾಗಿ ದೊಡ್ಡಮನೆ ಕೊಪ್ಪದ ಗ್ರಾಮಸ್ಥರು ಆಗ್ರಹಿಸಿದ್ದಾರೆ.