ಗೋಣಿಕೊಪ್ಪಲು, ಜು. ೧೮: ನ್ಯಾಷನಲ್ ಹೆರಾಲ್ಡ್ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾಗಾಂಧಿಯವರಿಗೆ ಜಾರಿ ನಿರ್ದೇಶನಾಲಯ (ಈಡಿ) ಸಂಸ್ಥೆಯು ಸಮನ್ಸ್ ಜಾರಿಗೊಳಿಸಿ ತಾ. ೨೩ ರಂದು ವಿಚಾರಣೆಗೆ ಆಗಮಿಸುವಂತೆ ತಿಳಿಸಿರುವ ಹಿನ್ನೆಲೆಯಲ್ಲಿ ಇದರ ಸತ್ಯಾಂಶವನ್ನು ಸಾರ್ವಜನಿಕರಿಗೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ಅರ್ಥ ಮಾಡಿಸುವ ನಿಟ್ಟಿನಲ್ಲಿ ಹಾಗೂ ಪಕ್ಷ ಸಂಘಟನೆ ಸಲುವಾಗಿ ತಾ. ೨೧ ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಈ ಬಗ್ಗೆ ಪ್ರತಿಭಟನೆ ಮಾಡುವ ಮೂಲಕ ಕಾಂಗ್ರೆಸ್ ನಾಯಕರುಗಳಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಗಾAಧಿಯ ಮೇಲೆ ಈಡಿ ಸಂಸ್ಥೆಯ ಮೂಲಕ ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ಮಾಡಲಾಗುವುದೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ವಕ್ತಾರ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಎಂ. ಲಕ್ಷö್ಮಣ್, ತಿಳಿಸಿದರು.
ಗೋಣಿಕೊಪ್ಪಲುವಿನ ಕಿತ್ತಳೆ ಬೆಳೆಗಾರ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ನ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರÀÄ.
ಆಗಸ್ಟ್ ೩ ರಿಂದ ‘ಭಾರತ್ ಜೋಡೊ’ ಕಾರ್ಯಕ್ರಮ ದೇಶದಾದ್ಯಂತ ಹಮ್ಮಿಕೊಳ್ಳಲಾಗಿದೆ. ಇದನ್ನು ಬಿಜೆಪಿ, ಸಂಘ ಪರಿವಾರ ನರೇಂದ್ರಮೋದಿ, ಅಮಿತ್ಷಾ ತಡೆಯುವ ಮೂಲ ಉದ್ದೇಶದಿಂದ ಈ ರೀತಿಯಲ್ಲಿ ಈಡಿಯ ಮೂಲಕ ಕಿರುಕುಳ ನೀಡುವುದು ನಡೆಯುತ್ತಿದೆ. ವಿಚಾರವನ್ನು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ಈ ಕಾರ್ಯಕ್ರಮವು ನಡೆಯಲಿದ್ದು ದೇಶದ ಉದ್ದಗಲಕ್ಕೂ ಹತ್ತು ಸಾವಿರ ಅಧಿಕ ಕಿ.ಮೀ. ಪಾದಯಾತ್ರೆ ನಡೆಸಲಿದ್ದಾರೆ ಎಂದರು.
ಈ ವೇಳೆ ಕಳೆದ ೮ ವರ್ಷಗಳಲ್ಲಿ ಬಿಜೆಪಿ ಸರ್ಕಾರವು ದೇಶವನ್ನು ಹಿಂದಕ್ಕೆ ಕೊಂಡೊಯ್ದ ಬಗ್ಗೆ, ದೇಶವನ್ನು ಸಾಲದ ಕೂಪದಲ್ಲಿ ದೇಶದ ಜನತೆಯನ್ನು ಇಕ್ಕಟ್ಟಿಗೆ ಸಿಲುಕಿಸುವಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅಂಶಗಳನ್ನು ಜನರ ಮುಂದಿಡಲು ರಾಹುಲ್ ಗಾಂಧಿಯವರು ಜನರ ಬಳಿ ತೆರಳಿ ಮನವರಿಕೆ ಮಾಡಿಕೊಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಎರಡು ಕ್ಷೇತ್ರವನ್ನು ಕಾಂಗ್ರೆಸ್ ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರನ್ನು ಒಗ್ಗೂಡಿಸುವ ಪ್ರಯತ್ನ ನಡೆಯುತ್ತಿದೆ. ಪಕ್ಷದಲ್ಲಿರುವ ಸಣ್ಣಪುಟ್ಟ ಗೊಂದಲಗಳನ್ನು ನಾಯಕರು ಬಗೆ ಹರಿಸಲಿದ್ದಾರೆ. ಕಾರ್ಯಕರ್ತರಿಗೆ ವಿಶೇಷ ಪ್ರಾತಿನಿಧÀ್ಯ ನೀಡಲಾಗುವುದು. ಪಕ್ಷದಲ್ಲಿ ಜವಾಬ್ದಾರಿ ಸ್ಥಾನಗಳನ್ನು ನೀಡಲಾಗುವುದು ಈ ನಿಟ್ಟಿನಲ್ಲಿ ಪಕ್ಷ ಸಂಘಟನೆ ಕಾರ್ಯಕ್ಕೆ ವೇಗ ನೀಡಲಾಗಿದೆ. ತಾ. ೨೨ ರಂದು ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕೆಪಿಸಿಸಿ ವೀಕ್ಷಕ, ಮಾಜಿ ಸಚಿವ ವಿನಯ್ಕುಮಾರ್ ಸೊರಕೆ ಮಾತನಾಡಿ, ಜಿಲ್ಲೆಯಲ್ಲಿ ಪ್ರತಿ ಬ್ಲಾಕ್ ಮಟ್ಟದಲ್ಲಿ ಭೇಟಿ ನೀಡಿ ಅಲ್ಲಿರುವ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿ ಸಭೆ ನಡೆಸಲಾಗುವುದು ಆರಂಭ ಹಂತದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ನ ಮೂಲಕ ಸಭೆ ಆರಂಭ ಮಾಡಿದ್ದೇವೆ. ೬ ಬ್ಲಾಕ್ಗಳಲ್ಲಿ ಸಭೆ ನಡೆಯಲಿದೆ.
ಸ್ವಾತಂತ್ರೊö್ಯÃತ್ಸವದ ೭೫ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಕಾರ್ಯಕ್ರಮ ಅಲ್ಲದೆ ಆಗಸ್ಟ್ ೧೫ ರಂದು ಬೆಂಗಳೂರಿನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ಸಭೆ ಆಯೋಜಿಸಲಾಗಿದೆ. ಪ್ರತಿ ಬ್ಲಾಕ್ನಿಂದ ೧೦೦ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆ. ೩ ರಂದು ವಿರೋಧ ಪಕ್ಷದ ನಾಯಕರಾದ ಸಂಘಟನೆ ಕಾರ್ಯಕ್ಕೆ ವೇಗ ನೀಡಲಾಗಿದೆ. ತಾ. ೨೨ ರಂದು ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕೆಪಿಸಿಸಿ ವೀಕ್ಷಕ, ಮಾಜಿ ಸಚಿವ ವಿನಯ್ಕುಮಾರ್ ಸೊರಕೆ ಮಾತನಾಡಿ, ಜಿಲ್ಲೆಯಲ್ಲಿ ಪ್ರತಿ ಬ್ಲಾಕ್ ಮಟ್ಟದಲ್ಲಿ ಭೇಟಿ ನೀಡಿ ಅಲ್ಲಿರುವ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿ ಸಭೆ ನಡೆಸಲಾಗುವುದು ಆರಂಭ ಹಂತದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ನ ಮೂಲಕ ಸಭೆ ಆರಂಭ ಮಾಡಿದ್ದೇವೆ. ೬ ಬ್ಲಾಕ್ಗಳಲ್ಲಿ ಸಭೆ ನಡೆಯಲಿದೆ.
ಸ್ವಾತಂತ್ರೊö್ಯÃತ್ಸವದ ೭೫ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಕಾರ್ಯಕ್ರಮ ಅಲ್ಲದೆ ಆಗಸ್ಟ್ ೧೫ ರಂದು ಬೆಂಗಳೂರಿನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ಸಭೆ ಆಯೋಜಿಸಲಾಗಿದೆ. ಪ್ರತಿ ಬ್ಲಾಕ್ನಿಂದ ೧೦೦ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆ. ೩ ರಂದು ವಿರೋಧ ಪಕ್ಷದ ನಾಯಕರಾದ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮೀದೇರಿರ ನವೀನ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಎಂಎಲ್ಸಿಗಳಾದ ಅರುಣ್ ಮಾಚಯ್ಯ, ಶಾಂತೆಯAಡ ವೀಣಾ ಅಚ್ಚಯ್ಯ, ಮಾಜಿ ಜಿಲ್ಲಾಧ್ಯಕ್ಷ ಮಂಜುನಾಥ್, ಹಿರಿಯ ಮುಖಂಡರಾದ ಪೆಮ್ಮಂಡ ಪೊನ್ನಪ್ಪ, ಎರ್ಮು ಹಾಜಿ, ಗೋಣಿಕೊಪ್ಪ ನಗರ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಹಾಜರಿದ್ದರು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ನ ಪ್ರ.ಕಾರ್ಯದರ್ಶಿ ಎ.ಜೆ. ಬಾಬು ಸ್ವಾಗತಿಸಿ ವಂದಿಸಿದರು.