ಮಡಿಕೇರಿ, ಜು. ೧೭: ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ-ಮಡಿಕೇರಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ದ್ವಿತೀಯ ಪಿ.ಯು.ಸಿ.ಯಲ್ಲಿ ತಾಲೂಕು ಮಟ್ಟದಲ್ಲಿ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ಸಂತ ಮೈಕಲರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಜೀವಿತ್ ಕೆ.ಜೆ. - ೫೮೦, ದ್ವಿತೀಯ ಸ್ಥಾನವನ್ನು ಪಡೆದ ಲಿಪಿಕ ಎ.ಆರ್. - ೫೭೯ ಮತ್ತು ತೃತೀಯ ಸ್ಥಾನವನ್ನು ಪಡೆದ ಜೋಯಲ್ ಬಿ. ವರ್ಗೀಸ್ - ೫೭೮ ಇವರುಗಳನ್ನು ಕುಶಾಲನಗರದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.