ನೂಪುರ್ ಶರ್ಮರನ್ನು ಬಂಧಿಸದAತೆ ಕೋರ್ಟ್ ಸೂಚನೆ
ನವದೆಹಲಿ, ಜು. ೧೯: ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಗೆ ಸಂಬAಧಿಸಿದAತೆ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಸುಪ್ರೀಂ ಕೋರ್ಟ್ನಿಂದ ರಿಲೀಫ್ ಪಡೆದಿದ್ದಾರೆ. ಬಂಧನದಿAದ ರಕ್ಷಣೆ ಕೋರಿ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆಗಸ್ಟ್ ೧೦ ರವರೆಗೆ ಬಂಧಿಸದAತೆ ಆದೇಶಿಸಿದೆ. ನೂಪುರ್ ಶರ್ಮಾ ಅವರಿಗೆ ಕೊಲೆ ಬೆದರಿಕೆಗಳು ಬರುತ್ತಿದ್ದು, ಆಕೆಗೆ ಬಂಧನದಿAದ ತಡೆಯಾಜ್ಞೆ ಹಾಗೂ ರಕ್ಷಣೆ ನೀಡಬೇಕು ಎಂದು ವಕೀಲರು ನ್ಯಾಯಾಲಯದಲ್ಲಿ ವಾದಿಸಿದರು. ಈ ಹಿನ್ನೆಲೆ ಆಗಸ್ಟ್ ೧೦ ರವರೆಗೆ ನೂಪುರ್ ಅವರನ್ನು ಬಂಧಿಸದAತೆ ನ್ಯಾಯಾಲಯ ಸೂಚಿಸಿದೆ. ಇದರೊಂದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೂ ಈ ಸಂಬAಧ ನೋಟಿಸ್ ಜಾರಿ ಮಾಡಲಾಗಿದೆ. ಜೀವ ಬೆದರಿಕೆ ಇದೆ ಎಂದು ನೂಪುರ್ ಶರ್ಮಾ ಪರ ವಕೀಲ ಮಣಿಂದರ್ ಸಿಂಗ್ ವಾದ ಮಂಡಿಸಿದರು. ಆದೇಶವನ್ನು ಉಚ್ಚರಿಸುವಾಗ, ಪೀಠವು, ಅರ್ಜಿದಾರರ ಹತ್ಯೆಯ ಬಗ್ಗೆ ಸಲ್ಮಾನ್ ಚಿಶ್ತಿಯ ವೈರಲ್ ಹೇಳಿಕೆಯನ್ನು ಸಹ ಗಮನಕ್ಕೆ ತೆಗೆದುಕೊಂಡಿತು. ಯುಪಿಯ ವ್ಯಕ್ತಿಯೊಬ್ಬರು ಅರ್ಜಿದಾರರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿರುವುದನ್ನು ನ್ಯಾಯಾಲಯವು ಆಲಿಸಿತು.
ತೆರಿಗೆ ಸೋರಿಕೆ ತಡೆಯುವ ನಿಟ್ಟಿನಲ್ಲಿ ನಿರ್ಧಾರ
ನವದೆಹಲಿ, ಜು. ೧೯: ಧಾನ್ಯಗಳು ಮತ್ತು ಬೇಳೆಕಾಳುಗಳು ಸೇರಿದಂತೆ ಪ್ಯಾಕ್ ಮಾಡಿದ ಆಹಾರ ಧಾನ್ಯಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧಿಸುವ ನಿರ್ಧಾರವನ್ನು ರಾಜ್ಯಗಳೊಂದಿಗೆ ಒಮ್ಮತದಿಂದ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ. ಜಿಎಸ್‌ಟಿ ಪೂರ್ವದ ಅವಧಿಯಲ್ಲಿ ರಾಜ್ಯಗಳು ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಸಂಗ್ರಹಿಸುತ್ತಿದ್ದವು. ಆಹಾರ ಧಾನ್ಯಗಳ ಮೇಲೆ ತೆರಿಗೆ ವಿಧಿಸಿರುವುದು ಇದೇ ಮೊದಲಲ್ಲ ಎಂದು ಸರಣಿ ಟ್ವೀಟ್‌ಗಳಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ. ಇಂತಹ ಆಹಾರ ಪದಾರ್ಥಗಳ ಮೇಲೆ ತೆರಿಗೆ ವಿಧಿಸುತ್ತಿರುವುದು ಇದೇ ಮೊದಲಾ? ಇಲ್ಲ. ಜಿಎಸ್‌ಟಿ-ಪೂರ್ವ ಆಡಳಿತದಲ್ಲಿ ರಾಜ್ಯಗಳು ಆಹಾರಧಾನ್ಯದಿಂದ ಗಮನಾರ್ಹ ಆದಾಯವನ್ನು ಸಂಗ್ರಹಿಸುತ್ತಿದ್ದವು. ಪಂಜಾಬ್ ಒಂದರಲ್ಲೇ ಖರೀದಿ ತೆರಿಗೆಯ ಮೂಲಕ ಆಹಾರ ಧಾನ್ಯದ ಮೇಲೆ ೨,೦೦೦ ಕೋಟಿ ರೂ.ಗೂ ಹೆಚ್ಚು ತೆರಿಗೆ ಸಂಗ್ರಹಿಸಿದೆ. ಯುಪಿ ರೂ. ೭೦೦ ಕೋಟಿ ಸಂಗ್ರಹಿಸಿದೆ ಎಂದು ಸೀತಾರಾಮನ್ ಟ್ವೀಟ್ ಮಾಡಿದ್ದಾರೆ. ಜಿಎಸ್‌ಟಿ ಕೌನ್ಸಿಲ್‌ನ 'ಪ್ರೀ-ಪ್ಯಾಕ್ಡ್ ಮತ್ತು ಪ್ರಿ-ಲೇಬಲ್' ಆಹಾರ ಪದಾರ್ಥಗಳ ಮೇಲೆ ಶೇ. ೫ ರಷ್ಟು ತೆರಿಗೆ ವಿಧಿಸುವ ನಿರ್ಧಾರದ ನಂತರ ವ್ಯಾಪಾರಿಗಳು ಮತ್ತು ಗ್ರಾಹಕರಲ್ಲಿ ಹೆಚ್ಚುತ್ತಿರುವ ಕಳವಳದ ನಡುವೆ ಹಣಕಾಸು ಸಚಿವರು ಸ್ಪಷ್ಟೀಕರಣ ನೀಡಿದ್ದಾರೆ. ಜೂನ್ ೨೮ ರಂದು ಚಂಡೀಗಢದಲ್ಲಿ ನಡೆದ ಜಿಎಸ್‌ಟಿ ಕೌನ್ಸಿಲ್‌ನ ೪೭ನೇ ಸಭೆಯಲ್ಲಿ ಈ ನಿರ್ಧಾರವನ್ನು ಸರ್ವಾನುಮತದಿಂದ ತೆಗೆದುಕೊಳ್ಳಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ತೆರಿಗೆ ಸೋರಿಕೆಯನ್ನು ತಡೆಯಲು ಈ ನಿರ್ಧಾರವು ಹೆಚ್ಚು ಅಗತ್ಯವಾಗಿದೆ ಎಂದು ಅವರು ಹೇಳಿದರು.
ಶ್ರೀಲಂಕಾ ಬಿಕ್ಕಟ್ಟನ್ನು ಎದುರಿಸುತ್ತಿದೆ - ಜೈಶಂಕರ್
ನವದೆಹಲಿ, ಜು. ೧೯: ನೆರೆಯ ಶ್ರೀಲಂಕಾವು ಅತ್ಯಂತ ಗಂಭೀರ ಬಿಕ್ಕಟ್ಟನ್ನು ಎದುರಿಸುತ್ತಿದೆ. ಇದು ಸಹಜವಾಗಿಯೇ ಭಾರತವನ್ನು ಚಿಂತಿಸುವAತೆ ಮಾಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಮಂಗಳವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಹೇಳಿದ್ದಾರೆ. ಶ್ರೀಲಂಕಾ ಬಿಕ್ಕಟ್ಟು ಕುರಿತು ಚರ್ಚಿಸಲು ಕೇಂದ್ರ ಸರ್ಕಾರ ಇಂದು ಸರ್ವಪಕ್ಷಗಳ ಸಭೆ ಕರೆದಿತ್ತು. ರಾಜಕೀಯ ಪಕ್ಷಗಳ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಜೈಶಂಕರ್ ಅವರು, ಶ್ರೀಲಂಕಾದಲ್ಲಿ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಭಾರತ ಅದರ ಬಗ್ಗೆ ಚಿಂತಿಸುತ್ತಿದೆ. ಆದರೆ ಭಾರತವನ್ನು ಅದರೊಂದಿಗೆ ಹೋಲಿಸುವುದು ಸರಿಯಲ್ಲ. ಅಂತಹ ಪರಿಸ್ಥಿತಿ ಇಲ್ಲಿ ಉದ್ಭವಿಸುವುದಿಲ್ಲ ಎಂದರು. ಇದು ಅತ್ಯಂತ ನಿಕಟ ನೆರೆಹೊರೆ ದೇಶಕ್ಕೆ ಸಂಬAಧಿಸಿದ ವಿಷಯವಾಗಿದೆ ಮತ್ತು ಹತ್ತಿರದ ಸಾಮೀಪ್ಯವನ್ನು ಹೊಂದಿದೆ. ಹೀಗಾಗಿ ನಾವು ಸ್ವಾಭಾವಿಕವಾಗಿ ಅದರ ಪರಿಣಾಮಗಳ ಬಗ್ಗೆ ಚಿಂತಿಸುತ್ತೇವೆ ಎಂದು ಜೈಶಂಕರ್ ಹೇಳಿದರು.
ಅದ್ಧೂರಿ ದಸರಾ ಆಚರಣೆ - ಸಿಎಂ
ಬೆAಗಳೂರು, ಜು. ೧೯: ಕೋವಿಡ್ ಕಾರಣಕ್ಕಾಗಿ ಕಳೆದ ಬಾರಿ ನಾಡಹಬ್ಬ ಮೈಸೂರು ದಸರಾವನ್ನು ಸರಳವಾಗಿ ಆಚರಣೆ ಮಾಡಲಾಗಿತ್ತು. ಆದರೆ ಈ ಬಾರಿ ಮೈಸೂರು ದಸರಾ ಅದ್ಧೂರಿಯಾಗಿ ಆಚರಿಸಲು ನಿರ್ಧಾರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಇಂದು ಮೈಸೂರು ದಸರಾ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ದಸರಾ ಹಬ್ಬದ ಉದ್ಘಾಟನೆ ಹಾಗೂ ಉದ್ಘಾಟಕರಾಗಿ ಯಾರನ್ನು ಆಹ್ವಾನ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ. ದಸರಾ ಆಚರಣೆಯ ಸಮಿತಿ, ದಸರಾ ಉದ್ಘಾಟನೆಗೆ ಆಹ್ವಾನಿತರ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದೇವೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ದಸರಾ ಬಗ್ಗೆ ಪ್ರಚಾರ ಮಾಡಲಾಗುವುದು. ದಸರಾ ಬ್ರ‍್ಯಾಂಡ್ ಆಗಬೇಕು ಎಂದರು. ಸೆಪ್ಟೆಂಬರ್ ೨೬ ರಿಂದ ನವರಾತ್ರಿ ಉತ್ಸವ ಆರಂಭವಾಗಲಿದೆ. ಅಕ್ಟೋಬರ್ ೫ ರಂದು ಜಂಬೂಸವಾರಿ ಮೆರವಣಿಗೆ ನಡೆಯಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ಉಪರಾಷ್ಟçಪತಿ ಚುನಾವಣೆ - ಮಾರ್ಗರೇಟ್ ಆಳ್ವ ಉಮೇದುವಾರಿಕೆ
ನವದೆಹಲಿ, ಜು. ೧೯: ಉಪರಾಷ್ಟçಪತಿ ಚುನಾವಣೆಗೆ ವಿಪಕ್ಷಗಳ ಅಭ್ಯರ್ಥಿಯಾಗಿರುವ ಮಾರ್ಗರೇಟ್ ಆಳ್ವ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಶಿವಸೇನೆ ನಾಯಕ ಸಂಜಯ್ ರಾವುತ್ ಮತ್ತು ಇತರ ವಿರೋಧ ಪಕ್ಷದ ನಾಯಕರು ಉಪಸ್ಥಿತರಿದ್ದರು. ಆ. ೬ ರಂದು ಉಪರಾಷ್ಟçಪತಿ ಚುನಾವಣೆ ನಡೆಯಲಿದ್ದು, ಆ. ೧೦ ರಂದು ಹಾಲಿ ಉಪರಾಷ್ಟçಪತಿ ವೆಂಕಯ್ಯ ನಾಯ್ಡು ಅವರ ಅವಧಿ ಪೂರ್ಣಗೊಳ್ಳಲಿದೆ. ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನ್ಕರ್ ಅವರ ವಿರುದ್ಧ ಮಾರ್ಗರೇಟ್ ಆಳ್ವ ಸ್ಪರ್ಧಿಸಿದ್ದಾರೆ.
ಡಾ. ಮಂಜುನಾಥ್ ಸೇವಾವಧಿ ವಿಸ್ತರಣೆ
ಬೆಂಗಳೂರು, ಜು. ೧೯: ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ (ನಿರ್ದೇಶಕರಾಗಿರುವ ಡಾ.ಸಿ.ಎನ್. ಮಂಜುನಾಥ್ ಅವರ ಸೇವಾವಧಿಯನ್ನು ಮತ್ತೊಂದು ವರ್ಷ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಡಾ. ಸಿ.ಎನ್. ಮಂಜುನಾಥ್ ಅವರ ಸಾಧನೆ ಮತ್ತು ಆಡಳಿತ ವೈಖರಿ ಪರಿಗಣಿಸಿ ಅವರ ಸೇವಾವಧಿಯನ್ನು ಮುಂದಿನ ಒಂದು ವರ್ಷಕ್ಕೆ ವಿಸ್ತರಿಸಿದ್ದಾರೆ.
ರಾಜ್ಯಸಭೆ ಕಲಾಪದಲ್ಲಿ ಗದ್ದಲ
ನವದೆಹಲಿ, ಜು. ೧೯: ಹೆಚ್ಚುತ್ತಿರುವ ಹಣದುಬ್ಬರ, ಕೆಲವು ಅಗತ್ಯ ವಸ್ತುಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಹೇರಿಕೆ ಮತ್ತು ಅಗ್ನಿಪಥ್ ಯೋಜನೆ ವಿರುದ್ಧ ಭೋಜನ ವಿರಾಮದ ನಂತರವೂ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಭಾರಿ ಕೋಲಾಹಲ ಸೃಷ್ಟಿಸಿದವು. ಉಪ ಸಭಾಪತಿ ಹರಿವಂಶ್ ಅವರು ಭೋಜನ ವಿರಾಮದ ನಂತರ ಕಲಾಪ ಆರಂಭಿಸಲು ಮುಂದಾದರು. ಈ ವೇಳೆ ಪ್ರತಿಪಕ್ಷ ಸದಸ್ಯರು ತೀವ್ರ ಗದ್ದಲ ಎಬ್ಬಿಸಿದಾಗ ಹರಿವಂಶ್ ಸದನವನ್ನು ತಾ. ೧೦ಕ್ಕೆ ಮುಂದೂಡಿದರು. ಇದಕ್ಕೂ ಮುನ್ನ ಬೆಳಿಗ್ಗೆ ರಾಜ್ಯಸಭೆಯಲ್ಲಿ ನಿಯಮ ೨೬೭ರ ಅಡಿಯಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ಪ್ರತಿಪಕ್ಷಗಳು ಬೇಡಿಕೆ ಇಟ್ಟವು. ಆದರೆ, ಸಭಾಪತಿ ಎಂ.ವೆAಕಯ್ಯ ನಾಯ್ಡು ಅದನ್ನು ತಿರಸ್ಕರಿಸಿದರು. ಇದನ್ನು ವಿರೋಧಿಸಿ ಪ್ರತಿಪಕ್ಷ ಸದಸ್ಯರು ಗದ್ದಲ ಎಬ್ಬಿಸಿದ್ದರಿಂದ ಸದನವನ್ನು ಮಧ್ಯಾಹ್ನ ೨ ಗಂಟೆಗೆ ಮುಂದೂಡಬೇಕಾಯಿತು.