ಸೋಮವಾರಪೇಟೆ, ಜು. ೧೯: ಇಲ್ಲಿನ ಒಕ್ಕಲಿಗರ ಯುವ ವೇದಿಕೆ ವತಿಯಿಂದ ತಾ. ೨೩ ರಂದು ಸ್ಥಳೀಯ ತೋಳೂರು ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಲಿಗ ಸಮುದಾಯ ಬಾಂಧವರಿಗೆ ೭ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಒಕ್ಕಲಿಗರ ಯುವ ವೇದಿಕೆ ಉಪಾಧ್ಯಕ್ಷ ನತೀಶ್ ಮಂದಣ್ಣ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ತಾ. ೨೩ ರಂದು ಬೆಳಿಗ್ಗೆ ೯ ಗಂಟೆಗೆ ತೋಳೂರು ಶೆಟ್ಟಳ್ಳಿ ಸುಗ್ಗಿಕಟ್ಟೆ ರಸ್ತೆಯಲ್ಲಿರುವ ಕೆ.ಎಂ. ದಿನೇಶ್ ಅವರ ಗದ್ದೆಯಲ್ಲಿ ಕ್ರೀಡಾಕೂಟ ನಡೆಯಲಿದ್ದು, ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಬಿ.ಜೆ. ದೀಪಕ್ ವಹಿಸಲಿದ್ದಾರೆ ಎಂದರು.

ಕ್ರೀಡಾಕೂಟವನ್ನು ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ, ಉದ್ಯಮಿಗಳಾದ ಅರುಣ್ ಕೊತ್ನಳ್ಳಿ, ಗಿರೀಶ್ ಮಲ್ಲಪ್ಪ, ಎಂ. ಎನ್. ದೇವರಾಜ್ ಅವರುಗಳು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ, ಪ್ರಗತಿಪರ ಮಹಿಳಾ ವೇದಿಕೆ ಅಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟ ಅಧ್ಯಕ್ಷ ಪಿ.ಕೆ. ರವಿ, ತೋಳೂರು ಶೆಟ್ಟಳ್ಳಿ ಗ್ರಾ.ಪಂ. ಅಧ್ಯಕ್ಷ ರುದ್ರಪ್ಪ, ಸದಸ್ಯರಾದ ನವೀನ್, ಮೋಹಿತ್, ದಿವ್ಯ, ಗ್ರಾಮಾಧ್ಯಕ್ಷ ರಾಜಗೋಪಾಲ್ ಅವರುಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಒಕ್ಕಲಿಗ ಸಮುದಾಯ ಬಾಂಧವರಲ್ಲಿ ಒಗ್ಗಟ್ಟು, ಸಾಮರಸ್ಯ ಮೂಡಿಸುವ ಉದ್ದೇಶದಿಂದ ಕ್ರೀಡಾಕೂಟವನ್ನು ಆಯೋಜಿಸ ಲಾಗಿದೆ. ಪುರುಷರ ವಿಭಾಗದಲ್ಲಿ ಹಗ್ಗಜಗ್ಗಾಟ ವಾಲಿಬಾಲ್, ಗದ್ದೆ ಓಟ ಮಹಿಳೆಯರ ವಿಭಾಗದಲ್ಲಿ ಥ್ರೋ ಬಾಲ್, ಗದ್ದೆ ಓಟ, ಹಗ್ಗಜಗ್ಗಾಟ, ದಂಪತಿಗಳಿಗೆ ಓಟದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು. ಸ್ಪರ್ಧೆಗಳಲ್ಲಿ ವಿಜೇತರಾಗುವವರಿಗೆ ಪ್ರಥಮ, ದ್ವಿತೀಯ ನಗದು ಬಹುಮಾನದೊಂದಿಗೆ ಆಕರ್ಷಕ ಟ್ರೋಫಿ ನೀಡಲಾಗುವುದು. ಕ್ರೀಡಾಕೂಟವು ಒಕ್ಕಲಿಗ ಸಮುದಾಯ ಬಾಂಧವರಿಗೆ ಮಾತ್ರ ಆಯೋಜಿಸ ಲಾಗಿದೆ. ಭಾಗವಹಿಸುವವರು ಹೆಚ್ಚಿನ ಮಾಹಿತಿಗೆ ಮೊ. ೯೪೮೦೧೮೭೭೫೬, ೯೪೮೧೭೦೬೫೦೫, ೮೮೬೧೯೯೧೩೭೨ನ್ನು ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ದಯಾನಂದ, ಖಜಾಂಚಿ ಪೃಥ್ವಿ, ನಿರ್ದೇಶಕರುಗಳಾದ ಸುರೇಶ್ ಚಕ್ರವರ್ತಿ, ಜಿ.ಪಿ. ಕಿಶೋರ್, ಎ.ಹೆಚ್. ತಿಮ್ಮಯ್ಯ, ರಂಜು, ಯೋಗೇಂದ್ರ‍್ರ, ಕೆ.ಎ. ಪ್ರಕಾಶ್ ಅವರುಗಳು ಉಪಸ್ಥಿತರಿದ್ದರು.