ಕುಶಾಲನಗರ, ಜು. ೧೯: ಸ್ಥಳೀಯ ವಿದ್ಯಾ ಸಂಸ್ಥೆ ಯೊಂದಕ್ಕೆ ವಿದ್ಯಾರ್ಥಿಗಳು ತೆರಳುವ ಹೆಚ್ಚು ವರಿ ದಾರಿಗಳನ್ನು ಮುಚ್ಚುವಂತೆ ಕುಶಾಲನಗರ ಪಟ್ಟಣ ಪಂಚಾಯಿತಿ ಸಭೆಯಲ್ಲಿ ತೀರ್ಮಾನಿಸಿರುವ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕುಶಾಲನಗರ ಫಾತಿಮ ಕಾನ್ವೆಂಟ್ ವಿದ್ಯಾ ಸಂಸ್ಥೆಯಲ್ಲಿ ಪಟ್ಟಣ ಮತ್ತು ಸುತ್ತಮುತ್ತಲ ವ್ಯಾಪ್ತಿಯಿಂದ ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕೆ ಶಾಲೆಗೆ ತೆರಳಲು ಬಡಾವಣೆ ಮೂಲಕ ಸಾಗುವ ಎರಡು ದಾರಿಗಳನ್ನು ಮುಚ್ಚಲು ಪಂಚಾಯಿತಿ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದು ಸರಿಯಲ್ಲ ಎಂದು ವಿದ್ಯಾರ್ಥಿ ಪೋಷಕ ಹಾಗೂ ವಕೀಲ ಎಸ್.ಕೆ. ಮಂಜುನಾಥ್ ತಿಳಿಸಿದ್ದಾರೆ.
ಈ ಬಗ್ಗೆ ಶಾಲೆಯ ವಿದ್ಯಾರ್ಥಿ ಗಳ ಪೋಷಕರು ಅಸಮಾಧಾನ ಗೊಂಡಿದ್ದು, ವಿದ್ಯಾಸಂಸ್ಥೆ ಪ್ರಮುಖರೊಂದಿಗೆ ಚರ್ಚಿಸಲಾಗಿದೆ. ವಿದ್ಯಾರ್ಥಿಗಳಿಗೆ ಬಡಾವಣೆ ರಸ್ತೆಗಳ ಮೂಲಕ ತೆರಳಲು ಅವಕಾಶ ಕಲ್ಪಿಸುವಂತೆ ಪಟ್ಟಣ ಪಂಚಾಯಿತಿ ಆಡಳಿತ ಮಂಡಳಿಗೆ ಪೋಷಕರ ಮೂಲಕ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.