ಮಡಿಕೇರಿ, ಜು. ೧೯: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಆಗಸ್ಟ್ ೧೩ರಂದು ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ. ಭೃಂಗೇಶ್ ಅವರು ತಿಳಿಸಿದ್ದಾರೆ.

ತಮ್ಮ ಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಈ ಕುರಿತು ಮಾಹಿತಿ ನೀಡಿದರು. ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬAಧಿಸಿದ ಕ್ಲೇಮುಗಳು ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬAಧಪಟ್ಟ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರÀಣಗಳು, ಚೆಕ್ ಅಮಾನ್ಯದ ಪ್ರಕರಣಗಳನ್ನು ಅದಾಲತ್‌ನಲ್ಲಿ ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಇವುಗಳೊಂದಿಗೆ ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ನೀರಿನ ಶುಲ್ಕ ಸೇರಿದಂತೆ ಸಾರ್ವಜನಿಕ ಉಪಯುಕ್ತತೆ ಸೇವೆಗಳಿಗೆ ಸಂಬAಧಿಸಿದ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಹಾಗೂ ಭತ್ಯೆಗಳಿಗೆ ಸಂಬAಧಿಸಿದ ಸೇವಾ ಮತ್ತು ಪಿಂಚಣಿ ಪ್ರಕರಣಗಳು, ವೈವಾಹಿಕ ಕುಟುಂಬ ನ್ಯಾಯಾಲಯ ಪ್ರಕರಣಗಳು (ವಿಚ್ಚೇದನಾ ಹೊರತುಪಡಿಸಿ), ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳನ್ನು ಲೋಕ್ ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ ಎಂದು ಭೃಂಗೇಶ್ ಅವರು ವಿವರಿಸಿದರು.

ಅದಾಲತ್ ಅನ್ನು ಪಾರದರ್ಶಕವಾಗಿ ಯಾವುದೇ ಶುಲ್ಕವಿಲ್ಲದೆ ನಡೆಸಲಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೆ ಇರುವ ಪ್ರಕರಣಗಳನ್ನು ಕೂಡ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶವಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು