ಕುಶಾಲನಗರ, ಜು. ೧೮: ಕಲ್ಲು ಕ್ವಾರಿಯಲ್ಲಿರುವ ಕೆರೆಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಶಾಲನಗರ ತಾಲೂಕಿನ ಗೊಂದಿಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೂಲಿ ಕಾರ್ಮಿಕ (೫೫) ಚಂದ್ರು ಎಂಬಾತ ಮೃತ ವ್ಯಕ್ತಿ.
ಭಾನುವಾರ ಮಧ್ಯಾಹ್ನ ಚಂದ್ರು ಧರಿಸಿದ್ದ ಬಟ್ಟೆ ಜರ್ಕಿನ್ ಗ್ರಾಮದ ಕುಪ್ಪ ಕ್ವಾರಿ ಬಳಿ ಪತ್ತೆಯಾಗಿದೆ. ಆದರೆ ಯಾರಿಗೂ ಕೂಡ ಈತನು ಆತ್ಮಹತ್ಯೆ ಮಾಡಿಕೊಂಡಿದ್ದ ಬಗ್ಗೆ ತಿಳಿದಿರಲಿಲ್ಲ. ಆದರೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಸಂಜೆ ತನಕ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಸೋಮವಾರ ದುಬಾರೆ ರ್ಯಾಫ್ಟಿಂಗ್ ಸಿಬ್ಬಂದಿಗಳು ಹುಡುಕಾಟ ನಡೆಸಿದಾಗ ಮಧ್ಯಾಹ್ನ ಮೃತದೇಹ ಪತ್ತೆಯಾಗಿದೆ.
ಇತ್ತೀಚೆಗಷ್ಟೆ ಚಂದ್ರು ಅವರ ಪತ್ಮಿ ಮೃತಪಟ್ಟಿದ್ದು ಈ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿರಬಹುದೆಂದು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಸಂಬAಧ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.