ಶನಿವಾರಸAತೆ, ಜು. ೧೯: ಶನಿವಾರಸಂತೆ ಸಮೀಪದ ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಕೊಡ್ಲಿ ಗ್ರಾಮದ ಊರುಮಠಾಧೀಶ ಸಿದ್ಧಲಿಂಗ ಮಹಾಸ್ವಾಮೀಜಿ (೯೨) ಅವರು ತಾ. ೧೯ ರಂದು ಪೂಜೆ ಮಾಡುತ್ತಿರುವಾಗಲೇ ಲಿಂಗೈಕ್ಯರಾದರು.ಹಿರಿಯ ಸ್ವಾಮೀಜಿಯವರ ಮೃತದೇಹವನ್ನು ಹೂವಿನಿಂದ ಅಲಂಕೃತ ವಾಹನದಲ್ಲಿರಿಸಿ ಅಂತಿಮ ಯಾತ್ರಾ ಮೆರವಣಿಗೆಯನ್ನು ಸಾಂಪ್ರದಾಯಿಕವಾಗಿ ಕೊಡ್ಲಿಪೇಟೆ ಪಟ್ಟಣದಲ್ಲಿ ನೆರವೇರಿಸಲಾಯಿತು. ಸಂಜೆ ಮಠದ ಆವರಣದಲ್ಲಿ ವಿಧಿವಿಧಾನಗಳೊಂದಿಗೆ ಕ್ರಿಯಾ ಸಮಾಧಿ ಮಾಡಿ, ಅಂತ್ಯಸAಸ್ಕಾರ ನೆರವೇರಿಸಲಾಯಿತು.
ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಅರಮೇರಿ ಕಳಂಚೇರಿ ಮಠಾಧೀಶ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ, ಕಲ್ಲುಮಠಾಧೀಶ ಮಹಾಂತಸ್ವಾಮೀಜಿ, ಮುದ್ದಿನಕಟ್ಟೆ ಮಠಾಧೀಶ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಕಲ್ಲಳ್ಳಿ ಮಠಾಧೀಶ ರುದ್ರಮುನಿ ಸ್ವಾಮೀಜಿ, ಹಾಸನ ತಣ್ಣೀರಹಳ್ಳ ಮಠಾಧೀಶರು ಹಾಗೂ ವೀರಶೈವ ಸಮಾಜದ ಪ್ರಮುಖರು ಹಾಜರಿದ್ದರು.