ರಾಷ್ಟçಪತಿ ಚುನಾವಣೆ ಮುಕ್ತಾಯ - ತಾ. ೨೧ ರಂದು ಫಲಿತಾಂಶ
ನವದೆಹಲಿ, ಜು. ೧೮: ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ, ೧೫ನೇ ರಾಷ್ಟçಪತಿಯ ಆಯ್ಕೆಗಾಗಿ ಸೋಮವಾರ ಚುನಾವಣೆ ನಡೆಯಿತು. ದೇಶದ ಒಟ್ಟು ೭೭೦ ಸಂಸದರು ಮತ್ತು ೪,೦೩೩ ಶಾಸಕರು ಮತ ಚಲಾಯಿಸುವ ಮೂಲಕ ರಾಷ್ಟçಪತಿ ಚುನಾವಣೆ ಮುಕ್ತಾಯಗೊಂಡಿದ್ದು, ಬಿಜೆಪಿ ನೇತೃತ್ವದ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ಬಹುತೇಕ ಖಚಿತವಾಗಿದೆ. ಇಂದು ನಡೆದ ರಾಷ್ಟçಪತಿ ಚುನಾವಣೆಯಲ್ಲಿ ಶೇ. ೯೮.೯೦ ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಸಂಸತ್ ಚುನಾವಣಾಧಿಕಾರಿ ಪಿಸಿ ಮೋದಿ ಅವರು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಸೇರಿದಂತೆ ಹಲವು ನಾಯಕರು ಸಂಸತ್ ಭವನದಲ್ಲಿ ಮತ ಚಲಾಯಿಸಿದರು. ಅಲ್ಲದೆ ದೇಶಾದ್ಯಂತ ರಾಜ್ಯ ವಿಧಾನಸಭೆಗಳಲ್ಲೂ ಮತದಾನ ನಡೆಯಿತು. ರಾಷ್ಟçಪತಿ ಚುನಾವಣೆಯಲ್ಲಿ ವಿವಿಧ ಪಕ್ಷಗಳ ನಿಲುವಿನ ಪ್ರಕಾರ, ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ ಗೆಲುವು ಸಾಧಿಸುವ ಸಾಧ್ಯತೆ ಇದೆ. ತಾ.೨೧ ರಂದು ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಮತದಾನದ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಚುನಾವಣಾಧಿಕಾರಿ ಮೋದಿ, ೭೨೭ ಸಂಸದರು ಮತ್ತು ಒಂಬತ್ತು ಶಾಸಕರು ಸೇರಿದಂತೆ ೭೩೬ ಮತದಾರರಿಗೆ ಸಂಸತ್ ಭವನದಲ್ಲಿ ಮತ ಚಲಾಯಿಸಲು ಚುನಾವಣಾ ಆಯೋಗ ಅನುಮತಿ ನೀಡಿತ್ತು. ಆ ಪೈಕಿ ೭೨೮ (೭೧೯ ಸಂಸದರು ಮತ್ತು ಒಂಬತ್ತು ಶಾಸಕರು) ಮಂದಿ ಮತ ಚಲಾಯಿಸಿದ್ದಾರೆ ಎಂದರು.
ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರ ಸಾವು
ರಾಯಚೂರು, ಜು. ೧೮: ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದ ಸಮೀಪದ ಬಾಲಯ್ಯ ಕ್ಯಾಂಪ್ ಬಳಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ಭೀಕರ ಅಪಘಾತದಲ್ಲಿ ಸಾವಿಗೀಡಾದವರು ಆಂಧ್ರಪ್ರದೇಶ ಮೂಲದ ದೀಪ್(೩೫), ಪೂರ್ಣಿಮಾ(೩೦), ಜಶಿನ್(೧೨) ಹಾಗೂ ಮಾಹಿನ್(೭) ಎಂದು ಗುರುತಿಸಲಾಗಿದೆ. ತಂದೆ, ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಬೆಂಗಳೂರಿನಿAದ ಸಿಂಧನೂರು ಮಾರ್ಗವಾಗಿ ಹೈದ್ರಾಬಾದ್ಗೆ ತೆರಳುತ್ತಿದ್ದ ಕುಟುಂಬ ದುರಂತ ಸಾವಿಗೀಡಾಗಿದೆ. ಲಾರಿ ಚಾಲಕ ಘಟನೆ ಬಳಿಕ ಪರಾರಿಯಾಗಿದ್ದಾನೆ. ಮೃತ ದೇಹಗಳನ್ನು ಸಿಂಧನೂರು ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಘಟನೆಗೆ ಸಂಬAಧಿಸಿದAತೆ ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಆಗಿದ್ದು, ಎರಡು ಜೆಸಿಬಿಯಿಂದ ಅಪಘಾತವಾದ ವಾಹನಗಳ ತೆರವು ಕಾರ್ಯಾಚರಣೆ ನಡೆಸಲಾಗಿದೆ.
ಕೇರಳದಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣ
ತಿರುವನಂತಪುರA, ಜು. ೧೮: ಕೇರಳದಲ್ಲಿ ಭಾರತದ ಎರಡನೇ ಮಂಕಿಪಾಕ್ಸ್ ಪ್ರಕರಣ ವರದಿಯಾಗಿದೆ ಎಂದು ಆರೋಗ್ಯ ಇಲಾಖೆ ಸೋಮವಾರ ದೃಢಪಡಿಸಿದೆ. ತಾ. ೧೩ ರಂದು ದುಬೈನಿಂದ ಆಗಮಿಸಿದ ಕಣ್ಣೂರಿನ ೩೧ ವರ್ಷದ ವ್ಯಕ್ತಿಗೆ ಮಂಕಿಪಾಕ್ಸ್ ದೃಢಪಟ್ಟಿದೆ. ಈ ಹಿಂದೆ ಮೊದಲ ಪ್ರಕರಣ ಕೇರಳದಲ್ಲಿಯೇ ಪತ್ತೆಯಾಗಿತ್ತು. ಸೋಂಕಿತ ವ್ಯಕ್ತಿ ಕಣ್ಣೂರಿನ ಪರಿಯಾರಂ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ರೋಗಿಯೊಂದಿಗೆ ನಿಕಟ ಸಂಪರ್ಕಕ್ಕೆ ಬಂದ ಜನರ ಮೇಲೆ ನಿಗಾ ವಹಿಸಲಾಗಿದೆ ಎಂದು ಅವರು ಹೇಳಿದ್ದಾರೆ. ತಾ. ೧೪ ರಂದು ಅಬುದಾಬಿಯಿಂದ ಕೇರಳಕ್ಕೆ ಹಿಂದಿರುಗಿದ ೩೫ ವರ್ಷದ ವ್ಯಕ್ತಿಯಲ್ಲಿ ದೇಶದ ಮೊದಲ ಮಂಕಿಪಾಕ್ಸ್ ಪ್ರಕರಣ ವರದಿಯಾಗಿತ್ತು. ಅವರು ಪ್ರಸ್ತುತ ತಿರುವನಂತಪುರA ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೋಗಿಯೊಂದಿಗೆ ಪ್ರಯಾಣಿಸಿದ ಐದು ಜಿಲ್ಲೆಗಳ ೧೬೪ ಪ್ರಯಾಣಿಕರ ಮೇಲೆ ನಿಗಾವಹಿಸಲಾಗಿದೆ. ರಾಜ್ಯದಲ್ಲಿ ಮಂಕಿಪಾಕ್ಸ್ ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ವಿಮಾನ ನಿಲ್ದಾಣಗಳಲ್ಲಿ ರೋಗಲಕ್ಷಣಗಳನ್ನು ಹೊಂದಿರುವ ಪ್ರಯಾಣಿಕರನ್ನು ಗುರುತಿಸಲು ಮತ್ತು ಅವರಿಗೆ ಚಿಕಿತ್ಸೆ ನೀಡಲು ಸಹಾಯ ಕೇಂದ್ರವನ್ನು ಪ್ರಾರಂಭಿಸಿದೆ.
ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ
ನವದೆಹಲಿ, ಜು. ೧೮: ದೆಹಲಿಯಲ್ಲಿ ನಿಯೋಜನೆಗೊಂಡಿದ್ದ ಸಿಕ್ಕಿಂ ಪೊಲೀಸ್ ಸಿಬ್ಬಂದಿಯೊಬ್ಬರು ಸೋಮವಾರ ತನ್ನ ಮೂವರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದಿದ್ದಾರೆ. ಗುಂಡಿನ ದಾಳಿಯಲ್ಲಿ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ದೆಹಲಿಯ ಹೈದರ್ಪುರ ಪ್ರದೇಶದ ವಾಟರ್ ಪ್ಲಾಂಟ್ನಲ್ಲಿ ಈ ಘಟನೆ ನಡೆದಿದೆ. ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ ಆರೋಪಿಯನ್ನು ೩೨ ವರ್ಷದ ಪ್ರಬಿಣ್ ರೈ ಎಂದು ಗುರುತಿಸಲಾಗಿದೆ. ಗುಂಡಿನ ದಾಳಿಯ ಬಳಿಕ ಪ್ರಬಿಣ್ ರೈ ಪೊಲೀಸರಿಗೆ ಶರಣಾಗಿದ್ದಾರೆ. ವಾಟರ್ ಪ್ಲಾಂಟ್ನಲ್ಲಿ ನಿಯೋಜನೆಗೊಂಡಿದ್ದ ರೈ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟರೆ, ಮೂರನೇ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ದಾಳಿ ಬಳಿಕ ರೈ ಪೊಲೀಸರಿಗೆ ಕರೆ ಮಾಡಿ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಘಟನೆಗೆ ಕಾರಣ ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ ಎಂದಿದ್ದಾರೆ.
ಯುವಕನ ಬರ್ಬರ ಹತ್ಯೆ
ಬೆಂಗಳೂರು, ಜು. ೧೮: ಹುಟ್ಟುಹಬ್ಬದ ಆಚರಣೆಗಾಗಿ ಸ್ನೇಹಿತರ ಜೊತೆಗೆ ತೆರಳಿದ್ದ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ದುರ್ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆಂಗೇರಿ ಸಮೀಪದ ಎಚ್.ಗೊಲ್ಲಹಳ್ಳಿ ನಿವಾಸಿ ಹೇಮಂತ್ ಕುಮಾರ್ ಮೃತ ಯುವಕ. ಕೋನಸಂದ್ರ ಕೆರೆ ಸಮೀಪದ ನೈಸ್ ರಸ್ತೆಯ ಅಂಡರ್ ಪಾಸ್ನಲ್ಲಿ ಹೇಮಂತ್ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಗುರುತು ಸಿಗದ ಹಾಗೆ ಕಲ್ಲಿನಿಂದ ಮುಖ ಜಜ್ಜಿ ಶವ ಎಸೆದು ಪರಾರಿಯಾಗಿದ್ದಾರೆ. ಶನಿವಾರ ಹೇಮಂತ್ ಹುಟ್ಟುಹಬ್ಬವಿದ್ದ ಹಿನ್ನೆಲೆಯಲ್ಲಿ ಸ್ನೇಹಿತರ ಜೊತೆ ತೆರಳಿದ್ದ.ರಾತ್ರಿ ೮ರ ಸುಮಾರಿಗೆ ಪೋಷಕರಿಗೆ ಕರೆ ಮಾಡಿ ಮಾತನಾಡಿದ್ದ. ರಾತ್ರಿ ೧೦ ಗಂಟೆಯಾದರೂ ಹೇಮಂತ್ ಮನೆಗೆ ಬಾರದಿದ್ದರಿಂದ ಪೋಷಕರು ಕರೆ ಮಾಡಿದಾಗ ಹೇಮಂತ್ ಮೊಬೈಲ್ ಸ್ವಿಚ್ ಆಫ್ ಬಂದಿದೆ. ಇದರಿಂದ ಗಾಬರಿಗೊಂಡ ಪೋಷಕರು ಆತನ ಸ್ನೇಹಿತರಿಗೆ ಕರೆ ಮಾಡಿ ವಿಚಾರಿಸಿದ್ದಾರೆ. ಆದರೂ ಯಾವುದೇ ಸುಳಿವು ಸಿಕ್ಕಿಲ್ಲ. ಈ ನಡುವೆ ದುಷ್ಕರ್ಮಿಗಳು ಹೇಮಂತ್ನನ್ನು ಮಾರಕಾಸ್ತçಗಳಿಂದ ಅಮಾನುಷವಾಗಿ ಹತ್ಯೆ ಮಾಡಿದ್ದಾರೆ.
ಆಗಸ್ಟಾ ವೆಸ್ಟ್ಲ್ಯಾಂಡ್ ಹಗರಣ - ನಾಲ್ವರಿಗೆ ಸಮನ್ಸ್
ನವದೆಹಲಿ, ಜು. ೧೮: ೩,೬೦೦ ಕೋಟಿ ರೂ.ಗಳ ಆಗಸ್ಟಾ ವೆಸ್ಟ್ಲ್ಯಾಂಡ್ ಹಗರಣಕ್ಕೆ ಸಂಬAಧಿಸಿದAತೆ ನಾಲ್ವರು ಮಾಜಿ ಐಎಎಫ್ ಅಧಿಕಾರಿಗಳಿಗೆ ದೆಹಲಿ ನ್ಯಾಯಾಲಯ ಸೋಮವಾರ ಸಮನ್ಸ್ ನೀಡಿದ್ದು, ತಾ. ೩೦ ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಮಾಜಿ ಅಧಿಕಾರಿಗಳಿಗೆ ಸೂಚಿಸಿದೆ. ೩,೬೦೦ ಕೋಟಿ ರೂ ಮೊತ್ತದ ಇವಿಐಪಿ ಹೆಲಿಕಾಪ್ಟರ್ ಹಗರಣದಲ್ಲಿ ಮಾಜಿ ರಕ್ಷಣಾ ಕಾರ್ಯದರ್ಶಿ ಶಶಿಕಾಂತ್ ಶರ್ಮಾ ಹಾಗೂ ಈ ನಾಲ್ವರು ಮಾಜಿ ಐಎಎಫ್ ಅಧಿಕಾರಿಗಳ ವಿರುದ್ಧ ಸಿಬಿಐ ಆರೋಪಪಟ್ಟಿ ದಾಖಲಿಸಿದೆ. ಫೆಬ್ರವರಿ ೨೦೧೦ ರಲ್ಲಿ, ಆಗಿನ ಯುಪಿಎ ಸರ್ಕಾರವು ೫೫೬.೨೬೨ ಮಿಲಿಯನ್ ಯುರೋ ಮೌಲ್ಯದ ೧೨ ಆಗಸ್ಟಾ ವೆಸ್ಟ್ಲ್ಯಾಂಡ್ ಚಾಪರ್ಗಳನ್ನು ಖರೀದಿಸಲು ಒಪ್ಪಂದಕ್ಕೆ ಸಹಿ ಹಾಕಿತ್ತು. ವಿವಿಐಪಿಗಳು ಮತ್ತು ಇತರ ಪ್ರಮುಖ ಗಣ್ಯರನ್ನು ಕರೆದೊಯ್ಯಲು ಈ ಹೆಲಿಕಾಪ್ಟರ್ ಗಳನ್ನು ಖರೀದಿಸಲಾಗುತ್ತಿದೆ. ಆಗಸ್ಟಾ ವೆಸ್ಟ್ಲ್ಯಾಂಡ್ಗೆ ಅನುಕೂಲವಾಗುವಂತೆ ಚಾಪರ್ ವಿಶೇಷತೆಗಳನ್ನು ಮೂಲ ಒಪ್ಪಂದದಿAದ ಬದಲಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಒಟ್ಟಾರೆ ಒಪ್ಪಂದವು ೩,೬೦೦ ಕೋಟಿ ರೂ. ಆಗಿದೆ.