ಮಡಿಕೇರಿ, ಜು. ೨೦: ದಿನಬಳಕೆಯ ಆಹಾರ ಪದಾರ್ಥಗಳ ಮೇಲೆ ಹಾಕಿರುವ ಜಿಎಸ್‌ಟಿ ತೆರಿಗೆಯನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಸೋಷಿಯಲ್ ಡೆಮಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆಗ್ರಹಿಸಿದ್ದಾರೆ.ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಅವರು ಮಾತನಾಡಿದರು. ಜಿಎಸ್‌ಟಿಯನ್ನು ಜಾರಿಗೆ ತರುವ ಸಂದರ್ಭ ಅಗತ್ಯ ಆಹಾರ ವಸ್ತುಗಳ ಮಡಿಕೇರಿ, ಜು. ೨೦: ದಿನಬಳಕೆಯ ಆಹಾರ ಪದಾರ್ಥಗಳ ಮೇಲೆ ಹಾಕಿರುವ ಜಿಎಸ್‌ಟಿ ತೆರಿಗೆಯನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಸೋಷಿಯಲ್ ಡೆಮಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆಗ್ರಹಿಸಿದ್ದಾರೆ.
ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಅವರು ಮಾತನಾಡಿದರು. ಜಿಎಸ್‌ಟಿಯನ್ನು ಜಾರಿಗೆ ತರುವ ಸಂದರ್ಭ ಅಗತ್ಯ ಆಹಾರ ವಸ್ತುಗಳ ಮೋದಿಯವರು ಜನರನ್ನು ವಂಚಿಸಿದ್ದಾರೆ. ಈ ಬಗ್ಗೆ ವಿಪಕ್ಷಗಳು ಪ್ರಸ್ತಾಪಿಸಿದರೆ, ಆರ್ಥಿಕ ಸುಧಾರಣೆ ಗಾಗಿ ಈ ರೀತಿ ಮಾಡಲಾಗಿದೆ ಎಂದು ಬಿಜೆಪಿ ಹೇಳುತ್ತಿದೆ. ಸಂಪನ್ಮೂಲ ಕ್ರೋಢೀಕರಣ ಮಾಡುವುದಾದರೆ ಯಾರು ತೆರಿಗೆ ಪಾವತಿಸದೆ ಸರ್ಕಾರವನ್ನು ವಂಚಿಸುತ್ತಿದ್ದಾರೋ; ಎಲ್ಲಿ ತೆರಿಗೆ ಸೋರಿಕೆಯಾಗುತ್ತಿದೆಯೋ ಅದನ್ನು ಪತ್ತೆಹಚ್ಚಿ
(ಮೊದಲ ಪುಟದಿಂದ) ಆ ಮೂಲಕ ಆರ್ಥಿಕ ಸುಧಾರಣೆಗೆ ಕ್ರಮಕೈಗೊಳ್ಳಬೇಕೆ ಹೊರತು ಅಗತ್ಯ ಆಹಾರ ಪದಾರ್ಥಗಳ ಮೇಲೆ ತೆರಿಗೆ ವಿಧಿಸಿ ಜನಸಾಮಾನ್ಯರನ್ನು ಸಂಕಷ್ಟಕ್ಕೆ ದೂಡುವುದು ಸರಿಯಲ್ಲ ಎಂದು ಅಬ್ದುಲ್ ಮಜೀದ್ ಹೇಳಿದರು. ಕೂಡಲೇ ಕೇಂದ್ರ ಸರಕಾರ ಆಹಾರಪದಾರ್ಥಗಳ ಮೇಲಿನ ಜಿಎಸ್‌ಟಿ ಆದೇಶವನ್ನು ಹಿಂಪಡೆಯಬೇಕು. ಇಲ್ಲವಾದರೆ ರಾಷ್ಟçವ್ಯಾಪಿ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಕೆಯಿತ್ತರು.
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಕಾವೇರಿ ಮಾತೆ ಹಾಗೂ ಕೊಡವರನ್ನು ಅವಹೇಳನ ಮಾಡಿದ ನೈಜ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರ ಕ್ರಮವನ್ನು ಎಸ್‌ಡಿಪಿಐ ಸ್ವಾಗತಿಸುತ್ತದೆ. ಆದರೆ ಆರೋಪಿಯನ್ನು ಬಂಧಿಸಬೇಕು, ಗಡಿಪಾರು ಮಾಡಬೇಕು ಎಂಬಿತ್ಯಾದಿ ಆಗ್ರಹಗಳನ್ನು ಮುಂದಿಟ್ಟಿದ್ದ ಸಂಸದರು, ಶಾಸಕರುಗಳು, ಹೋರಾಟಗಾರರು ಈಗ ಏಕೆ ಮೌನ ವಹಿಸಿದ್ದಾರೆ ಎಂದು ಅವರು ಪ್ರಶ್ನಿಸಿದರು.
ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಸಾಕಷ್ಟು ಹಾನಿ ಸಂಭವಿಸಿದ್ದು, ಜೀವನದಿ ಕಾವೇರಿಯ ತವರಾಗಿರುವ ಕೊಡಗಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಅಬ್ದುಲ್ ಮಜೀದ್ ಒತ್ತಾಯಿಸಿದರು.
ಗೋಷ್ಠಿಯಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಕಲೀಲ್, ನಗರಾಧ್ಯಕ್ಷ ರಿಜ್ವಾನ್, ಜಿಲ್ಲಾ ಸಮಿತಿ ಸದಸ್ಯ ಅಬ್ದುಲ್ಲಾ ಅಡ್ಕರ್, ನಗರಸಭಾ ಸದಸ್ಯರುಗಳಾದ ಮನ್ಸೂರ್, ಮೇರಿ ವೇಗಸ್ ಉಪಸ್ಥಿತರಿದ್ದರು.