ಕುಶಾಲನಗರ, ಜು.೨೦: ಕುಶಾಲನಗರ ಸಮೀಪದ ತೊರೆನೂರು ಗ್ರಾಮದ ಮಧ್ಯಭಾಗದಲ್ಲಿ ವಿದ್ಯುತ್ ಟ್ರಾನ್ಸ್ಫಾರ್ಮರ್ ಅಳವಡಿಸಿದ್ದು, ಕೂಡಲೇ ತೆರವುಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕಳೆದ ೫ ವರ್ಷಗಳಿಂದ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಸ್ಪಂದನೆ ದೊರಕಿಲ್ಲ ಎಂದು ದೂರಿರುವ ಸ್ಥಳೀಯ ಪ್ರಮುಖರಾದ ಕೃಷ್ಣೆಗೌಡ ಮತ್ತಿತ್ತರರು ಕುಶಾಲನಗರ ಸೆಸ್ಕ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಬಗ್ಗೆ ಪರಿಶೀಲನೆ ನಡೆಸಿ ಮೇಲಾಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳುವುದಾಗಿ ಸೆಸ್ಕ್ ಸಹಾಯಕ ಇಂಜಿನಿಯರ್ ಗೀತಾ ಭರವಸೆ ನೀಡಿದರು. ಈ ಸಂದರ್ಭ ಗ್ರಾಮಸ್ಥರಾದ ಕುಶಾಲಪ್ಪ, ಚಂದ್ರಪ್ಪ, ಪಾಂಡುರAಗ ಇದ್ದರು.