ಕೂಡಿಗೆ, ಜು. ೨೦: ಕೊಡಗು ಜಿಲ್ಲಾಡಳಿತ ಮತ್ತು ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಅಗ್ನಿಶಾಮಕ ಇಲಾಖೆ ವತಿಯಿಂದ ಕೂಡಿಗೆ ಡಯಟ್ ಸಭಾಂಗಣದಲ್ಲಿ ಕಳೆದ ೧೨ ದಿನಗಳಿಂದ ನಡೆಯುತ್ತಿದ್ದ ವಿಪತ್ತು ಮಿತ್ರ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ ನಡೆಯಿತು.

ಸಮಾರೋಪ ಸಮಾರಂಭ ದಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲಾಧಿಕಾರಿ ಡಾ. ಸತೀಶ, ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲು ಮುಂದಾಗಿರುವುದು ಶ್ಲಾಘನೀಯ. ವಿಪತ್ತು ನಿರ್ವಹಣೆಗೆ ಎಲ್ಲರೂ ಸನ್ನದ್ಧರಾಗಬೇಕು ಎಂದು ಸಲಹೆ ನೀಡಿದರು. ಸ್ವಯಂ ಸೇವಕರಿಗೆ ಸೂಕ್ತ ತರಬೇತಿ ನೀಡುವ ಮೂಲಕ ಪೂರ್ವ ಸಿದ್ಧತೆ ಪ್ರಕ್ರಿಯೆ ಅತೀ ಮುಖ್ಯ ಎಂದರು.

ಮೈಸೂರು ಪ್ರಾಂತ್ಯದ ಮುಖ್ಯ ಅಗ್ನಿಶಾಮಕ ಅಧಿಕಾರಿ ಪಿ.ಎಸ್. ಜಯರಾಮಯ್ಯ ಮಾತನಾಡಿ, ಜಿಲ್ಲೆಯಲ್ಲಿ ಮಳೆಗಾಲ ಆರಂಭ ವಾಗಿದ್ದು, ಮುಂದೆ ಎದುರಾಗ ಬಹುದಾದ ವಿವಿಧ ರೀತಿಯ ಅಪಾಯಗಳನ್ನು ಗುರುತಿಸಿ ಅತ್ಯಂತ ವ್ಯವಸ್ಥಿತವಾದ ನಿರ್ವಹಣ ಯೋಜನೆಯನ್ನು ಸಿದ್ಧಪಡಿಸಿ ಸದಾ ಸನ್ನದ್ಧವಾಗಿರುವುದು ಅತೀ ಅಗತ್ಯವಾಗಿದೆ ಎಂದರು.

ಈ ಸಂದರ್ಭ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ನವೀನ್ ಕುಮಾರ್, ಕೊಡಗು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪಿ. ಚಂದನ್, ಮಂಡ್ಯ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಕೆ.ಪಿ. ಗುರುರಾಜ್ ಮತ್ತು ವಿವಿಧ ಠಾಣೆಗಳ ಠಾಣಾಧಿಕಾರಿಗಳಾದ ಅಜಯ್ ಕುಮಾರ್, ಹನುಮಂತ ರಾಯ, ಸಂತೋಷ್ ಹಾಗೂ ಕುಶಾಲನಗರ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಹಾಜ ರಿದ್ದರು. ವಿಪತ್ತು ಮಿತ್ರ ತರಬೇತಿಗೆ ವಿವಿಧೆಡೆಗಳಿಂದ ಆಗಮಿಸಿದ್ದ ಸ್ವಯಂ ಸೇವಕರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.