ಕುಶಾಲನಗರ, ಜು. ೨೦ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗು ಕುಶಾಲನಗರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ತಾ ೨೧ ರಂದು (ಇಂದು) ಬೆಳಗ್ಗೆ ೧೧ ಗಂಟೆಗೆ ಕುಶಾಲನಗರದ ವಿವೇಕಾನಂದ ಪಿಯು ಕಾಲೇಜಿನಲ್ಲಿ ‘ಶರಣ ಸಂಸ್ಕೃತಿ’ ವಿಚಾರದ ಕುರಿತು ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾಧ್ಯಕ್ಷ ಹೆಚ್.ವಿ.ಶಿವಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪರಿಷತ್ತಿನ ಕುಶಾಲನಗರ ತಾಲೂಕು ಅಧ್ಯಕ್ಷ ಕೆ.ಎಸ್.ಮೂರ್ತಿ ಅಧ್ಯಕ್ಷತೆ ವಹಿಸಲಿದ್ದು, ಹೆಬ್ಬಾಲೆ ವಿದ್ಯಾಸಂಸ್ಥೆಯ ಉಪನ್ಯಾಸಕ ಮೆ.ನಾ.ವೆಂಕಟನಾಯಕ್ ಶರಣ ಸಂಸ್ಕ್ರತಿ ಕುರಿತು ಉಪನ್ಯಾಸ ನೀಡಲಿದ್ದಾರೆ.
ಕೊಡಗು ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್, ಕುಶಾಲನಗರ ಸರ್ಕಾರಿ ಆಸ್ಪತ್ರೆಯ ಸ್ತಿçà ರೋಗ ತಜ್ಞೆ ಡಾ. ಆರ್.ಪ್ರತಿಭಾ, ಕೊಡಗು ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಸದಾಶಿವಯ್ಯ ಪಲ್ಯೇದ್, ಕದಳಿ ವೇದಿಕೆ ತಾಲೂಕು ಅಧ್ಯಕ್ಷೆ ಲೇಖನಾ ಧರ್ಮೇಂದ್ರ, ವಿವೇಕಾನಂದ ಪಿಯು ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಶಂಭುಲಿAಗಪ್ಪ, ಪ್ರಾಂಶುಪಾಲೆ ಕ್ಲಾರಾ ರೇಶ್ಮಾ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಕುಶಾಲನಗರ ಕಸಾಪ ಗೌರವ ಕಾರ್ಯದರ್ಶಿ ಎಸ್.ನಾಗರಾಜು ಹಾಗು ಮಂಜು ಭಾರ್ಗವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.