ಕುಶಾಲನಗರ, ಜು.೨೦: ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ವಸತಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.

ಕುಶಾಲನಗರ ರೈತ ಸಹಕಾರ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕಿನ ೮೦೦ ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರ ವಿತರಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಸರಕಾರದ ಸವಲತ್ತು, ಸೌಲಭ್ಯಗಳ ಯೋಜನೆಯನ್ನು ಅರ್ಹ ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಬೇಕು. ಅಧಿಕಾರಿಗಳ ಸಲಹೆ, ಸೂಚನೆ ಪಡೆಯುವ ಮೂಲಕ ಮನೆ ನಿರ್ಮಿಸಿಕೊಂಡು ನೆಮ್ಮದಿ, ಸುಖಿ ಜೀವನ ಸಾಗಿಸುವಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು.

ಈ ಸಂದರ್ಭ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿನ ೩೮ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಫಲಾನುಭವಿಗಳು ಹಕ್ಕುಪತ್ರ ಪಡೆದರು.

ಸೋಮವಾರಪೇಟೆ ತಾಲೂಕು ಕಾರ್ಯನಿರ್ವಹಣಾಧಿಕಾರಿ ಜಯಣ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.