ಈಶ್ವರಪ್ಪಗೆ ಕ್ಲೀನ್ ಚಿಟ್

ಬೆಂಗಳೂರು, ಜು. ೨೦: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದ್ದು, ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಅಂತಿಮ ವರದಿಯನ್ನು ಉಡುಪಿ ಪೊಲೀಸರು ಬುಧವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ್ದಕ್ಕೆ ಸಾಕ್ಷö್ಯಗಳೇ ಇಲ್ಲ ಎಂದು ಅಂತಿಮ ವರದಿಯಲ್ಲಿ ಉಡುಪಿ ಪೊಲೀಸರು ಉಲ್ಲೇಖಿಸಿದ್ದಾರೆ. ಪ್ರಕರಣದಲ್ಲಿ ಈಶ್ವರಪ್ಪ ಅವರನ್ನು ಕರೆದು ವಿಚಾರಣೆಯನ್ನೂ ನಡೆಸಿಲ್ಲ. ಆದರೂ ಆತ್ಮಹತ್ಯೆಗೆ ಕುಮ್ಮಕ್ಕು ಎಂಬುದಕ್ಕೆ ಸಾಕ್ಷ್ಯಾಧಾರಗಳೇ ಇಲ್ಲ ಎಂದು ತನಿಖೆ ನಡೆಸಿರುವ ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ.

ಶಂಕಿತ ಆರೋಪಿ ಎನ್‌ಕೌಂಟರ್‌ನಲ್ಲಿ ಬಲಿ

ಅಮೃತಸರ, ಜು. ೨೦: ಗಾಯಕ ಸಿಧು ಮೂಸೆ ವಾಲಾ ಹತ್ಯೆಯ ಶಂಕಿತ ಆರೋಪಿ ಜಗ್ರೂಪ್ ಸಿಂಗ್ ರೂಪ ಎಂಬ ದರೋಡೆಕೋರ ಬುಧವಾರ ಅಮೃತಸರ ಬಳಿ ಪಂಜಾಬ್ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ವೇಳೆ ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಅಮೃತಸರದಿಂದ ೨೦ ಕಿ.ಮೀ. ದೂರದಲ್ಲಿರುವ ಭಕ್ನಾ ಗ್ರಾಮದಲ್ಲಿ ಪಂಜಾಬ್ ಪೊಲೀಸರ ಆಂಟಿ-ಗ್ಯಾAಗ್‌ಸ್ಟರ್ ಟಾಸ್ಕ್ ಫೋರ್ಸ್, ಜಗ್ರೂಪ್ ಸಿಂಗ್ ರೂಪ ಮತ್ತು ಮನ್‌ಪ್ರೀತ್ ಸಿಂಗ್ ಅಲಿಯಾಸ್ ಮನ್ನು ಕುಸ್ಸಾ ಎಂಬ ಇಬ್ಬರು ವ್ಯಕ್ತಿಗಳನ್ನು ಹಿಂಬಾಲಿಸುತ್ತಿದ್ದಾಗ ಎನ್‌ಕೌಂಟರ್ ಆರಂಭವಾಗಿದೆ. ಮೇ ೨೯ ರಂದು ಎಕೆ-೪೭ ರೈಫಲ್‌ನಿಂದ ಮೂಸೆ ವಾಲಾಗೆ ಮೊದಲು ಗುಂಡು ಹಾರಿಸಿದ ಆರೋಪ ಮನ್ನು ಕುಸ್ಸಾ ಮೇಲಿದೆ. ದೀಪಕ್ ಮುಂಡಿ ಎಂಬ ಇನ್ನೊಬ್ಬ ಶೂಟರ್ ಇನ್ನೂ ಪತ್ತೆಯಾಗಿಲ್ಲ. ಪ್ರಕರಣದಲ್ಲಿ ಕನಿಷ್ಠ ಎಂಟು ಶೂಟರ್‌ಗಳಿದ್ದು ಅವರನ್ನು ಬಂಧಿಸಲಾಗಿದೆ. ಗಾಯಕ-ಗೀತರಚನೆಕಾರ ಮತ್ತು ರ‍್ಯಾಪರ್ ಆಗಿದ್ದಲ್ಲದೆ ಕಾಂಗ್ರೆಸ್ ನಾಯಕರಾಗಿದ್ದ ೨೮ ವರ್ಷದ ಶುಭದೀಪ್ ಸಿಂಗ್ ಸಿಧು ಅಲಿಯಾಸ್ ಸಿಧು ಮೂಸೆವಾಲಾ ಅವರನ್ನು ಪಂಜಾಬ್‌ನ ಮಾನ್ಸಾ ಜಿಲ್ಲೆಯ ಮೂಸಾ ಗ್ರಾಮದ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪಂಜಾಬ್, ದೆಹಲಿ ಮತ್ತು ಮುಂಬೈ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ದೆಹಲಿಯ ತಿಹಾರ್ ಜೈಲಿನಲ್ಲಿದ್ದ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ನಿರ್ದೇಶನದಂತೆ ಕೆನಡಾ ಮೂಲದ ಸತೀಂದರ್ಜಿತ್ ಸಿಂಗ್ ಅಲಿಯಾಸ್ ಗೋಲ್ಡಿ ಬ್ರಾರ್ ಈ ಕೊಲೆಯನ್ನು ನಿರ್ದೇಶಿಸಿದ್ದಾರೆ ಎಂದು ಹೇಳಲಾಗಿದೆ.

ಜುಬೈರ್‌ಗೆ ಜಾಮೀನು ನೀಡಲು ಕೋರ್ಟ್ ಆದೇಶ

ನವದೆಹಲಿ, ಜು. ೨೦: ಟ್ವಿಟ್ಟರ್‌ನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ದಾಖಲಾಗಿದ್ದ ಎಲ್ಲಾ ೬ ಎಫ್.ಐ.ಆರ್.ಗಳಲ್ಲೂ ಸುಪ್ರೀಂ ಕೋರ್ಟ್ ಆತನಿಗೆ ಜಾಮೀನು ಮಂಜೂರು ಮಾಡಿದೆ. ಜುಬೈರ್‌ನ್ನು ಬಂಧನದಲ್ಲೇ ಮುಂದುವರೆಸಲು ಯಾವುದೇ ಕಾರಣ, ಸಮರ್ಥನೆಗಳಿಲ್ಲ ಎಂದು ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡುವ ವೇಳೆ ಹೇಳಿದೆ. ೨೦,೦೦೦ ರೂಪಾಯಿಗಳ ಬಾಂಡ್‌ನ್ನು ಪಟಿಯಾಲಾ ಹೌಸ್‌ನ ಸಿಎಂಎA ಎದುರು ಹಾಜರುಪಡಿಸಬೇಕು ಹಾಗೂ ಅದನ್ನು ಹಾಜರುಪಡಿಸುತ್ತಿದ್ದಂತೆಯೇ ಅರ್ಜಿದಾರರನ್ನು ತಿಹಾರ್ ಜೈಲ್‌ನಿಂದ ಬಿಡುಗಡೆ ಮಾಡಬೇಕು ಎಂದು ಕೋರ್ಟ್ ಆದೇಶಿಸಿದೆ. ನಾವು ಆತನನ್ನು ಟ್ವೀಟಿಸುವುದರಿಂದ ತಡೆಯುವುದಕ್ಕೆ ಸಾಧ್ಯವಿಲ್ಲ. ಆತನ ವಾಕ್ ಸ್ವಾತಂತ್ರ‍್ಯದ ಹಕ್ಕು ಕಸಿಯುವುದಕ್ಕೆ ಸಾಧ್ಯವಿಲ್ಲ. ಆತ ಕಾನೂನಿಗೆ ಉತ್ತರದಾಯಿಯಾಗಿದ್ದಾನೆ. ಸಾಕ್ಷ್ಯಗಳು ಸಾರ್ವಜನಿಕವಾಗಿ ಲಭ್ಯವಿರಲಿದೆ ಎಂದು ಕೋರ್ಟ್ ಹೇಳಿದೆ.

ಶ್ರೀಲಂಕಾದ ಅಧ್ಯಕ್ಷರಾಗಿ ರನಿಲ್ ವಿಕ್ರಮ ಸಿಂಘೆ

ಕೊಲAಬೊ, ಜು. ೨೦: ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮ ಸಿಂಘೆ ಅವರು ಆಯ್ಕೆಯಾಗಿದ್ದಾರೆ. ಬುಧವಾರ ಶ್ರೀಲಂಕಾ ಸಂಸತ್ತಿನಲ್ಲಿ ನಡೆದ ಚುನಾವಣೆಯಲ್ಲಿ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ೭೩ ವರ್ಷದ ಮತ್ತು ಆರು ಬಾರಿ ಪ್ರಧಾನಿಯಾಗಿದ್ದ ವಿಕ್ರಮ ಸಿಂಘೆ ಅವರು ೨೨೫ ಸದಸ್ಯರ ಶ್ರೀಲಂಕಾ ಸಂಸತ್ ನಲ್ಲಿ ೧೩೪ ಮತಗಳನ್ನು ಪಡೆದು ಜಯಶಾಲಿಯಾಗಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಮತ್ತು ಭಿನ್ನಮತೀಯ ಆಡಳಿತ ಪಕ್ಷದ ನಾಯಕ ಡಲ್ಲಾಸ್ ಅಲಹಪ್ಪೆರುಮಾ ಅವರು ೮೨ ಮತಗಳನ್ನು ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ರೂ. ೧೦೦ ಕೋಟಿ ವಂಚಿಸಲು ಯತ್ನಿಸಿದ್ದ ನಾಲ್ವರ ಬಂಧನ

ಮುAಬೈ, ಜು. ೨೦: ಮಹಾರಾಷ್ಟç ಸರ್ಕಾರದಲ್ಲಿ ಸಚಿವ ಸ್ಥಾನ ಕೊಡಿಸುವ ನೆಪದಲ್ಲಿ ಶಾಸಕರೊಬ್ಬರಿಗೆ ೧೦೦ ಕೋಟಿ ರೂಪಾಯಿ ವಂಚಿಸಲು ಯತ್ನಿಸಿದ್ದ ನಾಲ್ವರ ತಂಡವನ್ನು ಸುಲಿಗೆ ನಿಗ್ರಹ ದಳ ಬಂಧಿಸಿದೆ. ಬಂಧಿತರನ್ನು ರಿಯಾಜ್ ಶೇಖ್, ಯೋಗೇಶ್ ಕುಲಕರ್ಣಿ, ಸಾಗರ್ ಸಾಂಘ್ವಿ ಮತ್ತು ಜಾಫರ್ ಉಸ್ಮಾನಿ ಎಂದು ಗುರುತಿಸಲಾಗಿದೆ. ನೂತನವಾಗಿ ರಚನೆಯಾದ ಮಹಾರಾಷ್ಟç ಸರ್ಕಾರದಲ್ಲಿ ಖಾತೆಗಳ ಮರುಹಂಚಿಕೆ ಊಹಾಪೋಹಗಳ ಮಧ್ಯೆ ಈ ಪ್ರಕರಣ ಬೆಳಕಿಗೆ ಬಂದಿದೆ. ತಮ್ಮ ಆಪ್ತ ಸಹಾಯಕನಿಗೆ ಜುಲೈ ೧೬ ರಂದು ರಿಯಾಜ್ ಶೇಖ್ ಎಂಬ ವ್ಯಕ್ತಿಯಿಂದ ಕರೆ ಬಂದಿದೆ ಎಂದು ದೌಂಡ್‌ನ ಬಿಜೆಪಿ ಶಾಸಕ ರಾಹುಲ್ ಕುಲ್ ಅವರು ಪೊಲೀಸರಿಗೆ ದೂರು ನೀಡಿದ ನಂತರ ನಾಲ್ವರನ್ನು ಬಂಧಿಸಲಾಗಿದೆ. ರಾಹುಲ್ ಕುಲ್ ಅವರಿಗೆ ರಿಯಾಜ್ ಶೇಖ್ ತನ್ನನ್ನು ಭೇಟಿ ಮಾಡುವಂತೆ ಹೇಳಿದ್ದರು. ಇದರ ಬೆನ್ನಲ್ಲೇ ಮುಂಬೈನ ಹೋಟೆಲ್‌ವೊಂದರಲ್ಲಿ ಕುಲ್ ಅವರನ್ನು ರಿಯಾಜ್ ಶೇಖ್ ಭೇಟಿಯಾಗಿ ಅಲ್ಲಿ ಹಿರಿಯ ರಾಜಕಾರಣಿಯೊಬ್ಬರು ತಮ್ಮ ಕೆಲಸವನ್ನು ಮಾಡುತ್ತಾರೆ. ಆದರೆ ಅದಕ್ಕಾಗಿ ಅವರು ರೂ. ೧೦೦ ಕೋಟಿ ನೀಡಬೇಕು ಎಂದು ಬೇಡಿಕೆ ಇಟ್ಟು ಇತರೆ ಆರೋಪಿಗಳೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸಿದರು ಮತ್ತು ೧೦೦ ಕೋಟಿಗಳ ಬದಲಿಗೆ ೯೦ ಕೋಟಿ ರೂ.ಗಳನ್ನು ಅಂತಿಮಗೊಳಿಸಲಾಯಿತು. ಆದರೆ ರಿಯಾಜ್ ಮುಂಗಡವಾಗಿ ಶೇ.೨೦ರಷ್ಟು ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ. ಶಾಸಕರೂ ಕೂಡ ಶೇ. ೨೦ ರಷ್ಟು ಹಣ ಕೊಡಲು ಒಪ್ಪಿ ನಂತರ ಬರುವಂತೆ ಹೇಳಿದ್ದರು.

ವಿದ್ಯಾರ್ಥಿಯಿಂದ ಬಾಂಬ್ ಬೆದರಿಕೆ!

ಬೆಂಗಳೂರು, ಜು. ೨೦: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಒಡೆತನದ ರಾಜ ರಾಜೇಶ್ವರಿನಗರದಲ್ಲಿರುವ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಗೆ ಸೋಮವಾರ ಬಾಂಬ್ ಬೆದರಿಕೆ ಬಂದಿತ್ತು. ಹುಚ್ಚಾ ವೆಂಕಟ್ ಹೆಸರಿನ ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದ ಆರೋಪಿ ಅದೇ ಶಾಲೆಯ ೧೦ನೇ ತರಗತಿಯ ವಿದ್ಯಾರ್ಥಿ ಎಂಬುದಾಗಿ ತಿಳಿದುಬಂದಿದೆ. ಬಾಂಬ್ ಬೆದರಿಕೆ ಬಂದಿದ್ದ ನ್ಯಾಶನಲ್ ಹಿಲ್ ವ್ಯೂ ಪಬ್ಲಿಕ್ ಸ್ಕೂಲ್‌ನಲ್ಲಿಯೇ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿಯಿಂದಲೇ ಈ ಕೃತ್ಯ ನಡೆದಿದೆ ಎಂಬುದು ಇದೀಗ ಬಹಿರಂಗವಾಗಿದೆ. ಸೋಮವಾರದಿಂದ ೧೦ನೇ ತರಗತಿಯ ಮೊದಲನೇ ಪರೀಕ್ಷೆ ಇತ್ತು. ಪರೀಕ್ಷೆಯನ್ನು ಮುಂದೂಡುವ ಸಲುವಾಗಿ ವಿದ್ಯಾರ್ಥಿ ಈ ರೀತಿ ಪ್ಲ್ಯಾನ್ ಮಾಡಿದ್ದ ವಿಚಾರ ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ಉತ್ತರಪ್ರದೇಶದ ಸಚಿವ ರಾಜೀನಾಮೆ

ಲಖನೌ, ಜು. ೨೦: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಚಂಡ ಬಹುಮತದಿಂದ ಪುನರಾಯ್ಕೆಯಾದ ಕೆಲವೇ ತಿಂಗಳುಗಳಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ತಾನು ದಲಿತ ಎಂಬ ಕಾರಣದಿಂದ ತನ್ನನ್ನು ಮೂಲೆಗುಂಪು ಮಾಡಲಾಗಿದೆ ಎಂದು ಆರೋಪಿಸಿ ಉತ್ತರ ಪ್ರದೇಶದ ಸಚಿವರೊಬ್ಬರು ರಾಜೀನಾಮೆ ನೀಡಿದ್ದಾರೆ. ಉತ್ತರ ಪ್ರದೇಶ ಸಚಿವ ದಿನೇಶ್ ಖತಿಕ್ ಅವರು ತಮ್ಮ ರಾಜೀನಾಮೆ ಪತ್ರವನ್ನು ನೇರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಳುಹಿಸಿದ್ದಾರೆ. ಮತ್ತೊಬ್ಬ ಸಚಿವ ಜಿತಿನ್ ಪ್ರಸಾದ ಅವರು ಮುಖ್ಯಮಂತ್ರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದಾರೆ.