ಮಡಿಕೇರಿ, ಜು. ೨೦: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸ್ಟೇಟ್ ಟೈರ‍್ಸ್ ಅಸೋಸಿಯೇಷನ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ತಾ. ೨೬ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಮಿತಿ ಅಧ್ಯಕ್ಷ ನಂದೀಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸ್ತಿçà ಮತ್ತು ಪುರುಷ ಹೊಲಿಗೆ ಕೆಲಸಗಾರರಿಗೆ ಜೀವನ ಭದ್ರತೆ ಒದಗಿಸಲು ಭವಿಷ್ಯ ನಿಧಿ ಹಾಗೂ ೬೦ ವರ್ಷ ತುಂಬಿದ ಟೈಲರ್‌ಗಳಿಗೆ ಮಾಸಿಕ ಪಿಂಚಣಿ ಜಾರಿ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ತಾ. ೨೬ರಂದು ಬೆಳಿಗ್ಗೆ ೧೦ ಗಂಟೆಗೆ ಪ್ರತಿಭಟನಾ ಮೆರವಣಿಗೆಯೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ನಂದೀಶ್ ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ಮಡಿಕೇರಿ ಕ್ಷೇತ್ರ ಸಮಿತಿ ಅಧ್ಯಕ್ಷ ಚಂದ್ರಶೇಖರ್, ಕಾರ್ಯದರ್ಶಿ ನವೀನ ಕುಮಾರಿ, ಸಲಹೆಗಾರ ಸಿರಾಜ್, ಸದಸ್ಯ ಸಜೀವ ಉಪಸ್ಥಿತರಿದ್ದರು.