ಮಡಿಕೇರಿ, ಜು. ೨೦: ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಜನರಲ್ ತಿಮ್ಮಯ್ಯ ರಾಷ್ಟಿçÃಯ ಸಾಹಸ ಅಕಾಡೆಮಿ ಮೂಲಕ ಜಲಸಾಹಸ ಕ್ರೀಡೆಯಲ್ಲಿ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿರುವ ಅಥವಾ ರಾಜ್ಯ, ರಾಷ್ಟಿçÃಯ ಮತ್ತು ಅಂರ‍್ರಾಷ್ಟಿçÃಯ ಮಟ್ಟದ ಮಾನ್ಯತೆ ಹೊಂದಿರುವ ಸ್ಪರ್ಧಾತ್ಮಕ ಸಾಹಸ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡಿರುವ/ ಪದಕ ವಿಜೇತರಾಗಿರುವ ೫ ಪರಿಶಿಷ್ಟ ಜಾತಿ ಸೇರಿದ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಸಹಕಾರಿಯಾಗುವಂತೆ ಜಲಸಾಹನ ಕ್ರೀಡಾ ಉಪಕರಣಗಳನ್ನು ಜಲಸಾಹಸ ಕೇಂದ್ರ ಸ್ಥಾಪನೆ ಮಾಡುವ ಕಾರ್ಯಕ್ರಮ ಅನುಷ್ಠಾನಗೊಳಿಸಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ, ರಾಷ್ಟಿçÃಯ ಮತ್ತು ಅಂರ‍್ರಾಷ್ಟಿçÃಯ ಮಟ್ಟದ ಕ್ರೀಡಾಕೂಟಗಳಲ್ಲಿ ಅಧಿಕೃತವಾಗಿ ಪ್ರತಿನಿಧಿಸಿ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿರುವ ಅಥವಾ ರಾಜ್ಯ, ರಾಷ್ಟಿçÃಯ ಮತ್ತು ಅಂತರರಾಷ್ಟಿçÃಯ ಮಟ್ಟದ ಮಾನ್ಯತೆ ಹೊಂದಿರುವ ಸ್ಪರ್ಧಾತ್ಮಕ ಸಾಹಸ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡಿರುವ/ ಪದಕ ವಿಜೇತರಾಗಿರುವ ಅರ್ಹ ಕ್ರೀಡಾಪಟುಗಳು ಕೊಡಗು ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ಅರ್ಜಿ ನಮೂನೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿಯಲ್ಲಿ ಪಡೆದು ಆಗಸ್ಟ್ ೮ ರೊಳಗೆ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ. ೦೮೨೭೨-೨೨೮೯೮೫ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್. ಗುರುಸ್ವಾಮಿ ತಿಳಿಸಿದ್ದಾರೆ.

ಸಾಲ ಸೌಲಭ್ಯಕ್ಕೆ

ಪ್ರಸಕ್ತ ಸಾಲಿನ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ಯೋಜನೆಗಳು, ಮೈಕ್ರೋ ಕ್ರೆಡಿಟ್ ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು), ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆ ಈ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆಯಾಯ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ವೆಬ್‌ಸೈಟ್ hಣಣಠಿs://suviಜhಚಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅರ್ಜಿ ಸಲ್ಲಿಸಬಹುದು.

ಯೋಜನೆಗಳ ಹೆಚ್ಚಿನ ಮಾಹಿತಿಯನ್ನು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ hಣಣಠಿs://ಚಿಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ hಣಣಠಿs://ಚಿಜiರಿಚಿmbಚಿvಚಿ.ಞಚಿಡಿಟಿಚಿಣಚಿಞಚಿ.gov.iಟಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ: hಣಣಠಿs://ತಿತಿತಿ.ಞbಜಛಿ.ಞಚಿಡಿಟಿಚಿಣಚಿಞಚಿ.gov.iಟಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ hಣಣಠಿs://ಞssಞಜಛಿ.ಞಚಿಡಿ.ಟಿiಛಿ.iಟಿ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ hಣಣಠಿs://bಚಿಟಿರಿಚಿಡಿಚಿಣhಚಿಟಿಜಚಿ.ಞಚಿಡಿ.ಟಿiಛಿ.iಟಿ/ ಪಡೆಯಬಹುದು.

ಫಲಾಪೇಕ್ಷಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಮತ್ತು ದಾಖಲಾತಿಗಳನ್ನು ಸುವಿದಾ ತಂತ್ರಾAಶದ ವೆಬ್‌ಸೈಟ್ ವಿಳಾಸ hಣಣಠಿs://suviಜhಚಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅಪ್‌ಲೋಡ್ ಮಾಡಿ ಅರ್ಜಿಯನ್ನು ಆಗಸ್ಟ್ ೨೦ ರೊಳಗೆ ಸಲ್ಲಿಸಿ ಒಂದು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ-೫೭೧೨೦೧ ದೂ. ೦೮೨೭೨-೨೨೮೮೫೭ನ್ನು ಸಂಪರ್ಕಿಸಬಹುದು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಚಂದ್ರಶೇಖರ್ ಅವರು ತಿಳಿಸಿದ್ದಾರೆ.

ಕ್ರೀಡಾಪಟುಗಳಿಂದ ಪ್ರಶಸ್ತಿಗೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ತೋರಿರುವ ರಾಜ್ಯದ ಹಿರಿಯ ಕ್ರೀಡಾಪಟು/ ತರಬೇತುದಾರರಾಗಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಂದ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಕರ್ನಾಟಕ ರಾಜ್ಯದ ಗ್ರಾಮೀಣ ಕ್ರೀಡೆಗಳಿಗೆ ಮತ್ತು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.

ಅದರಂತೆ ೨೦೨೧ ನೇ ಸಾಲಿನ ಹಿರಿಯ ಕ್ರೀಡಾಪಟು/ ತರಬೇತುದಾರರಾಗಿ ಸಾಧನೆ ಮಾಡಿರುವ ಹಿರಿಯ ಕ್ರೀಡಾಪಟುಗಳಿಂದ ಜೀವಮಾನ ಸಾಧನೆ ಹಾಗೂ ಗ್ರಾಮೀಣ ಕ್ರೀಡೆಗಳಿಗೆ ಮತ್ತು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ಪ್ರಶಸ್ತಿಗಾಗಿ ಸೇವಾ ಸಿಂಧು ಆನ್‌ಲೈನ್ ವೆಬ್‌ಸೈಟ್: hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಕ್ರೀಡಾಪುಟಗಳು ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ ಇಲ್ಲಿ ಪಡೆದು ಆಗಸ್ಟ್ ೧೦ ರೊಳಗೆ ಕಚೇರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂ. ೦೮೨೭೨-೨೨೮೯೮೫ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್. ಗುರುಸ್ವಾಮಿ ಕೋರಿದ್ದಾರೆ.