ಕೂಡಿಗೆ, ಜು. ೨೦: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡತ್ತೂರು ಗ್ರಾಮದ ಪಾರ್ವತಿ ಎಂಬವರ ವಾಸದ ಮನೆ ಮಳೆಯಿಂದಾಗಿ, ಸಂಪೂರ್ಣವಾಗಿ ಕುಸಿತಗೊಂಡಿದ್ದ ಸ್ಥಳಕ್ಕೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮೊದಲ ಹಂತ ಪರಿಹಾರವಾಗಿ ರೂ.೯೫ ಸಾವಿರ ಚೆಕ್ ಮತ್ತು ಅಹಾರ ಧಾನ್ಯ ಕಿಟ್ ಅನ್ನು ವಿತರಣೆ ಮಾಡಿದರು.

ಈ ಸಂದರ್ಭ ಕುಶಾಲನಗರ ತಾಲೂಕು ತಹಶೀಲ್ದಾರ್ ಪ್ರಕಾಶ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್, ಕುಶಾಲನಗರ ಬಿಜೆಪಿ ಅಧ್ಯಕ್ಷ ಉಮಾಶಂಕರ್, ಸದಸ್ಯ ದಿನೇಶ್, ಮಾಜಿ ತಾಲೂಕು ಪಂಚಾಯತ್ ಸದಸ್ಯ ಗಣೇಶ್, ಕುಮಾರಸ್ವಾಮಿ ರವಿಕುಮಾರ್, ಸಹಕಾರ ಸಂಘದ ಮಾಜಿ ನಿರ್ದೇಶಕ ಮಂಜಯ್ಯ, ಕಂದಾಯ ಪರಿವೀಕ್ಷಕ ಸಂತೋಷ್ ಲೆಕ್ಕಾಧಿಕಾರಿ ಗುರುದರ್ಶನ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.