ಸೋನಿಯಾ ಇ.ಡಿ. ವಿಚಾರಣೆ ವಿರೋಧಿಸಿ ಪ್ರತಿಭಟನೆ

ನವದೆಹಲಿ, ಜು. ೨೧: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇ.ಡಿ. ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪಕ್ಷ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರಾದ ಪಿ. ಚಿದಂಬರA, ಅಜಯ್ ಮಾಕೆನ್, ಪವನ್ ಖೇರ್, ಜೈರಾಮ್ ರಮೇಶ್, ವಿವೇಕ್ ಟಂಕಾ, ಅಶೋಕ್ ಗೆಹ್ಲೋಟ್, ಶಶಿ ತರೂರ್ ಮತ್ತಿತರನ್ನು ಬಂಧಿಸಲಾಗಿದೆ. ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಪ್ರಯೋಗಿಸಲಾಗಿದೆ. ಬಸ್‌ನಿಂದ ವೀಡಿಯೋ ಹೇಳಿಕೆ ನೀಡಿರುವ ಶಶಿ ತರೂರ್, ಗೊತ್ತಿಲ್ಲದ ಸ್ಥಳಕ್ಕೆ ನಮ್ಮನ್ನು ಕರೆದೊಯ್ಯಲಾಗುತ್ತಿದೆ. ಎರಡು ಇತರ ಪೊಲೀಸ್ ಬಸ್‌ಗಳಲ್ಲಿ ಪಕ್ಷದ ಸಂಸದರು ಹಾಗೂ ಸಹೋದ್ಯೋಗಿಗಳಿದ್ದಾರೆ. ಸರ್ಕಾರ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಈ ರೀತಿಯ ಸರ್ಕಾರದ ಕಾರ್ಯವೈಖರಿಯಿಂದ ಅತ್ಯಂತ ನಿರಾಸೆಯಾಗಿದೆ ಎಂದಿದ್ದಾರೆ. ದೇಶದಲ್ಲಿ ಕೇಂದ್ರದ ಏಜೆನ್ಸಿಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ನಡೆಸುವುದು ನಮ್ಮ ಹಕ್ಕು ಆದರೆ, ಅದನ್ನು ಹತ್ತಿಕ್ಕಲಾಗುತ್ತಿದೆ ಎಂದು ಸಚಿನ್ ಪೈಲಟ್ ಆರೋಪಿಸಿದ್ದಾರೆ. ಪಕ್ಷದ ಕೇಂದ್ರ ಕಚೇರಿ ಹೊರಗಡೆ ಪಕ್ಷದ ಸಂಸದರು ಹಾಗೂ ಸಿಡಬ್ಲೂö್ಯಸಿ ಸದಸ್ಯರನ್ನು ಬಂಧಿಸಲಾಗಿದೆ ಎಂದು ಪಕ್ಷದ ವಕ್ತಾರ ಜೈರಾಂ ರಮೇಶ್ ಟ್ವೀಟ್ ಮಾಡಿದ್ದಾರೆ. ಇದಕ್ಕೂ ಮುನ್ನ ಅಕ್ಬರ್ ರಸ್ತೆಯ ಪಕ್ಷದ ಕೇಂದ್ರ ಕಚೇರಿ ಸುತ್ತಮುತ್ತ ಪ್ರತಿಭಟನೆ ಹಿನ್ನೆಲೆ ಬ್ಯಾರಿಕೇಡ್ ಹಾಕಲಾಗಿತ್ತು. ಸೋನಿಯಾ ಗಾಂಧಿ ಇ.ಡಿ. ವಿಚಾರಣೆ ವಿರೋಧಿಸಿದ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಮುರಿದು ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನ ಇ.ಡಿ. ಕಚೇರಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಕಾರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಮಾಣ ವಚನ ಸ್ವೀಕರಿಸಿದ ಡಾ. ವೀರೇಂದ್ರ ಹೆಗ್ಗಡೆ

ನವದೆಹಲಿ, ಜು. ೨೧: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಯಲ್ಲಿಂದು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದರು. ಭಾರತ ಸಂವಿಧಾನದಲ್ಲಿ ನಿಜವಾದ ನಂಬಿಕೆ ಹೊಂದಿ, ತಮ್ಮ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುವೆ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು. ಇದಕ್ಕೂ ಮುನ್ನ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿದ ನಂತರ ಸಂಸತ್ ಭವನಕ್ಕೆ ಆಗಮಿಸಿದ ವೀರೇಂದ್ರ ಹೆಗ್ಗಡೆ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಆತ್ಮೀಯವಾಗಿ ಸ್ವಾಗತ ನೀಡಿ ಬರಮಾಡಿಕೊಂಡರು. ಈ ವೇಳೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳದ ಧರ್ಮಾಧಿಕಾರಿಯಾಗಿರುವ ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಯಲ್ಲಿ ನೋಡಲು ಅವಕಾಶ ಸಿಕ್ಕಿರುವುದು ಸಂತಸವನ್ನುAಟು ಮಾಡಿದೆ ಎಂದರು.

ಆವಿಷ್ಕಾರ ಸೂಚ್ಯಂಕ ಪಟ್ಟಿಯಲ್ಲಿ ರಾಜ್ಯಕ್ಕೆ ೩ನೇ ಸ್ಥಾನ

ನವದೆಹಲಿ, ಜು. ೨೧: ನೀತಿ ಆಯೋಗ ಗುರುವಾರ ಪ್ರಕಟಿಸಿರುವ ಅಖಿಲ ಭಾರತ ಆವಿಷ್ಕಾರ ಸೂಚ್ಯಂಕ ಪಟ್ಟಿ-೨೦೨೧ ರಲ್ಲಿ ಕರ್ನಾಟಕ ಸತತ ಮೂರನೇ ಬಾರಿಗೆ ಅಗ್ರಸ್ಥಾನ ಪಡೆದಿದೆ. ತೆಲಂಗಾಣ ಮತ್ತು ಹರಿಯಾಣ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿವೆ. ನೀತಿ ಆಯೋಗ ಬಿಡುಗಡೆ ಮಾಡಿರುವ ಮೂರನೇ ಆವಿಷ್ಕಾರ ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕ, ತೆಲಂಗಾಣ ಮತ್ತು ಹರಿಯಾಣ ಪ್ರಮುಖ ರಾಜ್ಯಗಳ ಪೈಕಿ ಮೊದಲ ಮೂರು ಸ್ಥಾನಗಳನ್ನು ಪಡೆದಿವೆ. ನೀತಿ ಆಯೋಗದ ಆವಿಷ್ಕಾರ ಸೂಚ್ಯಂಕ ಪಟ್ಟಿಯು ರಾಷ್ಟಿçÃಯ ಮಟ್ಟದಲ್ಲಿ ನಾವೀನ್ಯತೆ ಸಾಮರ್ಥ್ಯಗಳು ಮತ್ತು ಪರಿಸರ ವ್ಯವಸ್ಥೆಗಳನ್ನು ಪರಿಶೀಲಿಸುತ್ತದೆ. ಆಯೋಗದ ಉಪಾಧ್ಯಕ್ಷ ಸುಮನ್ ಬೆರಿ ಅವರು ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪರಮೇಶ್ವರನ್ ಅಯ್ಯರ್ ಅವರ ಸಮ್ಮುಖದಲ್ಲಿ ಆವಿಷ್ಕಾರ ಸೂಚ್ಯಂಕ ಪಟ್ಟಿ ಬಿಡುಗಡೆ ಮಾಡಿದ್ದು, ಈ ಸೂಚ್ಯಂಕವನ್ನು ಜಾಗತಿಕ ಆವಿಷ್ಕಾರ ಸೂಚ್ಯಂಕದ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಗೌತಮ್ ಅದಾನಿ ವಿಶ್ವದ ನಾಲ್ಕನೇ ಶ್ರೀಮಂತ

ನವದೆಹಲಿ, ಜು. ೨೧: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರು ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಗುರುವಾರ ೧೧೫.೫ ಶತಕೋಟಿ ಡಾಲರ್‌ಗಳ ಅಂದಾಜು ಆಸ್ತಿಯೊಂದಿಗೆ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರನ್ನು ಗೌತಮ್ ಅದಾನಿ ಅವರು ಹಿಂದಿಕ್ಕಿ ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿ ಸ್ಥಾನ ಪಡೆದುಕೊಂಡಿದ್ದಾರೆ. ಫೋರ್ಬ್ಸ್ನ ರಿಯಲ್-ಟೈಮ್ ಬಿಲಿಯನೇರ್‌ಗಳ ಪಟ್ಟಿಯ ಪ್ರಕಾರ, ಬಿಲ್ ಗೇಟ್ಸ್ ಅವರ ನಿವ್ವಳ ಮೌಲ್ಯವು ಡಾಲರ್ ೧೦೪.೬ ಶತಕೋಟಿಯಷ್ಟಿದೆ. ಬಿಲ್ ಗೇಟ್ಸ್ ತನ್ನ ಸಂಪತ್ತಿನಿAದ ೨೦ ಶತಕೋಟಿ ಡಾಲರ್ ಅನ್ನು ತನ್ನ ಲಾಭರಹಿತ ಸಂಸ್ಥೆಗೆ ದೇಣಿಗೆ ನೀಡುವುದಾಗಿ ಘೋಷಿಸಿದ ನಂತರ ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದಾರೆ.

ಹಾಸ್ಟೆಲ್ ಕೋಣೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು, ಜು. ೨೧: ಜೆಎಸ್‌ಎಸ್ ಅಕಾಡೆಮಿ ಆಫ್ ಟೆಕ್ನಿಕಲ್ ಎಜುಕೇಶನ್ ಸಂಸ್ಥೆಯಲ್ಲಿ ಮೂರನೇ ವರ್ಷದ ಇಂಜಿನಿಯರಿAಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ತನ್ನ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬುಧವಾರ ಮಧ್ಯಾಹ್ನ ೧.೪೦ರ ಸುಮಾರಿಗೆ ವಿದ್ಯಾರ್ಥಿನಿ ಕೆ. ಶಿವಾನಿ (೨೧) ಪರೀಕ್ಷೆಗೆ ಹಾಜರಾಗದ ಹಿನ್ನೆಲೆ ಕಾಲೇಜು ಹಾಸ್ಟೆಲ್ ವಾರ್ಡನ್ ಮತ್ತು ಬೋಧಕರು ವಸತಿ ನಿಲಯಕ್ಕೆ ತೆರಳಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ರೂಮಿನ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಎಷ್ಟೇ ಕರೆದರೂ ಯಾವುದೇ ಪ್ರತಿಕ್ರಿಯೆ ಬಾರಲಿಲ್ಲ. ವೆಂಟಿಲೇಟರ್ ಮೂಲಕ ಪರೀಕ್ಷಿಸುವಂತೆ ಹೆಲ್ಪರ್‌ಗೆ ವಾರ್ಡನ್ ಸೂಚಿಸಿದರು. ಈ ವೇಳೆ ಆಕೆ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡಿರುವುದು ಕಂಡು ಬಂದಿದೆ.

ಗೋಡೆ ಕುಸಿದು ನಾಲ್ವರು ವಲಸೆ ಕಾರ್ಮಿಕರು ದುರ್ಮರಣ

ಬೆಂಗಳೂರು, ಜು. ೨೧: ಭಾರೀ ಮಳೆಗೆ ನಿರ್ಮಾಣ ಹಂತದ ಅಪಾರ್ಟ್ಮೆಂಟ್‌ನ ಗೋಡೆ ಕುಸಿದು ನಾಲ್ವರು ವಲಸೆ ಕಾರ್ಮಿಕರು ದುರ್ಮರಣ ಹೊಂದಿರುವ ಘಟನೆ ಹೊಸಕೋಟೆಯ ತಿರುಮಲ ಶೆಟ್ಟಿಯಲ್ಲಿ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಮೃತ ಹಾಗೂ ಗಾಯಗೊಂಡ ಕಾರ್ಮಿಕರು ಉತ್ತರ ಭಾರತದ ಮೂಲದವರು ಎನ್ನಲಾಗಿದೆ. ತಡೆಗೋಡೆ ಪಕ್ಕದಲ್ಲಿ ಹಾಕಲಾಗಿದ್ದ ಶೆಡ್‌ನಲ್ಲಿ ಮಲಗಿದ್ದ ವೇಳೆ ಅವರ ಮೇಲೆ ಗೋಡೆ ಕುಸಿದ ಈ ದುರ್ಘಟನೆ ಸಂಭವಿಸಿದೆ.

ಜ್ಞಾನವಾಪಿ ಮಸೀದಿ ವಿವಾದ : ವಿಚಾರಣೆ ಮುಂದೂಡಿಕೆ

ನವದೆಹಲಿ, ಜು. ೨೧: ತೀವ್ರ ಕುತೂಹಲ ಕೆರಳಿಸಿರುವ ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬAಧಿಸಿದAತೆ ಸುಪ್ರೀಂ ಕೋರ್ಟ್ ಕಾದುನೋಡುವ ನಿರ್ಧಾರಕ್ಕೆ ಮುಂದಾಗಿದ್ದು, ಮಸೀದಿ ಸ್ಥಳ ಸಮೀಕ್ಷೆಗೆ ಕೋರ್ಟ್ ಕಮೀಷನರ್ ನೇಮಕ ಮಾಡಿದ ವಾರಾಣಸಿ ಜಿಲ್ಲಾ ನ್ಯಾಯಾಧೀಶರ ಆದೇಶವನ್ನು ಎತ್ತಿ ಹಿಡಿದಿದೆ. ಜ್ಞಾನವಾಪಿ ಮಸೀದಿ ಸ್ಥಳ ಸಮೀಕ್ಷೆಗೆ ಕೋರ್ಟ್ ಕಮಿಷನರ್ ನೇಮಕ ಮಾಡಿದ ವಾರಾಣಸಿ ಜಿಲ್ಲಾ ನ್ಯಾಯಾಧೀಶರ ಆದೇಶವನ್ನು ಎತ್ತಿ ಹಿಡಿದ ಅಲಹಾಬಾದ್ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಜ್ಞಾನವಾಪಿ ಮಸೀದಿ ಸಮಿತಿ ಸಲ್ಲಿಸಿರುವ ಅರ್ಜಿಯನ್ನು ಅಕ್ಟೋಬರ್ ಮೊದಲ ವಾರ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ಗುರುವಾರ ಹೇಳಿದೆ. ಹಿಂದೂ ಭಕ್ತರು ಸಲ್ಲಿಸಿರುವ ಸಿವಿಲ್ ಮೊಕದ್ದಮೆಯನ್ನು ಪ್ರಶ್ನಿಸಿ ಜ್ಞಾನವಾಪಿ ಮಸೀದಿ ಸಮಿತಿಯು ಅರ್ಜಿಯಲ್ಲಿ ಎತ್ತಿರುವ ಆಕ್ಷೇಪಣೆಗೆ ಸಂಬAಧಿಸಿ ವಾರಾಣಸಿಯ ಜಿಲ್ಲಾ ನ್ಯಾಯಾಧೀಶರು ಕೈಗೊಳ್ಳುವ ತೀರ್ಮಾನಕ್ಕೆ ಎದುರು ನೋಡಲಾಗುತ್ತಿದೆ ಎಂದು ಹೇಳಿದೆ.

ರಾನಿಲ್ ವಿಕ್ರಮ ಸಿಂಘೆ ಪ್ರಮಾಣ ವಚನ ಸ್ವೀಕಾರ

ಕೊಲಂಬೊ, ಜು. ೨೧: ಶ್ರೀಲಂಕಾದ ಅಧ್ಯಕ್ಷರಾಗಿ ರಾನಿಲ್ ವಿಕ್ರಮ ಸಿಂಘೆ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ತಾ. ೨೦ ರಂದು ಬುಧವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲ್ಲುವ ಮುಖೇನ ರಾನಿಲ್ ವಿಕ್ರಮ ಸಿಂಘೆ ಶ್ರೀಲಂಕಾದ ಒಂಬತ್ತನೇ ಅಧ್ಯಕ್ಷರಾಗಿ ಹೊರಹೊಮ್ಮಿದ್ದಾರೆ. ರಾನಿಲ್ ವಿಕ್ರಮ ಸಿಂಘೆ ಅವರು ಎದುರಾಳಿಗಳ ಎದುರು ಸುಮಾರು ೧೩೪ ಮತಗಳನ್ನು ಗಳಿಸಿ ಜಯಗಳಿಸಿದ್ದರು. ರಾನಿಲ್ ವಿಕ್ರಮ ಸಿಂಘೆ ಅವರ ವಿರುದ್ಧ ಭಾರೀ ಪ್ರತಿಭಟನೆಗಳ ನಡುವೆಯೇ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದರು.